ಪ್ರಚೋದನಕಾರಿ ಭಾಷಣಕಾರರನ್ನು ಮಟ್ಟ ಹಾಕಿ
Team Udayavani, Jun 23, 2017, 4:04 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿ ಸಾಮರಸ್ಯಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡುವವರನ್ನು ಕಾನೂನು ರೀತಿಯಲ್ಲಿ ಮಟ್ಟ ಹಾಕುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿರುವುದಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಯಾವುದೇ ಧರ್ಮ, ಸಂಘಟನೆಯವರು ಕೂಡ ಪ್ರಚೋದನಕಾರಿ ಭಾಷಣ ಮಾಡಬಾರದು. ಆಗಾಗ ನಡೆದ ಶಾಂತಿಸಭೆಗಳಲ್ಲಿ ಈ ಬಗ್ಗೆ ಸ್ಪಷ್ಟ ಸೂಚನೆ ನೀಡಿದರೂ ಪ್ರಚೋದನಕಾರಿ ಭಾಷಣಗಳು ಮುಂದು ವರಿ ಯುತ್ತಲೇ ಇವೆ. ಧಾರ್ಮಿಕ ಮುಖಂಡರು ಧರ್ಮ ಕಾರ್ಯದಲ್ಲಿ ಇರಬೇಕೇ ಹೊರತು, ರಾಜಕೀಯ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಸಮಾಜದ ದೃಷ್ಟಿಯಿಂದ ಹಿತವಲ್ಲ ಹಾಗೂ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಹಲವು ಪ್ರಕರಣಗಳು ದ.ಕ. ಜಿಲ್ಲೆಯಲ್ಲಿ ದಾಖಲಾಗಿದ್ದರೂ, ಕೆಲವೇ ದಿನಗಳಲ್ಲಿ ಅವುಗಳಿಗೆ ಪೊಲೀಸರು ಬಿ ರಿಪೋರ್ಟ್ ನೀಡುತ್ತಿರುವುದು ಪ್ರಶ್ನಾರ್ಹ ಎಂದರು.
ರೈ ನಡೆ ಸರಿಯಾಗಿದೆ
ದ.ಕ. ಜಿಲ್ಲೆಯ ಕಾನೂನು ಸುವ್ಯವಸ್ಥೆ ನೋಡಿಕೊಳ್ಳ ಬೇಕಾದ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಕಾನೂನು ಸುವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದನ್ನೇ ದೊಡ್ಡ ಅಪರಾಧ ಎಂದು ಬಿಂಬಿಸುವ ಪ್ರಯತ್ನ ಪ್ರಸ್ತುತ ನಡೆಯುತ್ತಿದೆ. ಉಸ್ತುವಾರಿ ಮಂತ್ರಿಗಳು ಅಧಿಕಾರಿಗಳಿಗೆ ಹೇಳಿದ್ದೇ ತಪ್ಪು ಎಂಬ ರೀತಿಯಲ್ಲಿ ಬಿಂಬಿಸುತ್ತಿರುವುದು ಖಂಡನೀಯ. ಮಂತ್ರಿಗಳಿಗೆ ಉನ್ನತ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲು ಅವಕಾಶಗಳಿವೆ ಎಂದು ಐವನ್ ಸಮರ್ಥಿಸಿಕೊಂಡರು.
ಕೇಂದ್ರದಿಂದ ರೈತರ ಸಾಲ ಮನ್ನಾ ಮಾಡಿಸಲಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಸಾಲವನ್ನು ಮನ್ನಾ ಮಾಡುವ ಮೂಲಕ ರೈತರ ಕಂಗಳಲ್ಲಿ ಹೊಸ ಬೆಳಕು ಮೂಡಿಸಿದ್ದಾರೆ. ಆದರೆ ಇದು ಬಿಜೆಪಿಯ ಹೋರಾಟದಿಂದಾಗಿ ಸಾಧ್ಯವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳುತ್ತಿದ್ದಾರೆ. ಅವರಿಗೆ ನಿಜಕ್ಕೂ ರೈತರ ಬಗ್ಗೆ ಕಾಳಜಿ ಇದ್ದರೆ, ರೈತರ ಸಾಲವನ್ನು ಕೇಂದ್ರ ಸರಕಾರ ಮನ್ನಾ ಮಾಡುವ ಬಗ್ಗೆ ಹೋರಾಟ ನಡೆಸಿ, ರೈತರಿಗೆ ಸಹಾಯ ಮಾಡುವ ತಾಕತ್ತು ಪ್ರದರ್ಶಿಸಲಿ ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮನಪಾ ಉಪಮೇಯರ್ ರಜನೀಶ್, ಸ್ಥಾಯೀ ಸಮಿತಿ ಅಧ್ಯಕ್ಷರಾದ ಪ್ರತಿಭಾ ಕುಳಾç, ನಾಗವೇಣಿ, ಮುಖಂಡರಾದ ಮನುರಾಜ್, ನಝೀರ್ ಬಜಾಲ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.