ಜಮೀನು ಉಳಿಸಿಕೊಳ್ಳಲು ಗ್ರಾಮಸ್ಥರಿಂದ ಆತ್ಮಹತ್ಯೆ ಬೆದರಿಕೆ
Team Udayavani, Jun 25, 2017, 11:14 AM IST
ಕೆ.ಆರ್.ಪುರ: ಕೆ.ಆರ್.ಪುರದ ಕೊತ್ತನೂರಿನಲ್ಲಿ ಅರಣ್ಯ ಇಲಾಖೆ ವಶಕ್ಕೆ ಪಡೆದಿರುವ 17.34 ಎಕರೆ ಜಮೀನಿನಲ್ಲಿ ಶುಕ್ರವಾರ ಸಸಿಗಳು ನೆಡಲು ಮುಂದಾದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಸೀಮೆಎಣ್ಣೆ, ಫಿನಾಯಿಲ್ ಕ್ಯಾನು ಹಿಡಿದು ಪ್ರತಿಭಟನೆ ನಡೆಸಿದರು. ಜಮೀನು ವಶಕ್ಕೆ ಮುಂದಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದರು.
“ಪ್ರಾಣ ಹೋದರು ಸರಿಯೇ ನಮಗೆ ಸೇರಿದ ಈ ಭೂಮಿಯನ್ನು ಬಿಟ್ಟುಕೊಡುವುದಿಲ್ಲ. ಈ ಭೂಮಿಯ ವ್ಯಾಜ್ಯ ಈಗಾಗಲೇ ನ್ಯಾಯಾಲಯದಲ್ಲಿದ್ದು, ಎಸಿ ನ್ಯಾಯಾಲಯ, ಉಚ್ಚ ನ್ಯಾಯಾಲಯಗಳಲ್ಲಿ ಯಥಾಸ್ಥಿತಿ ಕಾಯ್ದಿರಿಸುವಂತೆ ಆಜ್ಞೆ ಇದೆ. ಅಧಿಕಾರಿಗಳು ಮಾತ್ರ ದಲಿತರೆಂಬ ಕಾರಣಕ್ಕೆ ದೌರ್ಜನ್ಯ ನಡೆಸುತ್ತಿದ್ದಾರೆ. ನಮ್ಮನ್ನು ಬಲವಂತವಾಗಿ ತೆರವು ಮಾಡಲು ಮುಂದಾಗಿದ್ದಾರೆ. ನಮ್ಮ ಹಕ್ಕು ಪಡೆಯಲು ನಾವು ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ಧರಾಗಿದ್ದೇವೆ,’ ಎಂದು ಗ್ರಾಮಸ್ಥರು ಹೇಳಿದ್ದಾರೆ.
“ನಾಲ್ಕು ತಲೆಮಾರುಗಳಿಂದ ನಾವು ಇಲ್ಲೇ ನೆಲೆಸಿದ್ದೇವೆ. ಈ ಭೂಮಿಯಲ್ಲೇ ವ್ಯವಸಾಯ ಮಾಡಿ ಬದುಕು ಕಟ್ಟಿಕೊಂಡಿದ್ದೇವೆ. ಅಧಿಕಾರಿಗಳು ಎಕಾಏಕಿ ಒಕ್ಕಲೆಬ್ಬಿಸುತ್ತಿದ್ದಾರೆ. ನಮ್ಮ ಜೀವನಕ್ಕೆ ಆಧಾರವಿಲ್ಲದಂತಾಗುತ್ತದೆ, ಪ್ರಾಣ ತ್ಯಾಗಕ್ಕೂ ಸಹ ನಾವು ಸಿದ್ಧ. ಭೂಮಿ ನಮ್ಮ ಕೈತಪ್ಪಲು ಬಿಡುವುದಿಲ್ಲ,’ ಎಂದು ಪ್ರತಿಭಟನಾಕಾರರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್ಸ್ಟೇಬಲ್ ಸಾವು
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.