ಹುಬ್ಬಳ್ಳಿ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಎರಡನೇ ಬಹುಮಾನ
Team Udayavani, Jun 26, 2017, 3:50 PM IST
ಹುಬ್ಬಳ್ಳಿ: ಟೈ ಗ್ಲೋಬಲ್ ಆಯೋಜಿಸಿದ್ದ ಯುವ ಉದ್ಯಮಿಗಳ ಜಾಗತಿಕ ಮಟ್ಟದ ಸ್ಪರ್ಧೆಯಲ್ಲಿ ಹುಬ್ಬಳ್ಳಿ ವಿದ್ಯಾರ್ಥಿಗಳ ತಂಡ ವಾಯು ಮಾಲಿನ್ಯ ತಡೆ ಉಪಕರಣದ ಪ್ರದರ್ಶನ ನೀಡಿ, ವಿಶ್ವಮಟ್ಟದಲ್ಲಿ ಎರಡನೇ ಸ್ಥಾನದೊಂದಿಗೆ 2000 ಡಾಲರ್ ಬಹುಮಾನ ಬಾಚಿಕೊಂಡಿದೆ.
ಜಾಗತಿಕ ಮಟ್ಟದಲ್ಲಿ ಶನಿವಾರ ರಾತ್ರಿ ಅಮೆರಿಕಾದಲ್ಲಿ ನಡೆದ ಅಂತಿಮ ಸ್ಪರ್ಧೆಯಲ್ಲಿ ವಿವಿಧ ದೇಶಗಳ ಒಟ್ಟು 19 ತಂಡಗಳು ಪಾಲ್ಗೊಂಡಿದ್ದವು. ಹುಬ್ಬಳ್ಳಿ ವಿದ್ಯಾರ್ಥಿಗಳ ತಂಡ ವೀಡಿಯೊ ಕಾನ್ಫರೆನ್ಸ್ ಮೂಲಕ ತಾವು ತಯಾರಿಸಿದ ಏರೋಕ್ಲೀನೆಸ್ ಉಪಕರಣ ಪ್ರದರ್ಶಿಸಿದರಲ್ಲದೆ, ವಾಹನಗಳ ಮೇಲೆ ಇದನ್ನು ಅಳವಡಿಸಿಕೊಂಡು ವಾಯು ಮಾಲಿನ್ಯವನ್ನು ತಕ್ಕ ಮಟ್ಟಿಗೆ ತಡೆಯಬಹುದು ಎಂಬುದನ್ನು ವಿಶ್ಲೇಷಿಸುವ ಮೂಲಕ ತೀರ್ಪುಗಾರರ ಗಮನ ಸೆಳೆದಿದ್ದರು.
ಯುವ ಉದ್ಯಮಿಗಳ ಜಾಗತಿಕ ಮಟ್ಟದ ಸ್ಪರ್ಧೆಯ ಫಲಿತಾಂಶ ಶನಿವಾರ ತಡರಾತ್ರಿ ಹೊರಬಿದ್ದಿದ್ದು, ಇದರಲ್ಲಿ ಅಟ್ಲಾಂಟಾ ತಂಡ ಮೊದಲ ಬಹುಮಾನದೊಂದಿಗೆ 4000 ಡಾಲರ್ ಬಹುಮಾನ ಪಡೆದರೆ, ಹುಬ್ಬಳ್ಳಿ ವಿದ್ಯಾರ್ಥಿಗಳ ತಂಡ ಎರಡನೇ ಸ್ಥಾನದ ಸಾಧನೆ ತೋರಿದೆ.
8ರಿಂದ 12ನೇ ತರಗತಿಯೊಳಗಿನ ವಿದ್ಯಾರ್ಥಿಗಳಾದ ಮಾನ್ಸಿ ಮೆಳವಂಕಿ, ಹರೀಶ ನಾಯ್ಕ, ಶ್ರೇಯಸಿ ಪಾಟೀಲ,ಅನನ್ಯಾ ನಿಡವಣಿ, ಪವನ್ ಕರ್ನಮ್, ಸಾಕ್ಷಿ ಮಹಾಜನ್, ಮಾನವಿ ಟಾಕೆ, ಅಂಜಲಿ ನೀರಲಗಿ, ಆದಿತ್ಯ ಅಮೀನಗಡ ಅವರ ತಂಡ ಟೈ ಹುಬ್ಬಳ್ಳಿ ಘಟಕದ ಮಾರ್ಗದರ್ಶನ ಹಾಗೂ ಪ್ರೋತ್ಸಾಹದೊಂದಿಗೆ ವಿಶ್ವದ ವಿವಿಧ ದೇಶಗಳ ಪೈಪೋಟಿಯನ್ನು ಮೆಟ್ಟಿ ನಿಂತು ಹುಬ್ಬಳ್ಳಿ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಬೆಳಗಿಸುವ ಸಾಧನೆ ತೋರಿದೆ.
ವಿದ್ಯಾರ್ಥಿಗಳ ಸಾಧನೆಗೆ ಸಂದೀಪ ಬಿಡಸಾರಿಯಾ, ಗೌತಮ್ ಓಸ್ತ್ವಾಲ್, ವಿಜಯ ಮಾನೆ, ಶಶಿಧರ ಶೆಟ್ಟರ ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.