ಪ್ರಧಾನಿ ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ ಮಾಡಲಿ: ಪರಮೇಶ್ವರ್
Team Udayavani, Jun 22, 2017, 3:45 AM IST
ಬೆಂಗಳೂರು: ಸತತ ಬರಗಾಲದಿಂದ ಕಂಗೆಟ್ಟಿರುವ ರಾಜ್ಯದ ರೈತರ ಸಾಲ ಮನ್ನಾ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ನೆರವಿಗೆ ಧಾವಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ಸಾಲ ಮನ್ನಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಆಗ್ರಹಿಸಿದ್ದಾರೆ. ರಾಜ್ಯದ ರೈತರ ಕಷ್ಟಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಪರಮೇಶ್ವರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು 72 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದರು. ಅದೇ ರೀತಿ ಇಂದಿನ ಪ್ರಧಾನಿ ನರೇಂದ್ರ ಮೋದಿ ಎಲ್ಲ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಬಿಜೆಪಿ ನಾಯಕರಾದ ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ರಾಜ್ಯದ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವೊಲಿಸಬೇಕು ಎಂದು ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರ ಬರ ಪರಿಹಾರ ನೀಡುವಲ್ಲಿ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಅದನ್ನು ಲೆಕ್ಕಿಸದೇ ರೈತರ ನೆರವಿಗೆ ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.