ನೆಪ ಹೇಳದೆ ರೋಗಿಗಳಿಗೆ ಚಿಕಿತ್ಸೆ ನೀಡಿ
Team Udayavani, Jun 25, 2017, 11:38 AM IST
ಮೈಸೂರು: ಜಿಲ್ಲೆಯಲ್ಲಿ ಮಾರಕ ಡೆಂಘೀ ಜ್ವರ ವ್ಯಾಪಿಸಿರುವ ಹಿನ್ನೆಲೆಯಲ್ಲಿ ಆರೋಗ್ಯಾಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ನೆಪ ಹೇಳದೆ ಚಿಕಿತ್ಸೆ ನೀಡುವಂತೆ ಸೂಚಿಸಿದರು.
ನಗರದ ತೊಣಚಿಕೊಪ್ಪಲು ಬಡಾವಣೆಯ ತಮ್ಮ ನಿವಾಸದಲ್ಲಿ ಶನಿವಾರ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜು, ಮೈಸೂರು ವೈದ್ಯಕೀಯ ಕಾಲೇಜು ಡೀನ್ ಡಾ.ಕೃಷ್ಣಮೂರ್ತಿ, ಕೆ.ಆರ್.ಆಸ್ಪತ್ರೆ ಅಧೀಕ್ಷಕ ಡಾ.ಚಂದ್ರಶೇಖರ್ ಅವರೊಂದಿಗೆ ಸಭೆ ನಡೆಸಿ ಮಾತನಾಡಿದರು.
ಕಳೆದ ಜನವರಿಯಿಂದ ಈವರೆಗೆ ಜಿಲ್ಲೆಯಲ್ಲಿ ಸಾಂಕ್ರಮಿಕ ರೋಗಗಳ ಹರಡುವಿಕೆ, ಅದರಿಂದ ರೋಗಬಾಧೆಗೆ ಒಳಗಾಗಿರುವವರು, ಯಾವ ರೀತಿಯ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಸಿದ್ದರಾಮಯ್ಯ, ಡೆಂಘೀ ಜ್ವರದ ಬಾಧೆಯಿಂದ ಬಳಲುತ್ತಾ ಆಸ್ಪತ್ರೆಗೆ ಬರುವವರ ಬಗ್ಗೆ ವೈದ್ಯರು ಮತ್ತು ಆಸ್ಪತ್ರೆಗಳ ಸಿಬ್ಬಂದಿ ಮುತುವರ್ಜಿ ವಹಿಸಬೇಕು. ರಕ್ತದ ಕೊರತೆ ಇದೆ, ಪ್ಲೇಟ್ಲೆಟ್‌ಗಳ ಕೊರತೆ ಇದೆ ಎಂಬ ನೆಪ ಹೇಳದೆ ಜ್ವರಬಾಧೆಯಿಂದ ಬರುವ ಪ್ರತಿಯೊಬ್ಬರಿಗೂ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ತಾಕೀತು ಮಾಡಿದರು.
ವೈದ್ಯರ ಉದಾಸೀನತೆಯಿಂದ ಯಾವುದೇ ರೋಗಿ ಸಾವನ್ನಪ್ಪದಂತೆ ಎಚ್ಚರವಹಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು. ಜೊತೆಗೆ ಸಾಂಕ್ರಮಿಕ ರೋಗ ಹರಡದಂತೆ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳು ಸ್ವತ್ಛತೆ ಕಾಪಾಡುವ ಜತೆಗೆ ರೋಗ ಹರಡುವ ಸೊಳ್ಳೆಗಳ ನಿರ್ಮೂಲನೆ ಬಗ್ಗೆ ಮುತುವರ್ಜಿವಹಿಸಬೇಕು ಎಂದು ಜಿಪಂ ಸಿಇಒ ಶಿವಶಂಕರ್ ಅವರಿಗೆ ಸೂಚಿಸಿದರು.
170 ಮಂದಿಗೆ ಡೆಂಘೀ: ಜಿಲ್ಲೆಯಲ್ಲಿನ ಮಾಹಿತಿ ನೀಡಿದ ಡಿಎಚ್‌ಒ ಡಾ.ಬಸವರಾಜು ಅವರು, ಜನವರಿಯಿಂದ ಶುಕ್ರವಾರದವರೆಗೆ (ಜೂ.23) 1061 ಜನರು ಶಂಕಿತ ಡೆಂಘೀ ಜ್ವರ ಬಾಧೆಗೆ ಚಿಕಿತ್ಸೆ ಪಡೆದಿದ್ದು, ಈ ಪೈಕಿ 170 ಜನರಿಗೆ ಡೆಂಘೀ ಇರುವುದು ದೃಢಪಟ್ಟಿದ್ದು,ಇವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಪ್ರತಿ ತಾಲೂಕಲ್ಲೂ ಕ್ಷಿಪ್ರ ಕಾರ್ಯ ತಂಡ:
ಸಾಂಕ್ರಮಿಕ ರೋಗ ಅದರಲ್ಲೂ ಮಾರಣಾಂತಿಕವಾದ ಡೆಂಘೀ ಜ್ವರ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರಿಗೂ ಜಾಗೃತಿ ಮೂಡಿಸಲಾಗುತ್ತಿದೆ. ಜೊತೆಗೆ ಮೈಸೂರು ನಗರದಲ್ಲಿ 2 ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ತಲಾ ಒಂದು ಕ್ಷಿಪ್ರ ಕಾರ್ಯ ತಂಡವನ್ನು ರಚಿಸಲಾಗಿದೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.