ರಾಜ್ಯಾದ್ಯಂತ ಡಯಲ್ 100, ಠಾಣೆಗಳಲ್ಲಿ ಸಿಸಿ ಕೆಮರಾ
Team Udayavani, Jun 23, 2017, 12:58 AM IST
ಬೆಂಗಳೂರು: ಪೊಲೀಸ್ ಇಲಾಖೆಯ ಡಯಲ್ 100 ಸೌಲಭ್ಯವನ್ನು 30 ಜಿಲ್ಲೆಗಳಿಗೆ ವಿಸ್ತರಿಸಲು ಮತ್ತು ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿ ಟಿವಿ ಕೆಮರಾ ಅಳವಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ರಾಜ್ಯಾದ್ಯಂತ ಡಯಲ್-100 ತುರ್ತು ಸ್ಪಂದನ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿ 30 ಜಿಲ್ಲೆಗಳಿಗೆ ವಿಸ್ತರಿಸಲು 13.73 ಕೋಟಿ ರೂ. ವೆಚ್ಚ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಪೈಕಿ 8.73 ಕೋಟಿ ರೂ. ರಾಷ್ಟ್ರೀಯ ತುರ್ತು ಸ್ಪಂದನಾ ನಿಧಿಯಿಂದ ಮತ್ತು ಉಳಿದ 5 ಕೋಟಿ ರೂ. ರಾಜ್ಯ ಸರಕಾರ ಭರಿಸಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ. ಬಿ. ಜಯಚಂದ್ರ ಸಂಪುಟ ಸಭೆಯ ವಿವರ ನೀಡಿದರು. ಅದೇ ರೀತಿ ಪೊಲೀಸ್ ಠಾಣೆಗಳಲ್ಲಿ ಪೊಲೀಸರು ತಮ್ಮಲ್ಲಿಗೆ ಬರುವವರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ ಎಂಬ ವ್ಯಾಪಕ ದೂರಿನ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗಳನ್ನು ಇನ್ನಷ್ಟು ಪಾರದರ್ಶಕವಾಗಿ ರೂಪಿಸಲು ರಾಜ್ಯಾದ್ಯಂತ 774 ಪೊಲೀಸ್ ಠಾಣೆಗಳಲ್ಲಿ ಸಿಸಿ ಟಿವಿ ಕೆಮರಾ ಅಳವಡಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಒಟ್ಟು 14.52 ಕೋಟಿ ರೂ. ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.