ಶಿಕ್ಷೆ ಪುನರ್ ಪರಿಶೀಲಿಸಲು ಮುಖ್ಯಮಂತ್ರಿಗೆ ಮನವಿ
Team Udayavani, Jun 25, 2017, 1:08 AM IST
ಬೆಂಗಳೂರು: ಇಬ್ಬರು ಪತ್ರಕರ್ತರಿಗೆ ಶಿಕ್ಷೆ ವಿಧಿಸಿರುವ ವಿಧಾನಸಭೆ ಸ್ಪೀಕರ್ ಅವರ ತೀರ್ಮಾನವನ್ನು ಪುನರ್‌ಪರಿಶೀಲಿಸುವಂತೆ ಬೆಂಗಳೂರು ಪ್ರಸ್‌ಕ್ಲಬ್ ಹಾಗೂ ಬೆಂಗಳೂರು ವರದಿಗಾರರ ಕೂಟ ಮುಖ್ಯಮಂತ್ರಿಯವರನ್ನು ಮನವಿ ಮಾಡಿದೆ.
ಈ ಸಂಬಂಧ ಮುಖ್ಯಮಂತ್ರಿಯವರಿಗೆ ಜಂಟಿಯಾಗಿ ಮನವಿ ಪತ್ರ ಸಲ್ಲಿಸಿರುವ ಬೆಂಗಳೂರು ಪ್ರಸ್‌ಕ್ಲಬ್ ಹಾಗೂ ಬೆಂಗಳೂರು ವರದಿಗಾರರ ಕೂಟದ ಪದಾಧಿಕಾರಿಗಳು, ನಾವು ಸ್ಪೀಕರ್ ಅವರ ತೀರ್ಮಾನ ಪ್ರಶ್ನಿಸುತ್ತಿಲ್ಲ. ಆದರೆ, ಈ ತೀರ್ಪನ್ನು ಪುನರ್‌ಪರಿಶೀಲಿಸಿ ಪತ್ರಕರ್ತರಿಗೆ ರಕ್ಷಣೆ ಕೊಡುವ ನಿಟ್ಟಿನಲ್ಲಿ ತಾವು ತಮ್ಮ ರಾಜಕೀಯ ಮುತ್ಸದ್ದಿತನ ಪ್ರದರ್ಶಿಸಿ, ಪತ್ರಿಕಾರಂಗದ ಈ ಅಭದ್ರತೆ ಗೊಂದಲ ನಿವಾರಿಸಬೇಕು ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು ಪ್ರಸ್‌ಕ್ಲಬ್, ಬೆಂಗಳೂರು ವರದಿಗಾರರ ಕೂಟ ಸೇರಿದಂತೆ ಕರ್ನಾಟಕದ ಎಲ್ಲ ಪತ್ರಕರ್ತರ ಸಂಘಟನೆಗಳ ಸದಸ್ಯರು ಪ್ರಜಾಪ್ರಭುತ್ವ ವ್ಯವಸ್ಥೆಯ ಅತ್ಯುನ್ನತ ಅಂಗವಾಗಿರುವ ಸಂಸದೀಯ ವ್ಯವಸ್ಥೆಯನ್ನು ಅತ್ಯಂತ ಗೌರವದಿಂದ ಕಾಣುತ್ತಾರೆ. ಅದರಲ್ಲೂ ಕರ್ನಾಟಕದ ವಿಧಾನಮಂಡಲಕ್ಕೆ ತನ್ನದೇ ಆದ ವರ್ಚಸ್ಸು, ಗೌರವ ಮತ್ತು ಇತಿಹಾಸವಿದೆ. ಆದರೆ, ಇತ್ತಿಚಿನ ಕೆಲವು ಬೆಳವಣಿಗೆಗಳು ಪತ್ರಿಕಾರಂಗಕ್ಕೆ ದೊಡ್ಡ ಆತಂಕವನ್ನು ಉಂಟುಮಾಡಿದೆ. ಮುಖ್ಯವಾಗಿ ಕಳೆದ ವಿಧಾನಸಭಾ ಅಧಿವೇಶನದಲ್ಲಿ ಸದನದ ಹಕ್ಕುಬಾಧ್ಯತಾ ಸಮಿತಿಯ ವರದಿ ಪ್ರಕಾರ ಸ್ಪೀಕರ್ ಅವರು ಇಬ್ಬರು ಪತ್ರಕರ್ತರಿಗೆ ಶಿಕ್ಷೆ ಪ್ರಕಟಿಸಿರುವುದು ಇಡೀ ಪತ್ರಿಕಾ ಬಳಗವನ್ನು ಆತಂಕಕ್ಕೀಡು ಮಾಡಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಅವರು ನೀಡಿದ ತೀರ್ಪನ್ನು ನಾವು ಗೌರವಿಸುತ್ತೇವೆ. ಆದರೆ, ಇಂತಹ ಬೆಳವಣಿಗೆಗಳು ಅನೇಕ ದಶಕಗಳಿಂದ ಶಾಸಕಾಂಗ ಮತ್ತು ಪತ್ರಿಕಾರಂಗದ ನಡುವೆ ಇರುವ ಉತ್ತಮ ಬಾಂಧವ್ಯ, ಸೌಹಾರ್ದತೆ ಧಕ್ಕೆ ತಂದಾಗುತ್ತಿದೆ ಅನ್ನುವುದು ನಮ್ಮ ಅನಿಸಿಕೆ. ಆದ್ದರಿಂದ ತೀರ್ಪು ಪುನರ್‌ಪರಿಶೀಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಪ್ರಸ್‌ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ, ಪ್ರಧಾನ ಕಾರ್ಯದರ್ಶಿ ಎಚ್.ವಿ.ಕಿರಣ್, ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಚಂದ್ರಶೇಖರ್, ಉಪಾಧ್ಯಕ್ಷ ಆರ್.ಟಿ.ವಿಠಲ್‌ವುೂರ್ತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.