ಕೆಂಪೇಗೌಡರ ತತ್ವದಡಿ ಕೆರೆಗಳ ಅಭಿವೃದ್ಧಿ
Team Udayavani, Jun 25, 2017, 11:14 AM IST
ಕೆಂಗೇರಿ: ನಾಡಿನ ಹಿತಕ್ಕಾಗಿ ಕೆರೆಗಳನ್ನು ಅಭಿವೃದ್ಧಿಪಡಿಸಿದ್ದ ಕೆಂಪೇಗೌಡರ ದೂರದೃಷ್ಟಿ ಚಿಂತನೆಯ ಅಡಿಯಲ್ಲೇ ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಉಲ್ಲಾಳು ಕೆರೆಗೆ ಹರಿಯುತ್ತಿದ್ದ ಒಳಚರಂಡಿ ನೀರನ್ನು ಬೇರೆ ಕಡೆಗಳಿಗೆ ಹರಿಸುವ ಕಾಮಗಾರಿಗೆ ಚಾಲನೆ ನೀಡಿದ ಅವರು, “ಕೆರೆಗೆ ಒಳಚರಂಡಿ ನೀರು ಹರಿಯುವುದನ್ನ ತಪ್ಪಿಸಲು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಉಲ್ಲಾಳು ಕೆರೆಯನ್ನು ಅಭಿವೃದ್ಧಿಪಡಿಸಲಾಗುವುದು. ಕೆರೆಯ ಸುತ್ತ ವಾಯುವಿಹಾರಕ್ಕೆ ಸೂಕ್ತ ವಾತಾವರಣ ಕಲ್ಪಿಸಲಾಗುವುದು,’ ಎಂದರು.
ಹೇರೋಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಅನಿಲ್ ಕುಮಾರ್ ಮಾತನಾಡಿ, “ಕೆರೆಯ ಸಮಸ್ಯೆ ಕುರಿತು ಶಾಸಕರಿಗೆ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಮೂರು ಕೋಟಿ ರೂ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಪಡಿಸುತ್ತಿದ್ದಾರೆ,’ ಎಂದರು.
ಗ್ರಾಮಪಂಚಾಯಿತಿ ಮಾಜಿ ಸದಸ್ಯ ಬಸಪ್ಪ, ಉಪಕಾರ ಬಡಾವಣೆಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಕುಮಾರ್, ವಿಶ್ವೇಶ್ವರಯ್ಯ 5ನೇ ಹಂತ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಿ.ಎಸ್.ಗೌಡ, ಬಿಬಿಎಂಪಿ ಕೆರೆ ಅಭಿವೃದ್ಧಿ ವಿಭಾಗದ ಕಾರ್ಯಪಾಲಕ ಅಭಿಯಂತರ ರವಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.