ಸವಿತಾ ಸಮಾಜ ಅಭಿವೃದ್ಧಿಗೆ ಸರ್ಕಾರ ಬದ್ಧ: ಪಾಟೀಲ
Team Udayavani, Jun 27, 2017, 2:50 PM IST
ಕಲಬುರಗಿ: ಕಾಯಕ ಜೀವಿಗಳಾದ ಸವಿತಾ ಸಮಾಜದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು. ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಸವಿತಾ ಸಮಾಜ ಸರ್ಕಾರಿ, ಅರೆ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
ಸವಿತಾ ಸಮಾಜದಲ್ಲಿ ಅನೇಕರು ಪ್ರತಿಭಾವಂತರಿದ್ದಾರೆ. ಸಮಾಜದ ಸರ್ವಾಂಗೀಣ ಪ್ರಗತಿಗೆ ಕೌಶಲ ಅಭಿವೃದ್ಧಿ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸಾನ್ನಿಧ್ಯ ವಹಿಸಿದ್ದ ಕೊಂಚೂರು ಸವಿತಾ ಪೀಠದ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿ, ಸವಿತಾ ಸಮಾಜದ ಯುವ ಜನರಿಗೆ ಕೌಶಲ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಪ್ರಗತಿಯತ್ತ ಸಾಗಬೇಕಾದರೆ ಕಾಲಕ್ಕೆ ತಕ್ಕಂತಹ ಕೌಶಲ ಕಲಿಯಬಯಬೇಕಾಗುತ್ತದೆ. ಈ ದಿಸೆಯಲ್ಲಿ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು. ಸವಿತಾ ಸಮಾಜ ಸರ್ಕಾರಿ, ಅರೆಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗಪ್ಪ ಟಿ.ಗೋಗಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕಿ ಅರುಣಾ ಸಿ. ಪಾಟೀಲ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಚಿಂತಕರಾದ ಡಾ| ಟಿ.ಎಸ್.ವಿವೇಕಾಂದ, ಸವಿತಾ ಸಮಾಜ ಸರ್ಕಾರಿ, ಅರೆ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಡಾ| ಶಿವಮೂರ್ತಿ ಜಿ., ಮಹಾನಗರ ಪಾಲಿಕೆ ಸದಸ್ಯ ಪರಶುರಾಮ ನಸಲವಾಯಿ, ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಜಯಭಸ್ಕರ್ ಇಟಗಿ, ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ನರಸಿಂಗ್ ಮೋತಕಪಲ್ಲಿ, ಗೌರವಾಧ್ಯಕ್ಷ ದತ್ತಾತ್ರೇಯ ಚೌಧರಿ ಇದ್ದರು.
ಸವಿತಾ ಸಮಾಜದ ಸರ್ಕಾರಿ, ಅರೆ ಸರ್ಕಾರಿ ನೌಕರರ ಸಂಘದಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿ, ಸ್ನಾತಕ, ಸ್ನಾತಕೊತ್ತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು. ರಾಯಚೂರು, ಬೀದರ, ಯಾದಗಿರಿ ಹಾಗೂ ವಿವಿಧ ಜಿಲ್ಲೆಯ ಸವಿತಾ ಸಮಾಜ ಸರ್ಕಾರಿ, ಅರೆಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಹಾಂತೇಶ ಹಡಗಿಲರಿಂದ ಸುಗಮ ಸಂಗೀತ, ಎಂ.ವೈ. ಸುರಪುರ ಅವರಿಂದ ಶಾಸ್ತ್ರೀಯ ಸಂಗೀತ ಏರ್ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.