ರಸ್ತೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಲು ನಿರ್ಧಾರ


Team Udayavani, Jun 24, 2017, 11:40 AM IST

mys5.jpg

ತಿ.ನರಸೀಪುರ: ಪರಿವರ್ತಿತ ಪುರಸಭೆಯ ಎಲ್ಲಾ ರಸ್ತೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಲು ಪುರಸಭೆ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಯಿತು. ಪಟ್ಟಣದ ಪುರಸಭೆ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮೇಲ್ದಜೇìಗೇರಿದ ಪುರಸಭೆಯಲ್ಲಿ ಸೇರ್ಪಡೆಗೊಂಡಿರುವ ಭೈರಾಪುರ ಹಾಗೂ ಆಲಗೂಡು ಗ್ರಾಪಂ ವ್ಯಾಪ್ತಿಯ ಬಡಾವಣೆಗಳ ರಸ್ತೆಗಳ ಅಭಿವೃದ್ಧಿಗೆ ಸರ್ಕಾರದ ವಿಶೇಷ ಅನುದಾನ ಮಂಜೂರು ಮಾಡುವ ಹಿನ್ನೆಲೆ ಎಲ್ಲಾ ರಸ್ತೆಗಳ ಅಭಿವೃದ್ಧಿ  ಕೈಗೆತ್ತಿಕೊಳ್ಳಲು ಮಹತ್ವದ ನಿರ್ಣಯ ತೆಗೆದುಕೊಳ್ಳಲಾಯಿತು.

ಪಶುಪಾಲನೆ ಸಹಾಯಕ ನಿರ್ದೇಶಕರ ಕಚೇರಿ ಹಿಂಭಾಗಕ್ಕೆ ಮಟನ್‌ ಮಾರುಕಟ್ಟೆ ಸ್ಥಳಾಂತರಕ್ಕೆ ಸಭೆಯಲ್ಲಿ ನಾಮ ನಿರ್ದೇಶಿತ ಸದಸ್ಯ ಎನ್‌.ಮಹದೇ ವಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಕ್ಕೆ ಸ್ಥಳಾಂತರವನ್ನು ಮುಂದೂಡಲಾಯಿತು. ಶ್ರೀ ಬಣ್ಣಾರಮ್ಮ ದೇವಾಲಯದ ಬಳಿಯಿದ್ದ ಪೆಟ್ಟಿಗೆ ಅಂಗಡಿ ತೆರವು ಗೊಳಿಸಿದ ಸಂಬಂಧ ಸದಸ್ಯ ಬಿ.ಮಲ್ಲೇಶ ಹಾಗೂ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ಅವರ ನಡುವೆ ವಾಗ್ವಾದಕ್ಕೆ ಕಾರಣವಾಯಿತು.

ಖಾಸಗಿ ಬಸ್‌ ನಿಲ್ದಾಣದಲ್ಲಿ ಬಸ್‌ಗಳ ಶುಲ್ಕವನ್ನು 10 ರೂಗಳಿಂದ 20 ರೂಗಳಿಗೆ ಏರಿಕೆ ಮಾಡಿರುವ ಕ್ರಮಕ್ಕೆ ನಾಮ ನಿರ್ದೇಶಿತ ಸದಸ್ಯ ಸಿ.ಮಹದೇವ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಮುಖ್ಯಾಧಿಕಾರಿ ಎಂ.ಸಿ ನಾಗರತ್ನ ಪ್ರತಿಕ್ರಿಯಿಸಿ ಮೂರು ವರ್ಷಗಳಿಗೊಮ್ಮೆ ಶುಲ್ಕ ಏರಿಕೆ ಮಾಡುವಂತೆ ಸರ್ಕಾರದ ಮಾರ್ಗಸೂಚಿಯಲ್ಲಿ ಉಲ್ಲೇಖೀಸಿರುವುದರಿಂದ 20 ರೂಗಳಿಗೆ ಏರಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಪುರಸಭೆಯಿಂದ ಮನೆ ಕಸ ಸಂಗ್ರಹಕ್ಕೆ 15 ರೂಗಳ ಹೆಚ್ಚುವರಿ ತೆರಿಗೆ ವಸೂಲಿ ಮಾಡುವ ಪ್ರಸ್ತಾಪಕ್ಕೆ ಬಹುತೇಕ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರಿಂದ ಹೆಚ್ಚುವರಿ ತೆರಿಗೆ ವಿಧಿಸುವುದನ್ನು ಕೈ ಬಿಡಲಾಯಿತು. ವಾಣಿಜ್ಯ ಕಟ್ಟಡದ ಮಳಿಗೆಗಳು, ಹೋಟೆಲ್‌ಗ‌ಳು ಹಾಗೂ ಕಲ್ಯಾಣ ಮಂಟಪಗಳಲ್ಲಿ ಕಸ ವಿಲೇವಾರಿಗೆ ಶುಲ್ಕ 200 ರೂಗಳಿಂದ 300 ರೂಗಳಿಗೆ ಏರಿಕೆ ಮಾಡಲು ಮತ್ತು ಕಸ ನಿರ್ವಹಣೆಯ ಬಗ್ಗೆ ಹೋಟೆಲ್‌ ಹಾಗೂ ಕಲ್ಯಾಣ ಮಂಟಪ ಮಾಲೀಕರ ಸಭೆ ಕರೆದು ಚರ್ಚೆ ನಡೆಸಲು ತೀರ್ಮಾನಿಸಲಾಯಿತು. ಅಲ್ಲದೆ ಭೈರಾಪುರದಲ್ಲಿ ಐದಾರು ಮಂದಿಗೆ ಡೆಂ à ಜ್ವರ ಕಾಣಿಸಿಕೊಂಡಿರುವುದರಿಂದ ಪಟ್ಟಣದೊಳಗಿನ ಹಂದಿ ಸಾಗಾಣಿಕೆ ನಿರ್ಬಂಧಿಸಲು ಹಾಗೂ ಒಂದೂವರೆ ಕಿ.ಮೀ ದೂರಕ್ಕೆ ಸ್ಥಳಾಂತರಿಸಲು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.

ಅಧ್ಯಕ್ಷೆ ಸುಧಾ ಗುರುಮಲ್ಲಪ್ಪ, ಉಪಾಧ್ಯಕ್ಷೆ ರತ್ನಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ನೈಸ್‌ ಮಹದೇವಸ್ವಾಮಿ, ಸದಸ್ಯರಾದ ಬಿ.ಮಲ್ಲೇಶ, ಟಿ.ಜಿ.ಪುಟ್ಟಸ್ವಾಮಿ, ರಾಘವೇಂದ್ರ, ಶಶಿಕಲಾ ಪ್ರಕಾಶ್‌, ಮೀನಾಕ್ಷಿ, ರಾಜಮ್ಮ, ಶೃತಿ ಮಣಿಕಂಠ, ನಾಮ ನಿರ್ದೇಶಿತ ಸದಸ್ಯರಾದ ನಾಗೇಂದ್ರ, ಗುಲ್ಜಾರ್‌ ಖಾನ್‌, ಕಿರಿಯ ಎಂಜಿನಿಯರ್‌ ಕೆ.ಪುರುಷೋತ್ತಮ್‌, ಯೋಜನಾಧಿಕಾರಿ ಕೆಂಪರಾಜು, ಆರೋಗ್ಯಾಧಿಕಾರಿ ಚೇತನ್‌ಕುಮಾರ್‌, ಕಂದಾಯ ನಿರೀಕ್ಷರಾದ ರಾಣಿ, ಪುಟ್ಟಸ್ವಾಮಿ, ಸಮುದಾಯ ಸಂಘಟಕ ಮಹದೇವ ಹಾಗೂ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.