ದನ ಕೊಂದನೆಂದು ಶಂಕಿಸಿ ಬಡಿದರು
Team Udayavani, Jun 29, 2017, 3:45 AM IST
ಗಿರಿಧ್/ಚಂಡೀಗಡ: ಹರಿಯಾಣದಲ್ಲಿ ರೈಲಿನಲ್ಲಿ ಗುಂಪೊಂದು ಮುಸ್ಲಿಂ ಸಮುದಾಯದ ಯುವಕನನ್ನು ಥಳಿಸಿ ಕೊಂದಿರುವ ಘಟನೆ ಆಕ್ರೋಶಕ್ಕೆ ಕಾರಣವಾಗಿರುವಂತೆಯೇ ಜಾರ್ಖಂಡ್‌ನ ಗಿರಿಧ್‌ನ ಬರಿಯಾಬಾದ್‌ನಲ್ಲಿ ವ್ಯಕ್ತಿಯ ಮೇಲೆ ಮನಬಂದಂತೆ ಥಳಿಸಲಾಗಿದೆ ಮತ್ತು ಆತನ ಮನೆಗೆ ಬೆಂಕಿ ಹಚ್ಚಲಾಗಿದೆ.
ಮಂಗಳವಾರ ಆ ವ್ಯಕ್ತಿಯ ಮನೆಯ ಮುಂಭಾಗದಲ್ಲಿ ತಲೆ ಇರದ ದನದ ಮೃತದ ಕಂಡುಬಂದಿರುವುದು ಗುಂಪಿಗೆ ಸಿಟ್ಟು ತರಿಸಿತು. ಆತನೇ ಗೋ ಹತ್ಯೆ ಮಾಡಿದ್ದಾನೆಂದು ಶಂಕಿಸಿ 100ಕ್ಕೂ ಅಧಿಕ ಮಂದಿ ಮನೆಗೆ ನುಗ್ಗಿ ಆತನಿಗೆ ಥಳಿಸಿತು. ಮಾತ್ರವಲ್ಲದೆ ಆತನ ಮನೆಗೆ ಬೆಂಕಿ ಹಚ್ಚಿದೆ.ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆತನನ್ನು ಧನ್‌ಬಾದ್‌ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತ ಅಪಾಯದಿಂದ ಪಾರಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ನಾಲ್ವರ ಬಂಧನ: ಇದೇ ವೇಳೆ ಮಥುರಾಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಯುವಕನನ್ನು ಥಳಿಸಿ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಇನ್ನೂ ನಾಲ್ವರನ್ನು ಬಂಧಿಸಿದ್ದಾರೆ. ಅಸುನೀಗಿದ ಯುವಕ ಹರ್ಯಾಣದ ಬಲ್ಲಾಭಗ್ರಾ ಗ್ರಾಮದಿಂದ ದಿಲ್ಲಿಗೆ ಸ್ನೇಹಿತರ ಜತೆ ಪ್ರಯಾಣಿಸುತ್ತಿದ್ದ. ಈ ಸಂದರ್ಭದಲ್ಲಿ ಗುಂಪೊಂದು ಆತ ಗೋಮಾಂಸ ಸಾಗಿಸುತ್ತಿದ್ದಾನೆಂದು ತಿಳಿದು ದಾಳಿ ನಡೆಸಿ ಥಳಿಸಿತ್ತು.
ಬೆಂಗಳೂರು ಸೇರಿ ವಿಶ್ವಾದ್ಯಂತ ಪ್ರತಿಭಟನೆ: ಈ ಘಟನೆ ಖಂಡಿಸಿ ಬೆಂಗಳೂರು, ಹೈದರಾಬಾದ್ ಸೇರಿದಂತೆ ದೇಶದ ಹಲವು ಭಾಗಗಳು, ಕೆನಡಾ, ಪಾಕಿಸ್ಥಾನ, ಅಮೆರಿಕ ಗಳಲ್ಲಿಯೂ ಪ್ರತಿಭಟನೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.