ಸಿದ್ದರಾಮಯ್ಯ ಡೋಂಗಿ ರಾಜಕಾರಣಿ


Team Udayavani, Jun 27, 2017, 11:23 AM IST

ananthkumar.jpg

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಎಡಬಿಡಂಗಿ ಹಾಗೂ ಡೋಂಗಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ್‌ ಆರೋಪಿಸಿದ್ದಾರೆ. ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸೋಮವಾರ “ತುರ್ತುಪರಿಸ್ಥಿತಿಯ ಕರಾಳ ನೆನಪು’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಿದ್ದರಾಮಯ್ಯ ಅವರು 1975-77ರಲ್ಲಿ ಜೆಪಿ ಆಂದೋಲನದ ಭಾಗವಾಗಿ, ಯುವ ನಾಯಕರಾಗಿ ರಾಜ್ಯದಲ್ಲಿ ಹೋರಾಟ ನಡೆಸಿದ್ದರು. ಆದರೆ, ಜೆಪಿ ಆಂದೋಲನದ ಮೂಲಕ ಯಾವ ಪಕ್ಷದ ಸರ್ವಾಧಿಕಾರಿ ಧೋರಣೆ ವಿರುದ್ಧ ಹೋರಾಡಿದರೋ ಆ ಪಕ್ಷ ಸೇರಿಕೊಂಡು ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರ ಅಡಿಯಾಳಾಗಿ ಕೆಲಸ ಮಾಡುತ್ತಾ ಜೆಪಿ ಆಶಯಗಳಿಗೆ ದ್ರೋಹ ಮಾಡಿದ್ದಾರೆ ಎಂದು ಟೀಕಿಸಿದರು. 

ಅಧಿಕಾರ ಇರುವುದೇ ಭ್ರಷ್ಟಾಚಾರ, ಶೋಷಣೆ, ದಬ್ಟಾಳಿಕೆ ಮಾಡಲು ಎನ್ನುವ ಕಾಂಗ್ರೆಸ್‌ ಪಕ್ಷವನ್ನು ದೇಶಾದ್ಯಂತ ಅಧಿಕಾರದಿಂದ ಹೊರಹಾಕಲು ಸ್ವಾತಂತ್ರ ಪೂರ್ವದಲ್ಲಿ ಹೇಗೆ ನಾವು ಬ್ರಿಟೀಷರು ಬೇಡ ಎಂಬ ಕಹಳೆಯನ್ನು ಊದಿದ್ದೆವೋ ಅದೇ ರೀತಿ ಬ್ರಿಟೀಷರ ದಬ್ಟಾಳಿಕೆ, ಭ್ರಷ್ಟಾಚಾರ ಮತ್ತು ಶೋಷಣೆಯ ಸಂಸ್ಕೃತಿ ಮುಂದುವರಿಸುತ್ತಿರುವ ನವ ಬ್ರಿಟಿಷರಾದ ಕಾಂಗ್ರೆಸ್‌ವರ ಆಡಳಿತ ಬೇಡ ಎನ್ನುವ ಹೋರಾಟ ಮಾಡಬೇಕು.

ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ರಣಕಹಳೆ ಊದಲಾಗಿದೆ ಎಂದು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮಾತನಾಡಿ, ತುರ್ತುಪರಿಸ್ಥಿತಿಯ ಕರಾಳ ನೆನಪು ಮಾಡಿಕೊಂಡು ಬ್ರಿಟೀಷರನ್ನೂ ನಾಚಿಸುವ ರೀತಿ ನಡೆದುಕೊಂಡ ಕಾಂಗ್ರೆಸ್‌ ದೇಶದಲ್ಲಿ ಹುಡುಕಿದರೂ ಕೈಗೆ ಸಿಗಬಾರದು. ಲೋಕಸಭೆ, ವಿಧಾನಸಭೆಯಲ್ಲಿ ಆ ಪರಿಸ್ಥಿತಿ ನಿರ್ಮಾಣವಾಗಬೇಕು. ಈಗಾಗಲೇ ಆಗುತ್ತಿದೆ.

ಅದೇ ರೀತಿ ಕರ್ನಾಟಕದಲ್ಲೂ ಅದನ್ನು ಸವಾಲಾಗಿ ಸ್ವೀಕರಿಸಿ ಕಾಂಗ್ರೆಸ್‌ ಮುಕ್ತ ಭಾರತದ ಮೂಲಕ ದೇಶಕ್ಕೆ ಮತ್ತೆ ಸ್ವಾತಂತ್ರ ತಂದುಕೊಡುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮುಖಂಡರಾದ ಸಿ.ಟಿ.ರವಿ, ರಾಮಚಂದ್ರಗೌಡ, ಬಿ.ಎನ್‌.ವಿಜಯಕುಮಾರ್‌, ಎನ್‌.ರವಿಕುಮಾರ್‌ ಹಾಜರಿದ್ದರು.

ಸ್ವಾತಂತ್ರ ಹೋರಾಟದ ನೆನಪುಗಳನ್ನು ಹೇಗೆ ಮುಂದಿನ ಪೀಳಿಗೆಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇವೋ ಅದೇ ರೀತಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಡೆದ ಹೋರಾಟ, ಜೆಪಿ ಆಂದೋಲನವನ್ನೂ ಮುಂದಿನ ಪೀಳಿಗೆಗೆ ತಲುಪಿಸಬೇಕು. ಅದಕ್ಕಾಗಿ ಮುಖ್ಯಮಂತ್ರಿಗಳಾದ ಬಳಿಕ ಈ ವಿಚಾರಗಳನ್ನು ಶಾಲಾ ಪಠದಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಬಿ.ಎಸ್‌.ಯಡಿಯೂರಪ್ಪ ಅವರಲ್ಲಿ ಮನವಿ ಮಾಡುತ್ತೇನೆ.
-ಅನಂತಕುಮಾರ್‌, ಕೇಂದ್ರ ಸಚಿವ

ಟಾಪ್ ನ್ಯೂಸ್

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.