ಉದ್ಯೋಗ ಹುಡುಕದೇ ಉದ್ಯೋಗ ಕಲ್ಪಿಸಿ
Team Udayavani, Jun 25, 2017, 11:15 AM IST
ಬೆಂಗಳೂರು: ಯುವಕರು ಉದ್ಯೋಗಕ್ಕಾಗಿ ಅಲೆದಾಡದೆ, ಸ್ವತಃ ಉದ್ಯೋಗ ಸೃಷ್ಟಿಕರ್ತರಾಗಿ ಹೊರಹೊಮ್ಮಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘ (ಎಫ್ಕೆಸಿಸಿಐ) ವಿನೂತನ ಪ್ರಾಜೆಕ್ಟ್ಗಳನ್ನು ಸಿದ್ಧಪಡಿಸುವ ವಿದ್ಯಾರ್ಥಿಗಳಿಗೆ ನೀಡುವ “ಮಂಥನ-2017′ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಉದ್ಯೋಗಕ್ಕಾಗಿ ನಿತ್ಯ ಲಕ್ಷಾಂತರ ಯುವಕರು ಅಲೆದಾಡುತ್ತಿದ್ದಾರೆ. ಆದರೆ, ಸ್ವತಃ ಉದ್ಯೋಗದಾತರಾಗಬಹುದಾದ ಸಾಮರ್ಥ್ಯ ಯುವಕರಲ್ಲಿದೆ. ಇದಕ್ಕಾಗಿ ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಜತೆಗೆ ಈ ನಿಟ್ಟಿನಲ್ಲಿ ಉದ್ಯಮಿಗಳು ಯುವ ಪ್ರತಿಭೆಗಳಿಗೆ ಸೂಕ್ತ ತರಬೇತಿ ನೀಡಬೇಕು ಎಂದು ಹೇಳಿದರು.
ಬೇಡಿಕೆ-ಪೂರೈಕೆಯಲ್ಲಿ ಅಂತರ: ಒಂದೆಡೆ ನಿರುದ್ಯೋಗಿಗಳ ಸಂಖ್ಯೆ ಸಾಕಷ್ಟಿದೆ. ಮತ್ತೂಂದೆಡೆ ಕೈಗಾರಿಕಾ ಕ್ಷೇತ್ರ ಮಾನವ ಸಂಪನ್ಮೂಲ ಕೊರತೆ ಎದುರಿಸುತ್ತಿದೆ. ಈ ಬೇಡಿಕೆ ಮತ್ತು ಪೂರೈಕೆಯಲ್ಲಿರುವ ಅಂತರವನ್ನು ಕಡಿಮೆ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಕೌಶಲ್ಯ ತರಬೇತಿ ನೀಡುವ ಅವಶ್ಯಕತೆ ಇದೆ. ನಮ್ಮಲ್ಲಿರುವ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳು ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ.
ಉದಾಹರಣೆಗೆ ಈಗಲೂ ಶೀಘ್ರಲಿಪಿ ತರಬೇತಿ ನೀಡಲಾಗುತ್ತಿದೆ. ಆದರೆ, ವಾಸ್ತವವಾಗಿ ಕಂಪ್ಯೂಟರ್ ಯುಗದಲ್ಲಿ ಶೀಘ್ರಲಿಪಿ ಯಾರಿಗೆ ಉಪಯೋಗ ಎಂದು ಕೇಳಿದರು. ಆದ್ದರಿಂದ ಕೈಗಾರಿಕೆಗಳಲ್ಲಿನ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಅವಶ್ಯಕತೆ ಇದೆ. ಇದಕ್ಕಾಗಿ ಉದ್ಯಮ ಕ್ಷೇತ್ರವು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.
ಜರ್ಮನಿಯಲ್ಲಿ ಎರಡು ರೀತಿಯ ಶಿಕ್ಷಣ ವ್ಯವಸ್ಥೆ ಇದೆ. ಒಂದು ಥಿಯಾರಿಟಿಕಲ್ ಶಿಕ್ಷಣ ಮತ್ತೂಂದು ಪ್ರಾಯೋಗಿಕ ಶಿಕ್ಷಣ. ಕೈಗಾರಿಕೆಗಳು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಶಿಕ್ಷಣ ನೀಡುತ್ತವೆ. ಹಾಗಾಗಿ, ಒಂದಿಲ್ಲೊಂದು ಕಡೆ ಉದ್ಯೋಗ ಗಿಟ್ಟಿಸಿಕೊಳ್ಳಲು ಸಾಧ್ಯವಾಗುತ್ತದೆ. ನಮ್ಮಲ್ಲಿನ ಶಿಕ್ಷಣ ವ್ಯವಸ್ಥೆ ಈ ರೀತಿಯ ಕ್ರಿಯಾತ್ಮಕ ಚಿಂತನೆಗೆ ಹೊಂದಿಕೊಳ್ಳಲು ಇನ್ನಷ್ಟು ಸಮಯ ಬೇಕಾಗುತ್ತದೆ ಎಂದರು.
“ಮಂಥನ-2017′ ಸಮಿತಿ ಅಧ್ಯಕ್ಷ ಡಿ. ಸುರೇಶ್‌ಕುಮಾರ್ ಪ್ರಾಸ್ತಾವಿಕ ಮಾತನಾಡಿದರು. ಎಫ್ಕೆಸಿಸಿಐ ಅಧ್ಯಕ್ಷ ಎಂ.ಸಿ. ದಿನೇಶ್, ತೀರ್ಪುಗಾರರ ಸಮಿತಿ ಅಧ್ಯಕ್ಷ ಅಂಕುರ್ ಭಾಸಿನ್ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ರಾಯಚೂರಿನ ಅಗ್ರಿಕಲ್ಚರಲ್ ಎಂಜಿನಿಯರಿಂಗ್ ಕಾಲೇಜಿನ ಎಸ್.ಎ. ವೇಣು (ಪ್ರಥಮ), ಬೆಂಗಳೂರಿನ ಎಂ.ಎಸ್. ರಾಮಯ್ಯ ತಾಂತ್ರಿಕ ಸಂಸ್ಥೆಯ ಅಶ್ವಿನಕುಮಾರ್ (ದ್ವಿತೀಯ),
-ರಾಯಚೂರು ಅಗ್ರಿಕಲ್ಚರಲ್ ಎಂಜಿನಿಯರಿಂಗ್ ಕಾಲೇಜಿನ ಶಿವಯೋಗೇಶ್ ಕುಡಚೆ, ವಿವೇಕ್ ಆರ್. ಕಾಮತ್, ಶ್ರೀಕಾಂತ್ (ತೃತೀಯ) ಹಾಗೂ ಡಿ. ಯಲ್ಲಪ್ಪ (ಸಮಾಧಾನಕರ) ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಚಿಕ್ಕಬಳ್ಳಾಪುರದ ಎಂ. ಸಿಂಧುಶ್ರೀ ಹಾಗೂ ಎಂ. ನವ್ಯಾರಾಣಿ (ಸಮಾಧಾನಕರ) ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.