ಜೂ. 28 ರಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ಪಯಣ
Team Udayavani, Jun 26, 2017, 3:45 AM IST
ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಸಂಬಂಧ ಯುಪಿಎ ಮಿತ್ರಕೂಟದ ಅಭ್ಯರ್ಥಿಯಾಗಿರುವ ಮೀರಾಕುಮಾರ್ ಅವರು ಜೂನ್ 28ರಂದು ನಾಮಪತ್ರ ಸಲ್ಲಿಸಲಿದ್ದಾರೆ.ಆ ಸಂದರ್ಭದಲ್ಲಿ ಹಾಜರಿರಲು ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಆರೋಗ್ಯ ಮಂದಿರ ಟ್ರಸ್ಟ್ ವತಿಯಿಂದ ಭಾನುವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಮಾರೋಪ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಬೇಟಿ ಸಂದರ್ಭದಲ್ಲಿ ಸಾಧ್ಯವಾದರೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಿದ್ದೇನೆ. ಮಾಸಾಂತ್ಯಕ್ಕೆ ಸಂಪುಟ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿದೆ. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದರ ಬಗ್ಗೆ ಹೈಕಮಾಂಡ್‌ನಿಂದ ಒಪ್ಪಿಗೆ ಪಡೆಯಲಾಗುವುದು ಮತ್ತು ಪಕ್ಷ ಸಂಘಟನೆಯ ವಿಚಾರವನ್ನು ಚರ್ಚಿಸಲಿದ್ದೇವೆ ಎಂದರು.
ಸಚಿವ ಮಹದೇವ ಪ್ರಸಾದ್ ಅವರ ನಿಧನದಿಂದ ಖಾಲಿ ಇರುವ ಸ್ಥಾನ ಸೇರಿದಂತೆ ಎಚ್.ವೈ.ಮೇಟಿ ಹಾಗೂ ಡಾ.ಪರಮೇಶ್ವರ್ ಅವರ ಸ್ಥಾನ ಭರ್ತಿಗೆ ಸಂಪುಟ ವಿಸ್ತರಣೆ ಅಗತ್ಯವಿದೆ. ಪಕ್ಷದ ಹೈಕಮಾಂಡ್ ಜತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?
Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್: ಸ್ವಾಗತಕ್ಕೆ ಅದ್ಧೂರಿ ತಯಾರಿ