ಹಸು, ಹಸಿರು ಉಸಿರಾದಾಗ ಬಾಳು ಹಸನು: ಪೇಜಾವರ ಶ್ರೀ

Team Udayavani, Jun 29, 2017, 10:45 PM IST

Gida-29-6.jpg

ಉಡುಪಿ: ಜೀವನಕ್ಕೆ ಉಪಯುಕ್ತವಾದ ಅಂಶಗಳನ್ನೇ ನೀಡುತ್ತಿರುವ ಹಸು ಮತ್ತು ಹಸಿರು ನಮ್ಮೆಲ್ಲರ ಉಸಿರಾದಾಗ ಬಾಳು ಹಸನಾಗುವುದು ಎಂದು ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು. ಸಮರ್ಥ ಭಾರತ ಸಂಘಟನೆಯ ಮುಖಾಂತರ ರಾಜ್ಯಾದಾದ್ಯಂತ 1 ಕೋಟಿ ಗಿಡ ನೆಡುವ ಬೃಹತ್‌ ಅಭಿಯಾನಕ್ಕೆ ಮಂಗಳವಾರ ರಾಜಾಂಗಣದಲ್ಲಿ ಚಾಲನೆ ನೀಡಿ ಸಾಂಕೇತಿಕವಾಗಿ ಸಸಿಗಳನ್ನು ವಿತರಿಸಿ ಶ್ರೀಗಳು ಆಶೀರ್ವಚಿಸಿದರು. ಜನೋಪಕಾರಿಯಾಗಿರುವುದನ್ನು ಮರೆಯದೆ ಅದನ್ನು ಪೋಷಿಸಿ ಬೆಳೆಸಬೇಕು. ಗೋವಿನ ಹಾಲಿನಿಂದ ಹಿಡಿದು ಎಲ್ಲವೂ ನಮ್ಮ ಆರೋಗ್ಯಕರ ಜೀವನಕ್ಕೆ ಪೂರಕ. ಅದೇ ರೀತಿ ಗಿಡ, ಮರಗಳು ಆಮ್ಲಜನಕದಿಂದ ಹಿಡಿದು ಬದುಕು ಸಾಗಿಸಲು ಬೇಕಾದುದನ್ನು ಕೊಡುತ್ತವೆ. ಹೀಗಿರುವಾಗ ಅವುಗಳ ರಕ್ಷಣೆ ನಮ್ಮ ಕರ್ತವ್ಯವಾಗಬೇಕು ಎಂದು ಶ್ರೀಗಳು ತಿಳಿಸಿದರು.

ಪೇಜಾವರ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಆರೆಸ್ಸೆಸ್‌ನ ದಕ್ಷಿಣ ಪ್ರಾಂತ ಸಹಸಂಪರ್ಕ ಪ್ರಮುಖ್‌ ಪ್ರಕಾಶ್‌ ಪಿ.ಎಸ್‌. ಶುಭಾಶಂಸನೆಗೈದರು. ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಅದಾನಿ ಯುಪಿಸಿಎಲ್‌ನ ಕಿಶೋರ್‌ ಆಳ್ವ, ವಿಹಿಂಪದ ಪ್ರೊ| ಎಂ.ಬಿ. ಪುರಾಣಿಕ್‌, ಟಿ. ಶಂಭು ಶೆಟ್ಟಿ, ಜಗದೀಶ್‌ ಅಲ್ಸೆ, ಪ್ರಕಾಶ್‌ ಕ್ರಮಧಾರಿ ಉಪಸ್ಥಿತರಿದ್ದರು. ತಾರಾ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ಆ. 15ರವರೆಗೆ ಅಭಿಯಾನ 
ಬೈಕಾಡಿ ಸುಪ್ರಸಾದ್‌ ಶೆಟ್ಟಿ ಅವರು ಸ್ವಾಗತಿಸಿ, ಪ್ರಸ್ತಾವನೆಗೈದು, ಪರಿಸರ ಉಳಿಸಿ ಬೆಳೆಸುವ ಸಂಕಲ್ಪದೊಂದಿಗೆ ಕೈಗೊಂಡಿರುವ ಈ ಮಹಾ ಅಭಿಯಾನ ಯಶಸ್ಸಿಗೆ ಎಲ್ಲರೂ ಸಹಕರಿಸುತ್ತಿದ್ದಾರೆ. ಆ. 15ರವರೆಗೆ ಅಭಿಯಾನ ನಡೆಯಲಿದೆ. ಶಾಲೆ, ಕಾಲೇಜು, ಆಸ್ಪತ್ರೆ, ಗ್ರಾ. ಪಂ., ದೇವಸ್ಥಾನ, ಭಜನ ಮಂಡಳಿ, ಯುವಕ/ಯುವತಿ ಮಂಡಲಗಳು, ವಿವಿಧ ಒಕ್ಕೂಟ ಮೊದಲಾದ  ಸಂಸ್ಥೆಯವರನ್ನು ಸಂಪರ್ಕಿಸಲಾಗಿದ್ದು, ಅವರವರಿಗೆ ಉಪಲಭ್ಯವಿರುವ ಜಾಗದಲ್ಲಿ ಸಾಧ್ಯವಾದಷ್ಟರ ಮಟ್ಟಿಗೆ ಗಿಡ ನೆಡಲು ಮನವಿ ಮಾಡಲಾಗಿದೆ. ಯುಪಿಸಿಎಲ್‌ ಕೂಡ ಹಲವು ಲಕ್ಷ ಗಿಡ ನೆಡುವ ಭರವಸೆಯನ್ನು ಸಮರ್ಥ ಭಾರತಕ್ಕೆ ನೀಡಿದೆ ಎಂದರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.