ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದ ಲೋಕೋಪಯೋಗಿ ಹಗರಣ
Team Udayavani, Jun 25, 2017, 2:40 PM IST
ಕಲಬುರಗಿ: ಲೋಕೋಪಯೋಗಿ ಇಲಾಖೆಯಲ್ಲಿ ಮ್ಯಾನುವಲ್ ಟೆಂಡರ್ ಕರೆದಿರುವುದು, ಬೋಗಸ್ ಬಿಲ್ ಸೃಷ್ಟಿ, ಒಂದೊಂದು ಕಾಮಗಾರಿಗೆ ಎರಡು ಸಲ ಬಿಲ್ ಪಾವತಿ ಮಾಡಿರುವ ಹಗರಣ ಶನಿವಾರ ಮುಂದುವರೆದ ಕೆಡಿಪಿ ಸಭೆಯಲ್ಲಿ ಚರ್ಚೆ ನಡೆದು ಯಾವುದೇ ಕ್ರಮ ಜರುಗದೇ ಇರುವ ಅಂಶ ಬಯಲಿಗೆ ಬಂತು.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಮುಂದುವರಿದ ಎರಡನೇ ದಿನದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪರಿಶೀಲನಾ ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ರಾಜು ಡಾಂಗೆ ಇಲಾಖೆಯ ಕಾಮಗಾರಿಗಳ ಕುರಿತು ವಿವರಣೆ ನೀಡಿದರು.
ಲೋಕೋಪಯೋಗಿ ಇಲಾಖೆಯಲ್ಲಿ ಉಪ ಗುತ್ತಿಗೆ ದಂಧೆಯೇ ಜೋರಾಗಿದೆ. ಇದರಲ್ಲಿ ಇಲಾಖಾಧಿಕಾರಿಗಳೆ ಭಾಗಿಯಾಗಿದ್ದನ್ನು ಕೇಳಿದ್ದೇವೆ. ಇನ್ಮುಂದೆ ಇದು ನಿಲ್ಲಬೇಕು. ಇಇ-ಎಇಇ ಅಧಿಕಾರಿಗಳು ಕಾಮಗಾರಿಗಳ ಸ್ಥಳಕ್ಕೆ ಕಡ್ಡಾಯವಾಗಿ ಹೋಗಬೇಕು. ಕುಳಿತಲ್ಲೇ ಕಥೆ ಹೇಳಬೇಡಿ ಎಂದು ಸಚಿವರು ಅಧಿಕಾರಿಗಳಿಗೆ ತಾಕೀತು ಮಾಡಿದರಲ್ಲದೇ ಜಿಲ್ಲಾಧಿಕಾರಿಗಳು ಆಕಸ್ಮಿಕ ಭೇಟಿಗಳನ್ನು ನೀಡಬೇಕೆಂದು ಸೂಚಿಸಿದರು.
ಮ್ಯಾನುವೆಲ್ ಟೆಂಡರ್ ಕರೆಯಬಾರದು ಎನ್ನುವ ನಿಯಮವಿದ್ದರೂ ಹಲವು ಕಾಮಗಾರಿಗಳನ್ನು ಮ್ಯಾನುವೆಲ್ ಆಗಿ ಕರೆಯಲಾಗಿದೆ. ಬೋಗಸ್ ಬಿಲ್ ಎತ್ತಿ ಹಾಕಲಾಗಿದೆಯಲ್ಲದೇ ಎರಡೆರಡು ಬಿಲ್ ಎತ್ತಿ ಹಾಕಿರುವ ಕುರಿತಾದ ತನಿಖೆ ಏನಾಯಿತು? ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಪಿಡ್ಲುಡಿ ಇಲಾಖೆಯ ಇಇ ಅವರನ್ನು ಸಚಿವರು ಪ್ರಶ್ನಿಸಿದರು.
ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಆದರೆ ಇನ್ನೂ ಯಾವುದೇ ಕ್ರಮ ಜರುಗಿಲ್ಲ ಎಂದು ಇಇ ತಿಳಿಸಿದರು. ಇದಕ್ಕೆ ಸಚಿವ ಡಾ| ಶರಣಪ್ರಕಾಶ ಪಾಟೀಲ, ತನಿಖಾ ಕ್ರಮದ ವರದಿ ತಮ್ಮ ಕೈಗೆ ನೀಡಿ, ಏನಾಗುತ್ತೇ ನೋಡೋಣ ಎಂದು ಹೇಳಿದರು.
ಜಿಲ್ಲೆಯಲ್ಲಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ರಸ್ತೆಗಳ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕಲ್ಲದೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕೆಂದು ಸೂಚನೆ ನೀಡಿದರು. ಕಲಬುರಗಿ ಜಿಲ್ಲೆಗೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ರಾಷ್ಟ್ರೀಕೃತ ಬ್ಯಾಂಕುಗಳ ಬದಲಾಗಿ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕುಗಳಲ್ಲಿ ಠೇವಣಿ ಇಡುವ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮಲೈಗೊಳ್ಳಬೇಕು.
ಸಾರಿಗೆ ಇಲಾಖೆಯಿಂದ ಸಿಂದಗಿ ಗ್ರಾಮದಲ್ಲಿ ಚಾಲನಾ ತರಬೇತಿ ಕೇಂದ್ರ ನಡೆಸಲಾಗುತ್ತಿದ್ದು, ಈ ಕೇಂದ್ರಕ್ಕೆ ಅಪೊಚ್ ರಸ್ತೆ ನಿರ್ಮಾಣದ ಪ್ರಸ್ತಾವನೆ ನೀಡಬೇಕೆಂದರು. ಜಿಪಂ ಅಧ್ಯಕ್ಷೆ ಸುವರ್ಣಾ ಎಚ್. ಮಲಾಜಿ, ಉಪಾಧ್ಯಕ್ಷೆ ಶೋಭಾ ಎಸ್. ಸಿರಸಗಿ, ಆಳಂದ ಶಾಸಕ ಬಿ.ಆರ್.ಪಾಟೀಲ, ಜಿಲ್ಲಾ ಧಿಕಾರಿ ಉಜ್ವಲಕುಮಾರ ಘೋಷ್, ಹೆಪ್ಸಿಬಾರಾಣಿ ಕೊರ್ಲಪಾಟಿ, ಶಿವಶಂಕರ, ಕೆ.ಡಿ.ಪಿ. ಸದಸ್ಯರಾದ ಮಲ್ಲಿಕಾರ್ಜುನ ಸಾಗರ, ಶರಣರೆಡ್ಡಿ, ಪ್ರವೀಣ ಪ್ರಿಯಾ ಡೇವಿಡ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.