ಕೊನೆಗೂ ಹೆಚ್ಚುವರಿ ಡಿಸಿ ಹುದ್ದೆಗೆ ನಿಯೋಜನೆ


Team Udayavani, Jun 28, 2017, 3:20 PM IST

gul1.jpg

ಕಲಬುರಗಿ: ಕಳೆದ ಎಂಟು ತಿಂಗಳಿನಿಂದ ಖಾಲಿ ಬಿದ್ದಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಹುದ್ದೆಗೆ ಕೊನೆಗೂ ದಕ್ಷ ಕೆಎಎಸ್‌ ಅಧಿಕಾರಿ ಭೀಮಾಶಂಕರ ತೆಗ್ಗಳ್ಳಿ ಅವರನ್ನು ನಿಯೋಜಿಸಲಾಗಿದೆ. ಮಂಗಳವಾರ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ನಾಗರಾಜ ಆರ್‌. ಅವರು ತೆಗ್ಗಳಿ ಅವರನ್ನು ಜಿಲ್ಲಾ ವಿಶೇಷ ಭೂಸ್ವಾಧೀನಾಧಿಕಾರಿ ಹುದ್ದೆ ಜತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಹುದ್ದೆ ಕಾರ್ಯಭಾರ ನಿಯೋಜಿಸಿ ಆದೇಶ ಹೊರಡಿಸಿದ್ದಾರೆ. 

ವಿಭಾಗೀಯ ಕೇಂದ್ರ ಹೊಂದಿರುವ ಕಲಬುರಗಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಹುದ್ದೆ ಕಳೆದ ಎಂಟು ತಿಂಗಳಿನಿಂದ ಖಾಲಿ ಬಿದ್ದಿತ್ತು. ಕಲಬುರಗಿ ಸಹಾಯಕ ಆಯುಕ್ತರೇ ಹೆಚ್ಚುವರಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಎಂಟು ತಿಂಗಳ  ಸುದೀರ್ಘ‌ ಅವಧಿವರೆಗೂ ಪ್ರಮುಖ ಹುದ್ದೆ ಖಾಲಿ ಇದ್ದಿರುವುದು ಹಾಗೂ ಆಡಳಿತ ನಿರ್ವಹಣೆ ಮೇಲೆ ತುಂಬಾ ಪರಿಣಾಮ ಬೀರಿದ್ದು ಇದೇ ಮೊದಲು. 

ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಗೋವಿಂದ ರೆಡ್ಡಿ ಅವರು ಕಳೆದ ನವೆಂಬರ್‌ 4ರಂದು ರಾಯಚೂರಿಗೆ ವರ್ಗಾವಣೆಯಾದ ನಂತರ ಇಂದಿನ ದಿನದವರೆಗೆ ಸರ್ಕಾರ ಅತ್ಯಂತ ಮಹತ್ವದ ಹುದ್ದೆಗೆ ಬೇರೆ ಅಧಿಕಾರಿಯನ್ನು ನಿಯೋಜಿಸದೇ ಖಾಲಿ ಬಿಟ್ಟಿತ್ತು. ಈಗ ಭರ್ತಿಯಾದಂತಾಗಿದೆ. ಈ ನಡುವೆ ಯಾದಗಿರಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ| ಸತೀಶ ಅವರನ್ನು ಕಲಬುರಗಿ ಹೆಚ್ಚುವರಿ ಜಿಲ್ಲಾಧಿಕಾರಿಗಳನ್ನಾಗಿ ವರ್ಗ ಮಾಡಲಾಗಿತ್ತು.

ಆದರೆ ವಿಜಯಪುರದಿಂದ ಗಂಗೂಬಾಯಿ ಮಾನಕರ್‌ ಅವರು ಯಾದಗಿರಿಗೆ ವರ್ಗವಾಗಿದ್ದರೂ ಬಾರದೇ ಇದ್ದುದರಿಂದ ಡಾ| ಸತೀಶ ಅವರು ಕಲಬುರಗಿಗೆ ಬರಲೇ ಇಲ್ಲ. ಆದರೆ ಸರ್ಕಾರ ಮತ್ತೆ ಬೇರೆ ಅಧಿಕಾರಿಯನ್ನು ಕಲಬುರಗಿ ಎಡಿಸಿ ಹುದ್ದೆಗೆ ವರ್ಗಾವಣೆಗೊಳಿಸುವ ಪ್ರಯತ್ನ ಮಾಡದಿರುವ ಹಿನ್ನೆಲೆಯಲ್ಲಿ ಖಾಲಿಬಿದ್ದಿತ್ತು.

ಈ ಕುರಿತು ಕಳೆದ ಏಪ್ರಿಲ್‌ 2ರಂದು  “ಉದಯವಾಣಿ’ಯಲ್ಲಿ ವಿಶೇಷ ವರದಿ ಮಾಡಲಾಗಿತ್ತು. ಇದಕ್ಕೆ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಸ್ಪಂದಿಸಿ ಶೀಘ್ರದಲ್ಲಿಯೇ ಎಡಿಸಿ ಹುದ್ದೆಗೆ ಕೆಎಎಸ್‌ ಅಧಿಕಾರಿಯನ್ನು ನಿಯೋಜನೆ ಮಾಡಲಾಗುವುದು  ಎಂದು ತಿಳಿಸಿದ್ದರು. ಅದು ಈಗ ಸಾಕಾರಗೊಂಡಂತಾಗಿದೆ. 

ಸಹಾಯಕ ಆಯುಕ್ತರಾಗಿ ಸೇವೆ: ಭೀಮಾಶಂಕರ ತೆಗ್ಗಳಿ ಕಲಬುರಗಿ ಹಾಗೂ ಸೇಡಂ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ. ಘತ್ತರಗಾ ಭಾಗ್ಯವಂತಿ ಹಾಗೂ ರೇವಗ್ಗಿ ರೇವಣಸಿದ್ದೇಶ್ವರ ದೇವಸ್ಥಾನ ಸೇರಿದಂತೆ ಇತರ ಖ್ಯಾತ ದೇವಾಲಯಗಳನ್ನು ವಿಶೇಷ ಆಸಕ್ತಿ ವಹಿಸಿ ಮಾದರಿಯಲ್ಲಿ ಅಭಿವೃದ್ಧಿಗೊಳಿಸಿರುವ ಭೀಮಾಶಂಕರ ಅವರು ದಕ್ಷ ಅಧಿಕಾರಿ ಎಂದೇ ಖ್ಯಾತಿ ಪಡೆದಿದ್ದಾರೆ. 

ಕಳೆದ ಮಾರ್ಚ್‌ 27ರಂದು ಚಿತ್ತಾಪುರ ತಾಲೂಕಿನ ದಂಡೋತಿ ಬಳಿ ಕಾಗಿಣಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಮಧ್ಯರಾತ್ರಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಪಾಲ್ಗೊಂಡಿದ್ದರು. ದಾಳಿ ನಂತರ ವರ್ಗಾವಣೆಯಾಗುತ್ತದೆ ಎಂಬುದನ್ನು ಸಹ “ಉದಯವಾಣಿ’ಯಲ್ಲಿ ವರದಿ ಮಾಡಲಾಗಿತ್ತು.

ತದನಂತರ ಕಳೆದ ಏ.12ರಂದು ಐಟಿಬಿಟಿ ಹಾಗೂ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ಅವರ ವಿಶೇಷ ಕರ್ತವ್ಯಾಧಿಕಾರಿಯಾಗಿ ವರ್ಗಾವಣೆಯಾಗಿದ್ದರು. ಈಗ ಕಲಬುರಗಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ.  

ಟಾಪ್ ನ್ಯೂಸ್

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.