ಅಮೆರಿಕ ಭಾರತದ ನಿಜವಾದ ಮಿತ್ರ: ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೆಮ್ಮೆ

Team Udayavani, Jun 27, 2017, 10:50 AM IST

Modi-Trump handshake-700.jpg

ವಾಷಿಂಗ್ಟನ್‌ : ಶ್ವೇತಭವನದಲ್ಲಿ ಭಾರತವು ತನ್ನ ನಿಜವಾದ ಮಿತ್ರನನ್ನು ಹೊಂದಿದೆ ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಹೇಳುವುದರೊಂದಿಗೆ ಅಮೆರಿಕ ಮತ್ತು ಭಾರತದ ನಡುವಿನ ಬಾಂಧವ್ಯ ಎಷ್ಟು ಉನ್ನತ ಮಟ್ಟದಲ್ಲಿದೆ ಎಂಬುದು ವಿಶ್ವಕ್ಕೇ ಸಾಬೀತಾದಂತಾಗಿದೆ. 

ಅಧ್ಯಕ್ಷ ಟ್ರಂಪ್‌ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಉಭಯ ದೇಶಗಳ ನಡುವಿನ ಬಾಂಧವ್ಯ ವೃದ್ದಿಗೆ ಹೆಚ್ಚಿನ ಒತ್ತು ನೀಡುವ ಬದ್ಧತೆಯನ್ನು ಪುನರುಚ್ಚರಿಸಿದಲ್ಲದೆ ಪಾಕ್‌ ನೆಲದಿಂದ ಹೊರಹೊಮ್ಮುತ್ತಿರುವ ಭಯೋತ್ಪಾದನೆಯನ್ನು ಮಟ್ಟ ಹಾಕುವ ಬಗ್ಗೆ ಕಠಿನವಾದ ಮಾತುಗಳನ್ನು ಆಡಿದರು. ಅಂತಾರಾಷ್ಟ್ರೀಯ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಸಹಕರಿಸುವಲ್ಲಿನ ತಮ್ಮ ಬದ್ಧತೆಯನ್ನು  ಉಭಯ ನಾಯಕರು ಈ ಸಂದರ್ಭದಲ್ಲಿ ಘೋಷಿಸಿದರು. 

ಪಾಕಿಸ್ಥಾನದಲ್ಲಿ ನೆಲೆ ಹೊಂದಿರುವ ಉಗ್ರ ಸಂಘಟನೆಗಳಾಗಿರುವ ಜೈಶ್‌ ಎ ಮೊಹಮ್ಮದ್‌, ಲಷ್ಕರ್‌ ಎ ತಯ್ಯಬ ಮತ್ತು ಡಿ-ಕಂಪೆನಿ (ದಾವೂದ್‌ ಇಬ್ರಾಹಿಂ) ವಿರುದ್ಧ ತಮ್ಮ ಹೋರಾಟವನ್ನು ಬಲಪಡಿಸುವ ಮತ್ತು ಪರಸ್ಪರ ಸಹಕರಿಸುವ ವಾಗ್ಧಾನವನ್ನು ಉಭಯ ರಾಷ್ಟ್ರಗಳ ನಾಯಕರು ಮಾಡಿದರು. 

ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೊಳಗಿನ ಮಾತುಕತೆಗಳ ಬಳಿಕ ಹೊರಡಿಸಲಾದ ಜಂಟಿ ಹೇಳಿಕೆಯಲ್ಲಿ  ಭಾರತ ಮತ್ತು ಅಮೆರಿಕ, “26/1ರ ಮುಂಬಯಿ ದಾಳಿ, ಪಠಾಣ್‌ ಕೋಟ್‌ ದಾಳಿ, ಗಡಿಯಾಚೆಗಿನ ಭಯೋತ್ಪಾದನೆಯಲ್ಲಿ ತೊಡಗಿಕೊಂಡಿರುವ ಉಗ್ರರ ವಿರುದ್ಧ ಈ ಪಾಕಿಸ್ಥಾನ ಈ ಕೂಡಲೇ ಕಠಿನ ಹಾಗೂ ನಿರ್ಣಾಯಕ ಕ್ರಮ ತೆಗೆದುಕೊಳ್ಳಬೇಕು’ ಎಂದು ಇಸ್ಲಾಮಾಬಾದನ್ನು ಆಗ್ರಹಿಸಿದವು. 

ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್‌ ಅವರು ವ್ಯಾಪಕ ದ್ವಿಪಕ್ಷೀಯ ವಿಷಯಗಳ ಕುರಿತು ಮಾತುಕತೆ ನಡೆಸಿದರು. ಅವುಗಳಲ್ಲಿ ರಕ್ಷಣೆ, ಭದ್ರತೆ, ಅಫ್ಘಾನಿಸ್ಥಾನವೇ ಮುಂತಾಗಿ ಪ್ರಾದೇಶಿಕ ವಿಷಯಗಳ ಕುರಿತಾದ  ಸಂಪರ್ಕ, ಸಂವಹನ, ಹಿಂದೂ ಮಹಾಸಾಗರ, ಪೂರ್ವ ಏಶ್ಯ ಮತ್ತು ಮಧ್ಯ ಪೂರ್ವ, ಎನ್‌ಎಸ್‌ಜಿ ಮತ್ತು ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ಕುರಿತ ವಿಚಾರಗಳು ಮುಖ್ಯವಾಗಿ ಚರ್ಚಿತವಾದವು; ಜತೆಗೆ ತೆರಿಗೆ, ನವೋನ್‌ಮೇಷತೆ, ಉದ್ಯಮಶೀಲತೆ ಮತ್ತು ವಿಶೇಷವಾಗಿ ಡಿಜಿಟಲ್‌ ಪಾಲುದಾರಿಕೆ ವಿಷಯಗಳು ಕೂಡ ಚರ್ಚಿತವಾದವು ಎಂದು ವಿದೇಶ ಕಾರ್ಯದರ್ಶಿ ಎಸ್‌ ಜೈಶಂಕರ್‌ ತಿಳಿಸಿದರು. 
 
ಟಾಪ್ ನ್ಯೂಸ್

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.