ಬಂಟ್ವಾಳ: ಬಿಗಿ ಬಂದೋಬಸ್ತ್

Team Udayavani, Jun 23, 2017, 4:55 PM IST

2206VTL-Police.jpg

ಬಂಟ್ವಾಳ:  ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಬುಧವಾರ ಬಂದ್‌ ಆಗಿದ್ದ ಬಂಟ್ವಾಳ ಪರಿಸರದಲ್ಲಿ ಗುರುವಾರ ಶಾಂತಿ ನೆಲೆಸಿದೆ. ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ವಾಹನ ಸಂಚಾರ ಎಂದಿನಂತಿತ್ತು. ಹಿರಿಯ ಪೊಲೀಸ್‌ ಅಧಿಕಾರಿಗಳು ತಾಲೂಕಿನ ಶಾಂತಿ ಸುವ್ಯವಸ್ಥೆಯ ಅವಲೋಕನ ನಡೆಸಿದ್ದಾರೆ. ನಿಷೇಧಾಜ್ಞೆಯನ್ನು ಜಿಲ್ಲೆಯಾದ್ಯಂತಕ್ಕೆ ವಿಸ್ತರಿಸಲಾಗಿದೆ.

ಎಡಿಜಿಪಿ ಆಲೋಕ್‌ ಮೋಹನ್‌, ದ.ಕ. ಜಿಲ್ಲಾ ನೂತನ ಎಸ್‌ಪಿ ಸುಧೀರ್‌ ಕುಮಾರ್‌ ಸಿ.ಎಚ್‌., ನಿರ್ಗಮನ ಎಸ್‌ಪಿ ಭೂಷಣ್‌ ಜಿ. ಬೊರಸೆ, ಹೆಚ್ಚುವರಿ ಎಸ್‌ಪಿ ಚಿಕ್ಕಮಗಳೂರಿನ ಅಣ್ಣಾಮಲೈ, ಹೆಚ್ಚುವರಿ ಡಿವೈಎಸ್‌ಪಿ ವಿಷ್ಣುವರ್ಧನ್‌ ಸಹಿತ ಉನ್ನತ ಪೊಲೀಸ್‌ ಅಧಿಕಾರಿಗಳು ಮತ್ತು ಬಂಟ್ವಾಳದಲ್ಲಿ ಈ ಹಿಂದೆ ವೃತ್ತ ನಿರೀಕ್ಷಕ ರಾಗಿದ್ದು ಮಂಗಳೂರಿಗೆ ವರ್ಗಾವಣೆಗೊಂಡಿರುವ ಕೆ.ಯು. ಬೆಳ್ಳಿಯಪ್ಪ ಅವರು ಬಂಟ್ವಾಳದಲ್ಲಿಯೇ ಮೊಕ್ಕಾಂ ಇದ್ದು ಪರಿಸ್ಥಿತಿ ಮೇಲೆ ನಿಗಾ ಇರಿಸಿದ್ದಾರೆ.

ಆಯಕಟ್ಟಿನ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮುಂದುವರಿದಿದೆ. ಚಿಕ್ಕಮಗಳೂರಿನಿಂದ ಇನ್ನಷ್ಟು ಪೊಲೀಸರನ್ನು ಕರೆಸಲಾಗಿದೆ. ರಾ.ಹೆದ್ದಾರಿಯಲ್ಲಿ ವಾಹನ ಸಂಚಾರ ಎಂದಿನಂತಿದೆ. ಆಟೋ ರಿಕ್ಷಾಗಳು,  ಖಾಸಗಿ – ಸರಕಾರಿ ಬಸ್‌ಗಳ ಸಂಚಾರ ಸಹಜವಾಗಿತ್ತು. ಜನಸಂಚಾರ ಮಾತ್ರ ವಿರಳವಾಗಿತ್ತು. ಅಂಗಡಿಗಳಿಗೆ ಎಂದಿನ ವ್ಯಾಪರ ಇರಲಿಲ್ಲ ಎಂದು ವರ್ತಕರು ತಿಳಿಸಿದ್ದಾರೆ. 

ಹಲವು ಮಂದಿ ವಶಕ್ಕೆ
ಎಸ್‌ಡಿಪಿಐ ಮುಖಂಡ ಅಶ್ರಫ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಹಲವು ಮಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ವಿಚಾರಣೆಯನ್ನು ಹಿರಿಯ ಅಧಿಕಾರಿಗಳೇ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ.

ಮಹಮ್ಮದ್‌ ಅಶ್ರಫ್‌ ಕೊಲೆ: ಸುಳಿವು ಲಭ್ಯ ?
ಮಂಗಳೂರು:
ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಬೆಂಜನಪದವಿನಲ್ಲಿ ಬುಧವಾರ ಬೆಳಗ್ಗೆ ಆಟೋ ಚಾಲಕ, ಎಸ್‌ಡಿಪಿಐ ಅಮ್ಮುಂಜೆ ವಲಯ ಅಧ್ಯಕ್ಷ ಮಲ್ಲೂರು ಕಲಾಯಿಯ ಮಹಮ್ಮದ್‌ ಅಶ್ರಫ್‌(35) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಸುಳಿವು, ಬಲವಾದ ಸಾಕ್ಷé ದೊರೆತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಅಶ್ರಫ್‌ ಅವರು ಬುಧವಾರ ಮಧ್ಯಾಹ್ನ ಬಾಡಿಗೆಗೆಂದು ಬೆಂಜನಪದವಿಗೆ ತೆರಳಿದ್ದಾಗ ಮೂರು ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳ ತಂಡ ತಲವಾರಿನಿಂದ ಯದ್ವಾತದ್ವ ಕಡಿದು ಬರ್ಬರವಾಗಿ ಹತ್ಯೆ ಮಾಡಿತ್ತು. ಈ ಸ್ಥಳದಲ್ಲಿ ಪೊಲೀಸರ ತಂಡ ಗುರುವಾರವೂ ಸ್ಥಳ ಪರಿಶೀಲನೆ ನಡೆಸಿದ್ದು, ಹಲವು ಮಾಹಿತಿಗಳನ್ನು ಕಲೆ ಹಾಕಿದೆ. ಅಲ್ಲದೆ ಕೆಲವು ಮೊಬೈಲ್‌ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಮಹಮ್ಮದ್‌ ಅಶ್ರಫ್‌ ಅವರನ್ನು ಬಾಡಿಗೆಗೆ ಕರೆದ ಶೀನ ಪೂಜಾರಿ ಅವರನ್ನು ಠಾಣೆಗೆ ಕರೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಸಾಕ್ಷ್ಯಾಧಾರಗಳ ಮೇಲೆ ಆರೋಪಿಗಳ ಜಾಡು ಹುಡುಕುತ್ತಿರುವ ಪೊಲೀಸರು ಒಂದೆರಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.