ನಗರದಲ್ಲಿ ಹಾವು ಹಾವಳಿ; ಪಾಲಿಕೆಗಿಲ್ಲ ಕಳಕಳಿ
Team Udayavani, Jun 26, 2017, 11:26 AM IST
ಬೆಂಗಳೂರು: ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ನಗರದ ವಿವಿಧ ಭಾಗಗಳಲ್ಲಿ ಹಾವುಗಳ ಹಾವಳಿ ಹೆಚ್ಚಾಗಿದೆ. ಆದರೆ, ಉರಗಗಳ ಉಪಟಳ ನಿಯಂತ್ರಣಕ್ಕೆ ಪಾಲಿಕೆ ಸೂಕ್ತ ಕ್ರಮಗಳನ್ನೇ ಕೈಗೊಂಡಿಲ್ಲ. 198 ವಾರ್ಡ್‌ಗಳ ಸರಿಸುಮಾರು 1 ಕೋಟಿ ಪೌರರ ಹೊಣೆ ಹೊತ್ತಿರುವ ಪಾಲಿಕೆಯಲ್ಲಿ ಹಾವುಗಳನ್ನು ಹಿಡಿಲು ಸೂಕ್ತ ಪ್ರಮಾಣದಲ್ಲಿ ಸಿಬ್ಬಂದಿಯೇ ಇಲ್ಲ.
ಇತ್ತೀಚಿಗೆ ಮುನಿರೆಡ್ಡಿ ಪಾಳ್ಯದಲ್ಲಿ ಹಾವು ಕಚ್ಚಿ ಐದು ವರ್ಷ ಬಾಲಕಿ ಸಾವನ್ನಪ್ಪಿದಳು. ಇದರ ಜತೆಗೆ ಬ್ಯಾಟರಾಯನಪುರ ಶಾಲೆಯೊಂದರಲ್ಲಿ ನಿತ್ಯವೂ ಹಾವುಗಳು ಕಾಣಿಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಿದ್ದದ್ದವು. ಆದರೆ, ಪಾಲಿಕೆಯ ಅಧಿಕಾರಿಗಳು ಮಾತ್ರ ಈ ವರೆಗೆ ಎಚ್ಚೆತ್ತುಕೊಳ್ಳದೇ ಇರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಇದಲ್ಲದೆ, “ಹಾವುಗಳು ಕಾಣಿಸಿಕೊಂಡಿದೆ ರಕ್ಷಣೆಗೆ ಬನ್ನಿ,’ ಎಂದು ಪಾಲಿಕೆಗೆ ನಗರದ ಹಲವರು ಕರೆ ಮಾಡಿ ದೂರು ನೀಡಿದ್ದರೂ, ಪಾಲಿಕೆಯ ಯಾವೊಬ್ಬ ಸಿಬ್ಬಂದಿಯೂ ಸ್ಥಳಕ್ಕೆ ಹೋಗದೇ ಇರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಾಣಿಗಳಿಂದ ಆಗುವ ಅನಾಹುತಗಳು ಮತ್ತು ಅಪಾಯದಲ್ಲಿರುವ ಪ್ರಾಣಿಗಳ ಸಂರಕ್ಷಣೆ ಮಾಡಲೆಂದೇ ಈ ಹಿಂದೆ ಪಾಲಿಕೆಯ ಅರಣ್ಯ ವಿಭಾಗದಲ್ಲಿ 34 ಸ್ವಯಂ ಸೇವಕ ಸಿಬ್ಬಂದಿ ಇದ್ದರು. ಈ ಪೈಕಿ 28 ಸಿಬ್ಬಂದಿಯನ್ನು ಕೆಲ ತಿಂಗಳ ಹಿಂದೆ ಸೇವೆಯಿಂದ ವಿಮುಕ್ತಿಗೊಳಿಸಲಾಗಿದೆ. ಹೀಗಾಗಿ ಈಗ ಪಾಲಿಕೆಯ ಅರಣ್ಯ ವಿಭಾಗದಲ್ಲಿ ಉಳಿದಿರುವುದು ಕೇವಲ 6 ಮಂದಿ ಸ್ವಯಂ ಸೇವಕರು ಮಾತ್ರ. ಅಲ್ಲದೆ ಇವರು ಕಾಯಂ ನೌಕರರೂ ಅಲ್ಲ.
198 ವಾರ್ಡ್‌ಗಳನ್ನು ಹೊಂದಿರುವ, ದೇಶದ ಪ್ರಮುಖ ಪಾಲಿಕೆಗಳ ಸಾಲಿನಲ್ಲಿ ನಿಂತಿರುವ, ಸರಿಸುಮಾರು 1 ಕೋಟಿಗೂ ಮಿಗಿಲಾದ ಜನಸಂಖ್ಯೆ ಇರುವ ಬೆಂಗಳೂರಿನಲ್ಲಿ ಪ್ರಾಣಿ ನಿಯಂತ್ರಣಕ್ಕೆ ಕೇವಲ ಆರು ಮಂದಿ ಸಾಕೇ ಎಂಬ ಪ್ರಶ್ನೆ ಈಗ ಬಹುಚರ್ಚಿದ ಸಂಗತಿಯಾಗಿದೆ. ಹೀಗಾಗಿಯೇ ದೂರುಗಳು ಬಂದಕಡೆಗೆಲ್ಲ ಈ ಸಿಬ್ಬಂದಿ ತಕ್ಷಣಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಇದರ ಜತೆಗೆ, ಪ್ರಾಣಿಗಳನ್ನು ಹಿಡಿಯುವ ಸ್ವಯಂ ಸೇವಕರನ್ನು ಪಾಲಿಕೆಯ ಅರಣ್ಯ ವಿಭಾಗ ಸೂಕ್ತ ರೀತಿಯಲ್ಲಿ ನಡೆಸಿಕೊಳ್ಳುತ್ತಿಲ್ಲ ಎಂಬ ಆರೋಪಗಳೂ ಇವೆ. ಅವರಿಗೆ ಸಮರ್ಪಕವಾಗಿ ಗೌರವ ಧನವನ್ನು ನೀಡುತ್ತಿಲ್ಲ ಎಂಬ ದೂರು ಮೊದಲಿನಿಂದಲೂ ಕೇಳಿಬರುತ್ತಿದೆ. ಆದರೀಗ ಮಳೆಗಾಲ ಆರಂಭವಾದ ನಂತರವೂ ಹೆಚ್ಚಿನ ಸಿಬ್ಬಂದಿ ನೇಮಿಸಿಕೊಳ್ಳಲು ಪಾಲಿಕೆಯ ಅಧಿಕಾರಿಗಳು ಮುಂದಾಗಿಲ್ಲ. ಇದರಿಂದ ಸಾರ್ವಜನಿಕರು ಸಾವು ನೋವು ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ನಿತ್ಯ ಪಾಲಿಕೆಗೆ 30 ದೂರುಗಳು!: ಹಾವು ಕಾಣಿಸಿಕೊಂಡ ಬಗ್ಗೆ ಕಳೆದ ಒಂದು ತಿಂಗಳಿಂದ ಪಾಲಿಕೆಯ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ನಿತ್ಯ 30ಕ್ಕೂ ಹೆಚ್ಚು ದೂರುಗಳು ಬರುತ್ತಿವೆ. ಆದರೆ, ಪಾಲಿಕೆಯಲ್ಲಿ ಕೇವಲ 6 ಮಂದಿ ಮಾತ್ರ ಸಿಬ್ಬಂದಿ ಇರುವುದರಿಂದ ಸಾರ್ವಜನಿಕರ ಸಹಾಯಕ್ಕೆ ಧಾವಿಸಲು ಸಾಧ್ಯವಾಗುತ್ತಿಲ್ಲ. ಇದರೊಂದಿಗೆ ವಲಯ ಮಟ್ಟದಲ್ಲಿಯೂ ದೂರುಗಳು ಬರುತ್ತಿವೆ. ಆದರೆ, ಪಾಲಿಕೆಯ ಸಿಬ್ಬಂದಿ ಸಕಾಲಕ್ಕೆ ಲಭ್ಯವಾಗದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಸಾರ್ವಜನಿಕರು ನೇರವಾಗಿ ಸ್ವಯಂ ಸೇವಕರನ್ನು ಸಂಪರ್ಕಿಸಬೇಕಾಗುತ್ತಿದೆ.
ಮಕ್ಕಳಿಗೆ ಅನಾಹುತವಾದರೆ ಮೇಯರ್ರೆ ಹೊಣೆ: ನಗರದ ಬ್ಯಾಟರಾಯನಪುರ ಸರ್ಕಾರಿ ಶಾಲೆಗೆ ನಿತ್ಯ ಹಾವುಗಳು ನುಗ್ಗುತ್ತಿರುವುದರಿಂದ ಶಾಲೆಯಲ್ಲಿ ಭಯದ ವಾತಾವರಣ ಮನೆ ಮಾಡಿದೆ. ಮಕ್ಕಳು ಶಾಲೆಗೆ ಬರಲು ಆತಂಕ ಪಡುವಂತಾಗಿದೆ. ಆ ಹಿನ್ನೆಲೆಯಲ್ಲಿ ಸಮಸ್ಯೆ ಬಗೆಹರಿಸುವಂತೆ ಶಾಲೆಯ ಮುಖ್ಯ ಶಿಕ್ಷಕಿ ಮಹೇಶ್ವರಿ ಅವರು ಸ್ವತಃ ಮೇಯರ್ ಜಿ.ಪದ್ಮಾವತಿ ಅವರಿಗೆ ಕರೆ ಮಾಡಿ ಸಮಸ್ಯೆಯನ್ನು ತಿಳಿಸಿದ್ದರು.
ಶನಿವಾರದೊಳಗೆ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸುವ ಭರವಸೆಯನ್ನು ಮೇಯರ್ ನೀಡಿದ್ದರು. ಆದರೆ ಈವರೆಗೆ ಯಾವುದೇ ಸಿಬ್ಬಂದಿ ಶಾಲೆಯ ಬಳಿಗೆ ಬಂದಿಲ್ಲ. ಶಾಲೆಯಲ್ಲಿ ಯಾವುದಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮೇಯರ್ ಅವರೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಪೋಷಕರೊಬ್ಬರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮೇಯರ್ ಅವರನ್ನು ಪ್ರಶ್ನಿಸಿದರೆ, ಅಧಿಕಾರಿಗಳಿಗೆ ಈ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದರೊಂದಿಗೆ ಸಿಬ್ಬಂದಿ ಕಡಿಮೆ ಇರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂಬ ಹಾರಿಕೆ ಉತ್ತರ ನೀಡಿದ್ದಾರೆ. ಸಮಸ್ಯೆಯನ್ನು ಪಾಲಿಕೆಯ ಅರಣ್ಯ ಇಲಾಖೆ ವಿಭಾಗದ ಉಪ ಸಂರಕ್ಷಣಾಧಿಕಾರಿಗಳ ಗಮನಕ್ಕೆ ತರಲು ಸಾರ್ವಜನಿಕರು ಹಲವಾರು ಬಾರಿ ಪ್ರಯತ್ನಿಸಿದ್ದಾರೆ ಎನ್ನಲಾಗಿದ್ದು, ಅವರು ಯಾರ ಕರೆಯನ್ನು ಸ್ವೀಕರಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
* 06- ಪ್ರಾಣಿ ನಿಯಂತ್ರಣಕ್ಕೆ ಬಿಬಿಎಂಪಿ ಬಳಿಸಿರುವ ಸಿಬ್ಬಂದಿ (ಸ್ವಯಂ ಸೇವಕರು – ಖಾಯಂ ಸಿಬ್ಬಂದಿಯಲ್ಲ)
* 30- ಹಾವುಗಳು ಕಾಣಿಸಿಕೊಳ್ಳುತ್ತಿರುವ ಬಗ್ಗೆ ನಿತ್ಯ ಪಾಲಿಕೆ ಕೇಂದ್ರ ಕಚೇರಿಗೆ ಬರುತ್ತಿರುವ ದೂರುಗಳು(ವಲಯ ಮಟ್ಟದ ಮಾಹಿತಿ ಲಭ್ಯವಾಗಿಲ್ಲ)
* 198- ಬಿಬಿಎಂಪಿ ವ್ಯಾಪ್ತಿಯಲ್ಲಿರುವ ವಾರ್ಡ್‌ಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.