ರಾಜ್ಯ ಕೇಳಿದಷ್ಟು ಬರದ ಪರಿಹಾರ
Team Udayavani, Jun 30, 2017, 3:35 AM IST
ಬೆಂಗಳೂರು: ಕೇಳಿದ್ದು 3,310 ಕೋಟಿ ರೂ. ಆದರೆ ಕೊಟ್ಟದ್ದು ಮಾತ್ರ 795 ಕೋಟಿ ರೂ.! ಕಳೆದ ಸಾಲಿನ ಹಿಂಗಾರಿನ ವೈಫಲ್ಯದ ಹಿನ್ನೆಲೆಯಲ್ಲಿ ಬೆಳೆ ನಷ್ಟದ ಪರಿಹಾರವಾಗಿ ರಾಜ್ಯ ಸರ್ಕಾರ ಕೇಳಿದ್ದ ಮೂರು ಸಾವಿರ ಕೋಟಿಯಲ್ಲಿ, ಕೇವಲ 795 ಕೋಟಿ ರೂ.ಗಳನ್ನು ಮಾತ್ರ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮತ್ತು ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು, ಗುರುವಾರ ದೆಹಲಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಉಸ್ತುವಾರಿಯಾಗಿರುವ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು
ಭೇಟಿ ಮಾಡಿ ಕೂಡಲೇ ಹಿಂಗಾರು ಬೆಳೆ ನಷ್ಟ ಪರಿಹಾರ ವಿತರಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ರಾಜನಾಥ ಸಿಂಗ್ ಅವರು ಹಿಂಗಾರು ಬೆಳೆ ನಷ್ಟಕ್ಕೆ 795 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿದ್ದಾರೆ.
ಮಾತುಕತೆ ಬಳಿಕ ಪ್ರತಿಕ್ರಿಯೆ ನೀಡಿದ ಕೃಷಿ ಸಚಿವ ಕೃಷ್ಣ ಬೈರೇಗೌಡ, “ರಾಜ್ಯದಲ್ಲಿ ತಲೆ ದೋರಿದ್ದ ತೀವ್ರ ಬರದ ಹಿನ್ನೆಲೆಯಲ್ಲಿ ಹಿಂಗಾರು ಹಂಗಾಮಿನ ಬೆಳೆ ನಷ್ಟಕ್ಕೆ 3,310 ಕೋಟಿ ರೂ. ಪರಿಹಾರ ಕೋರಿ ಪ್ರಸ್ತಾವ ಸಲ್ಲಿಸಲಾಗಿತ್ತು.
ಕೇಂದ್ರ ಸರ್ಕಾರದಿಂದ ಸುಮಾರು 1,200 ಕೋಟಿ ರೂ. ಪರಿಹಾರ ಸಿಗುವ ನಿರೀಕ್ಷೆಯಿತ್ತು. ಆದರೆ 795 ಕೋಟಿ ರೂ. ಮಾತ್ರ ನೀಡಲು ಒಪ್ಪಿರು ವುದರಿಂದ ನಿರಾಸೆಯಾಗಿದೆ ಎಂದರು. ಮುಂಗಾರು ಬೆಳೆನಷ್ಟಕ್ಕೆ ಪ್ರಸ್ತಾವ ಸಲ್ಲಿಸಿದಾಗಲೂ ಕೋರಿದ್ದ ಮೊತ್ತಕ್ಕಿಂತ ಕಡಿಮೆ ಪರಿಹಾರವನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿತ್ತು. ಆ ಸಂದರ್ಭದಲ್ಲಿ ಹಿಂಗಾರು ಬೆಳೆ ನಷ್ಟಕ್ಕೆ ಹೆಚ್ಚಿನ ಪರಿಹಾರ ನೀಡುವ ಭರವಸೆ ನೀಡಿತ್ತು. ಆದರೆ ಆ ಭರವಸೆಯ ಮಾತನ್ನು ಮರೆತಂತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಹಿಂಗಾರು ಹಂಗಾಮಿನ ಬೆಳೆ ನಷ್ಟಕ್ಕೆ 795 ಕೋಟಿ ರೂ. ಪರಿಹಾರ ಮಂಜೂರು ಮಾಡಿದ್ದು,
ಅದು ಯಾವಾಗ ಬಿಡುಗಡೆಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಏಕೆಂದರೆ ಕಳೆದ ಜನವರಿ 4ರಂದು ಕೇಂದ್ರ ಸರ್ಕಾರ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಘೋಷಿಸಿತ್ತು.
ಆದರೆ ಹಣ ಬಿಡುಗಡೆಯಾಗಿದ್ದು, ಮಾರ್ಚ್ 28ರಂದು. ಇದೀಗ ತ್ವರಿತವಾಗಿ ಹಣ ಬಿಡುಗಡೆ ಮಾಡುವಂತೆಯೂ ಮನವಿ ಮಾಡಲಾಗಿದೆ. ಹಿಂಗಾರು ಬೆಳೆ ನಷ್ಟ ಪರಿಹಾರ ನಿರೀಕ್ಷಿತ ಪ್ರಮಾಣದಲ್ಲಿ ಸಿಗದ ಕಾರಣ ರೈತರಿಗೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ನೀಡಲು ಸಾಧ್ಯವಾಗದು ಎಂದು ಹೇಳಿದರು. ರಾಜ್ಯದಲ್ಲಿ ಭೀಕರ ಬರ ತಲೆದೋರಿದ್ದ ಹಿನ್ನೆಲೆಯಲ್ಲಿ ಹಿಂಗಾರು ಹಂಗಾಮಿನ ಬೆಳೆ ನಷ್ಟ ಸುಮಾರು 7097 ಕೋಟಿ ರೂ. ಎಂದು ಅಂದಾಜಿಸಲಾಗಿತ್ತು. ಬಳಿಕ ಎನ್ ಡಿಆರ್ಎಫ್ ನಿಯಮಾವಳಿಯಂತೆ 3,310 ಕೋಟಿ ರೂ. ಪರಿಹಾರಕ್ಕೆ ರಾಜ್ಯ ಸರ್ಕಾರ ತಿಂಗಳ ಹಿಂದೆ ಪ್ರಸ್ತಾವ
ಸಲ್ಲಿಸಿತ್ತು. ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಇಬ್ಬರು ಸಚಿವರು,
ಅಧಿಕಾರಿಗಳೊಂದಿಗೆ ದೆಹಲಿಗೆ ತೆರಳಿ ಗುರುವಾರ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.
ಈ ಹಿಂದೆ ಮುಂಗಾರು ಹಂಗಾಮಿನಲ್ಲೂ 17,193 ಕೋಟಿ ರೂ. ಬೆಳೆ ನಷ್ಟ ಉಂಟಾಗಿತ್ತು. ಆದರೆ ಎನ್ ಡಿಆರ್ಎಫ್ ನಿಯಮಾವಳಿಯಂತೆ 7,402 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಆದರೆ ಕೇಂದ್ರ ಸರ್ಕಾರವು
1782 ಕೋಟಿ ರೂ. ಪರಿಹಾರ ಮಂಜೂರು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ.ಕ.ದ ವೈಭವಿ, ಉಡುಪಿಯ ಧೀರಜ್ ಐತಾಳ್ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ
D.K. Shivakumar: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಬಗ್ಗೆ ಚರ್ಚೆ
KEA: ಎಂಎಸ್ಸಿ ನರ್ಸಿಂಗ್: ಅರ್ಜಿ ಸಲ್ಲಿಕೆಗೆ ಡಿ. 2 ಕೊನೆ ದಿನ
Karnataka: ಪಠ್ಯಪುಸ್ತಕಕ್ಕೆ ಬೇಡಿಕೆ ಸಲ್ಲಿಸಲು ಡಿ. 9 ಕಡೇ ದಿನ
ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.