ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಮದ್ಯ ಬಂದ್?
Team Udayavani, Jun 30, 2017, 11:13 AM IST
ಬೆಂಗಳೂರು: ಅಬಕಾರಿ ಇಲಾಖೆಯ ಅಧಿಕಾರಿಗಳು ಜುಲೈ 1 ರಿಂದ ಮದ್ಯ ಮಾರಾಟವನ್ನು ನಿಷೇಧಿಸುವಂತೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯ ಭಾಗಗಳಲ್ಲಿನ ಬಾರ್ ಮತ್ತು ಪಬ್ ಮಾಲೀಕರು ಮದ್ಯ ಮಾರಾಟವನ್ನು ಸ್ಥಗಿತಗೊಳಿಸಬೇಕಿದೆ.
ಕಂದಾಯ ಇಲಾಖೆ ದಾಖಲೆಗಳಲ್ಲಿ ಎಂ.ಜಿ.ರಸ್ತೆಯನ್ನು ಇಂದಿಗೂ ರಾಷ್ಟ್ರೀಯ ಹೆದ್ದಾರಿ (ಹಳೆ ಮದ್ರಾಸ್ ರಸ್ತೆ) ಎಂದು ಉಲ್ಲೇಖವಾಗಿದೆ. ಆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ನಗರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ 500 ಮೀಟರ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷಿದ್ಧ. ಹೀಗಾಗಿ ತಾಂತ್ರಿಕವಾಗಿ ಎಂ.ಜಿ.ರಸ್ತೆಯ ರೆಸ್ಟೋರೆಂಟ್ ಮತ್ತು ಪಬ್ಗಳಲ್ಲಿ ಮದ್ಯ ಪೂರೈಕೆ ಮಾಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಬಾರ್ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ.
ಈಗಾಗಲೇ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಹಳೆ ಮದ್ರಾಸ್ ರಸ್ತೆಯ ಬದಿಯಲ್ಲಿರುವ ಬಾರ್ ಮತ್ತು ಪಬ್ಗಳಿಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ. ನೋಟಿಸ್ಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಆತಂತಕ್ಕೆ ಬಾರ್, ಪಬ್ ಮಾಲೀಕರು ಒಳಗಾಗಿದ್ದು, ಸಂಘದೊಂದಿಗೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲು ತೀರ್ಮಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.