ಆರ್ಡರ್ಲಿ ಜಾರಿಯಲ್ಲಿರುವ ಬಗ್ಗೆ ದೂರು ದಾಖಲು
Team Udayavani, Jun 28, 2017, 11:41 AM IST
ಬೆಂಗಳೂರು: ಎರಡು ತಿಂಗಳ ಹಿಂದೆಯೇ ಆರ್ಡರ್ಲಿ ಪದ್ಧತಿಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದ್ದರೂ ಕೆಲ ಹಿರಿಯ ಪೊಲೀಸ್ ಅಧಿಕಾರಿಗಳು ಇನ್ನೂ ಸ್ವಂತ ಕೆಲಸಕ್ಕೆ ಆರ್ಡರ್ಲಿಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ವಕೀಲರಾದ ಸುಧಾ ಕಾಟ್ವಾ ಮಂಗಳವಾರ ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ದೂರು ನೀಡಿದ್ದಾರೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ಸೇರಿದಂತೆ ರಾಜ್ಯದ ಉನ್ನತ ಹುದ್ದೆಯಲ್ಲಿರುವ 81 ಹಿರಿಯ ಪೊಲೀಸ್ ಅಧಿಕಾರಿಗಳು ಸರ್ಕಾರದ ಆದೇಶ ಉಲ್ಲಂ ಸಿ ಆರ್ಡರ್ಲಿಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷರಾದ ಎ.ಎಸ್.ಪುಚ್ಚಾಪುರೆ ಅವರಿಗೆ ದೂರು ನೀಡಿದ್ದಾರೆ.
ಮಾ.8 ರಂದು ಆರ್ಡರ್ಲಿ ಪದ್ಧತಿ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಅಧಿಕಾರಿಗಳು ಪೊಲೀಸ್ ಪೇದೆಗಳನ್ನು ಜೀತದಾಳುಗಳಂತೆ ದುಡಿಸಿ ಕೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆಯೇ ಸರ್ಕಾರದ ಆದೇಶವನ್ನು ಪಾಲನೆ ಮಾಡದಿರುವುದು ಕಾನೂನು ಉಲ್ಲಂಘನೆಯಾಗುತ್ತಿದೆ. ಅಲ್ಲದೇ ಮಾನವ ಹಕ್ಕುಗಳ ಉಲ್ಲಂಘನೆ ಕೂಡ ಆಗಿದೆ ಎಂದು ವಕೀಲರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಡಿಜಿಪಿಯೇ ಅತೀ ಹೆಚ್ಚು: ರಾಜ್ಯ ಪೊಲೀಸ್ ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ಅವರೇ ಅತೀ ಹೆಚ್ಚು ಆರ್ಡರ್ಲಿಗಳನ್ನು ಹೊಂದಿದ್ದಾರೆ ಎಂಬ ಅಂಶ ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ದಾಖಲೆಗಳಲ್ಲಿ ಬಹಿರಂಗವಾಗಿದ್ದು, ಐವರು ಆರ್ಡರ್ಲಿಗಳನ್ನು ಬಳಸಿಕೊಳ್ಳುತ್ತಿದ್ದಾರೆ.
ಐಪಿಎಸ್ ಮತ್ತು ಕೆಎಸ್‌ಪಿಎಸ್ ಅಧಿಕಾರಿಗಳು ಸೇರಿದಂತೆ ಕೆಎಸ್‌ಆರ್‌ಪಿ ಕಮಾಂಡೊಗಳು ಹಾಗೂ ಕೆಎಸ್‌ಆರ್‌ಪಿ ಇನ್‌ಸ್ಪೆಕ್ಟರ್‌ಗಳೂ ಸಹ ಆರ್ಡರ್ಲಿ ಬಳಸಿಕೊಳ್ಳುತ್ತಿರುವುದು ತಿಳಿದುಬಂದಿದೆ. ಅಲ್ಲದೇ ನಾಲ್ವರು ಐಪಿಎಸ್ ಅಧಿಕಾರಿಗಳು ಸೇರಿದಂತೆ ಒಟ್ಟು 6 ಮಂದಿ ಅಧಿಕಾರಿಗಳು ಆರ್ಡರ್ಲಿ ರದ್ದು ಆದೇಶ ನಂತರವೂ ಆರ್ಡರ್ಲಿ ಬೇಕೆಂದು ಪೇದೆಗಳನ್ನು ನೇಮಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಸಂಬಳ ವಸೂಲಿ ಮಾಡಿ: ಸರ್ಕಾರದ ಆದೇಶವನ್ನು ಉಲ್ಲಂ ಸಿ ಆರ್ಡರ್ಲಿಗಳನ್ನು ಬಳಸಿಕೊಳ್ಳುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಕಾನೂನು ಜಾರಿಗೊಂಡರು ಇದುವರೆಗೂ ಅಧಿಕಾರಿಗಳ ಮನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರ್ಡರ್ಲಿಗಳ ಪೇದೆಗಳ ಸಂಬಳ, ಭತ್ಯೆ ಹಾಗೂ ಇತರೆ ಸೌಲಭ್ಯಗಳ ಹಣವನ್ನು ಬಳಸಿಕೊಳ್ಳುತ್ತಿರುವ ಹಿರಿಯ ಅಧಿಕಾರಿಗಳಿಂದ ಹಣ ವಸೂಲಿ ಮಾಡಿ ಸರ್ಕಾರದ ಖಜಾನೆಗೆ ಜಮಾ ಮಾಡಬೇಕು ಎಂದು ದೂರುದಾರರು ಮನವಿ ಮಾಡಿದ್ದಾರೆ.
ಆರ್ಡರ್ಲಿ ರದ್ದಾಗಿದೆ ಎಂದಿದ್ದ ಗೃಹ ಸಚಿವ: ಇತ್ತೀಚೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಆರ್ಡಲಿ ಪದ್ಧತಿ ರದ್ದು ಮಾಡಿರುವುದರಿಂದ ಹೊಸದಾಗಿ “ಫಾಲೋವರ್ಸ್’ ಹುದ್ದೆಗಳ ನೇಮಕಕ್ಕೆ ಸರ್ಕಾರ ತೀರ್ಮಾನಿಸಿದೆ ಎಂದಿದ್ದರು. ಹಿರಿಯ ಪೊಲೀಸರ ಸಹಾಯಕ್ಕೆ ಡಿ ಗ್ರೂಪ್ ಶ್ರೇಣಿಯ ಸುಮಾರು 3 ಸಾವಿರ ಮಂದಿ ಆರ್ಡರ್ಲಿ ಸಿಬ್ಬಂದಿಯನ್ನು ಬಿಡುಗಡೆ ಮಾಡಿ ಅವರ ಜಾಗಕ್ಕೆ ಫಾಲೋವರ್ಸ್ ನೇಮಕ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಈಗಾಗಲೇ ಶಿಫಾರಸು ಮಾಡಲಾಗಿದೆ ಎಂದು ಹೇಳಿದರು.
ಪ್ರಾಧಿಕಾರದ ಸದಸ್ಯರಿಂದಲೇ ಉಲ್ಲಂಘನೆ: ಪೊಲೀಸ್ ದೂರು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಡಿಜಿಪಿ ಸಂಜಯ್ ಸಹಾಯ್, ಸದಸ್ಯೆ ಮಾಲಿನಿ ಕೃಷ್ಣ ಮೂರ್ತಿ ಕೂಡ ಸರ್ಕಾರದ ಆದೇಶ ಹಾಗೂ ಪೊಲೀಸ್ ಸಿಬ್ಬಂದಿಯ ಮಾನವ ಹಕ್ಕುಗಳನ್ನು ಸ್ಪಷ್ಟವಾಗಿ ಉಲ್ಲಂ ಸಿ ಆರ್ಡರ್ಲಿಗಳನ್ನು ನೇಮಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
81 ಮಂದಿಯಿಂದ ಆರ್ಡರ್ಲಿ ನೇಮಕ: ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ, ಎಂ.ಎನ್.ರೆಡ್ಡಿ, ನೀಲಮಣಿ ರಾಜು, ಎಡಿಜಿಪಿ ಕಮಲ್ ಪಂಥ್, ಹೆಚ್ಚುವರಿ ಪೊಲೀಸ್ ಆಯಕ್ತೆ ಮಾಲಿನಿ ಕೃಷ್ಣಮೂರ್ತಿ, ಎಡಿಜಿಪಿ ಡಾ.ಪಿ.ರವೀಂದ್ರನಾಥ್, ಎಚ್.ಎನ್.ಸತ್ಯನಾರಾಯಣರಾವ್, ಪ್ರತಾಪರೆಡ್ಡಿ, ಐಜಿಪಿ ಅರುಣ್ ಚಕ್ರವರ್ತಿ, ಚರಣ್ ರೆಡ್ಡಿ ಸೇರಿದಂತೆ ಸುಮಾರು 81 ಮಂದಿ ಆರ್ಡರ್ಲಿಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.