ಬಿಜೆಪಿ ಸೇರ್ಪಡೆಯಾದ ಕೆ.ಪಿ.ನಂಜುಂಡಿ; ರಘು ಆಚಾರ್‌ ವಿರುದ್ಧ ಕಿಡಿ 


Team Udayavani, Jun 22, 2017, 2:48 PM IST

4.jpg

ಬೆಂಗಳೂರು : ವಿಧಾನ ಪರಿಷತ್‌ ಸದಸ್ಯ ಸ್ಥಾನ ಕೈತಪ್ಪಿದ್ದರಿಂದ ಅಸಮಧಾನಗೊಂಡು ಕಾಂಗ್ರೆಸ್‌ ಪಕ್ಷ ತೊರೆದಿದ್ದ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ, ಉದ್ಯಮಿ ಕೆ.ಪಿ.ನಂಜುಂಡಿ  ಗುರುವಾರ ಧಿಡೀರ್‌ ಬಿಜೆಪಿ ಸೇರ್ಪಡೆಯಾಗಿರುವುದಾಗಿ ಘೋಷಿಸಿದ್ದಾರೆ.

 ವಿಶ್ವಕರ್ಮ ಸಮಾಜದ ಸ್ವಾಮೀಜಿಗಳೊಂದಿಗೆ ಮಾತುಕತೆ ನಡೆಸಿತ ಬಳಿಕ ಡಾಲರ್ಸ್‌ ಕಾಲೋನಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿ ಪಕ್ಷ ಸೇರ್ಪಡೆಯಾಗಿದ್ದಾರೆ. 

ಭೇಟಿಯ ಬಳಿಕ ಮಾತನಾಡಿದ ನಂಜುಂಡಿ ‘ನಾನು ಈಗಿಂದಲೇ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ,ಯಾವುದೇ ಷರತ್ತುಗಳಿಲ್ಲದೆ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ . ಯಾವ ಕೆಲಸ ಕೊಟ್ಟರೂ ಮಾಡುತ್ತೇನೆ. ಯಡಿಯೂರಪ್ಪ ಸತ್ಯ ಹರಿಶ್ಚಂದ್ರ ಇದ್ದಹಾಗೆ. ಕೊಟ್ಟ ಮಾತನ್ನು ಈಡೇರಿಸದೇ ಉಳಿಯುವುದಿಲ್ಲ’ ಎಂದರು. 

ಗುಳ್ಳೆ ನರಿಗೂ ಹುಲಿಗೂ ಹೋಲಿಕೆ ಬೇಡ 
ಕಾಂಗ್ರೆಸ್‌ ವಿಧಾನಪರಿಷತ್‌ ಸದಸ್ಯ ರಘು ಆಚಾರ್‌ ವಿರುದ್ಧ ಕಿಡಿ ಕಾರಿದ ನಂಜುಂಡಿ ‘ನಮ್ಮ ಸಮಾಜದ ಸ್ವಾಮೀಜಿಗಳಿಗೆ ಬೆದರಿಕೆ ಹಾಕಿದ್ದಾರೆ. ಗುಳ್ಳೆ ನರಿಗೂ ಹುಲಿಗೂ ಹೋಲಿಕೆ ಬೇಡ. ಅವರು ಯಾರನ್ನು ಕರೆದುಕೊಂಡು ಬಂದು ಕಾಂಗ್ರೆಸ್‌ ಗೆಲ್ಲಿಸುತ್ತಾರೆ ನೋಡೋಣ’ ಎಂದರು. 

ಬಿಎಸ್‌ವೈ ಪ್ರತಿಕ್ರಿಯೆ ನೀಡಿ ‘ನಂಜುಂಡಿ ಈ ಕ್ಷಣದಿಂದ ಬಿಜೆಪಿ ಸೇರ್ಪಡೆಯಾಗಿದ್ದು ಸೂಕ್ತ ಸ್ಥಾನಮಾನ ನೀಡುತ್ತೇವೆ. ಅವರ ಸೇರ್ಪಡೆಯಿಂದಾಗಿ ವಿಶ್ವಕರ್ಮ ಸಮಾಜ ನಮ್ಮೊಂದಿಗೆ ಇರಲಿದೆ’ ಎಂದರು.
 

ರಘು ಆಚಾರ್‌ ತಿರುಗೇಟು 

ಮೈಸೂರಿನಲ್ಲಿ ನಂಜುಂಡಿ  ಹೇಳಿಕೆಗೆ ತಿರುಗೇಟು ನೀಡಿದ ರಘು ಆಚಾರ್‌ ತೀವ್ರ ವಾಗ್ಧಾಳಿ ನಡೆಸಿದರು. ನಂಜುಂಡಿಗೆ ಪರಿಷತ್‌ ಸದಸ್ಯನಾಗಿ ಆಯ್ಕೆ ಯಾಗುವುದು ಸಾಧ್ಯವಾಗಲಿಲ್ಲ. ಹೀಗಾಗಿ ಜೈಲಿಗೆ ಹೋಗಿ ಬಂದವರೊಡನೆ ಸೇರಿಕೊಂಡು ಎನೇನೋ ಮಾತನಾಡುತ್ತಿದ್ದಾರೆ. ನಾನು ಚುನಾವಣೆಗೆ ಸ್ಫರ್ಧಿಸಿ ಗೆದ್ದು ಬಂದವ ಸಮಾಜ ನನ್ನೊಂದಿಗೆ ಇದೆ. ಯಾವುದೇ ಸ್ವಾಮೀಜಿಗಳಿಗೆ ಬೆದರಿಕೆಯನ್ನು ನಾನು ಹಾಕಿಲ್ಲ. ನಮ್ಮ ಸಮಾಜದ ಸ್ವಾಮೀಜಿಗಳು ಎಂದಿಗೂ ವ್ಯಕ್ತಿಯ ಪರ ನಿಲ್ಲುವುದಿಲ್ಲ ,ಸಮಾಜದ ಪರವಾಗಿ ನಿಲ್ಲುತ್ತಾರೆ ಎಂದರು. 

ನಂಜುಂಡಿಗೆ ತಾಕತ್ತಿದ್ದರೆ 2018 ರ ಚುನಾವಣೆಯಲ್ಲಿ ನನ್ನ ವಿರುದ್ಧ ಸ್ಫರ್ಧಿಸಲಿ ಎಂದು ಸವಾಲು ಹಾಕಿದರು. 
 

ಟಾಪ್ ನ್ಯೂಸ್

UK ಚೆವನಿಂಗ್‌-ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಒಪ್ಪಂದಕ್ಕೆ ಸಹಿ

UK ಚೆವನಿಂಗ್‌-ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಒಪ್ಪಂದಕ್ಕೆ ಸಹಿ

Vishwanath-Rao

Kaup: ಸಹಕಾರಿ ಧುರೀಣ ಬಾಲಂ ವಿಶ್ವನಾಥ್ ರಾವ್ ಪಣಿಯೂರು ನಿಧನ

1-bg

Zakir Hussain ; ಸರಸ್ವತಿ, ಗಣಪತಿಯ ಆರಾಧಕರಾಗಿದ್ದರು ತಬಲಾ ಮಾಂತ್ರಿಕ

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

UK ಚೆವನಿಂಗ್‌-ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಒಪ್ಪಂದಕ್ಕೆ ಸಹಿ

UK ಚೆವನಿಂಗ್‌-ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಒಪ್ಪಂದಕ್ಕೆ ಸಹಿ

Vishwanath-Rao

Kaup: ಸಹಕಾರಿ ಧುರೀಣ ಬಾಲಂ ವಿಶ್ವನಾಥ್ ರಾವ್ ಪಣಿಯೂರು ನಿಧನ

1-bg

Zakir Hussain ; ಸರಸ್ವತಿ, ಗಣಪತಿಯ ಆರಾಧಕರಾಗಿದ್ದರು ತಬಲಾ ಮಾಂತ್ರಿಕ

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.