ಪ್ರತಿಯೊಬ್ಬರೂ ಸಬಲರಾದಾಗ ರಾಷ್ಟ್ರೀಯತೆ ಕಲ್ಪನೆ ಸಾಕಾರ
Team Udayavani, Jun 30, 2017, 11:13 AM IST
ಬೆಂಗಳೂರು: ದೇಶದಲ್ಲಿ ಪ್ರತಿಯೊಬ್ಬರೂ ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಬಲರಾದಾಗ ಮಾತ್ರವೇ ರಾಷ್ಟ್ರೀಯತೆಯ ಕಲ್ಪನೆ ಸಾಕಾರಗೊಳ್ಳಲು ಸಾಧ್ಯ ಎಂದು ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆ(ಎಐಡಿಡಬ್ಲೂಎ) ಉಪಾಧ್ಯಕ್ಷೆ ಸುಭಾಷಿಣಿ ಅಲಿ ಅಭಿಪ್ರಾಯಪಟ್ಟರು.
ಗುರುವಾರ ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ “ರಾಷ್ಟ್ರೀಯತೆ-ಭಾರತವೆಂಬ ಪರಿಕಲ್ಪನೆ’ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, “ಎಲ್ಲರನ್ನೂ ಒಳಗೊಳ್ಳುವುದೇ ರಾಷ್ಟ್ರೀಯತೆ. ಆಹಾರ ಸಂಸ್ಕೃತಿಯಿಂದ ರಾಷ್ಟ್ರೀಯತೆ ನಿರ್ಧರಿಸಲಾಗದು.
ಡಾ.ಬಿ.ಆರ್.ಅಂಬೇಡ್ಕರ್‌ರವರು ಸಂವಿಧಾನದಲ್ಲಿ ಸರ್ವರಿಗೂ ಸಮಪಾಲು ನೀಡುವ ಮೂಲಕ ರಾಷ್ಟ್ರೀಯತೆಗೆ ಹೊಸ ರೂಪವನ್ನು ಕೊಟ್ಟಿದ್ದಾರೆ. ಬಿಜೆಪಿ ಅಂಬೇಡ್ಕರ್‌ರವರ ಸಂವಿಧಾನದ ಜಾಗದಲ್ಲಿ ಮನುಸ್ಮತಿಯನ್ನು ತರಲು ಹೊರಟಿದೆ,’ ಎಂದು ಆತಂಕ ವ್ಯಕ್ತಪಡಿಸಿದರು.
ಮಾಜಿ ಅಡ್ವೋಕೆಟ್ ಜನರಲ್ ಪ್ರೊ.ರವಿವರ್ಮ ಕುಮಾರ್, ಹಲವು ಧರ್ಮ, ಜಾತಿ, ಭಾಷೆಗಳನ್ನು ಹೊಂದಿರುವ ಭಾರತದಲ್ಲಿ ಜಾತ್ಯತೀತ ಮೌಲ್ಯಗಳನ್ನೊಳಗೊಂಡಿರುವುದೇ ನಿಜವಾದ ರಾಷ್ಟ್ರೀಯತೆಯಾಗಿದೆ. ಇದನ್ನು ಹಾಳುಮಾಡಲು ಸಂಘಪರಿವಾರದ ಅಂಗ ಸಂಸ್ಥೆಗಳು ಸದಾ ಪ್ರಯತ್ನಿಸುತ್ತಿವೆ. ಬ್ರಾಹ್ಮಣ ಧರ್ಮವನ್ನೇ ಹಿಂದೂ ಧರ್ಮವನ್ನಾಗಿಸಿ ದೇಶದಲ್ಲಿ ಅನಾದಿ ಕಾಲದಿಂದಲೂ ಇದ್ದ ಬಹುಸಂಸ್ಕೃತಿಯನ್ನು ವ್ಯವಸ್ಥಿತವಾಗಿ ಹಾಳು ಮಾಡಲಾಗುತ್ತಿದೆ ಎಂದು ಹೇಳಿದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್‌ಮಟ್ಟು, ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಪ್ರಮುಖರಲ್ಲಿ ಒಬ್ಬರಾಗಿರುವ ಉಡುಪಿ ಮಠದ ಪೇಜಾವರ ಶ್ರೀಗಳ ವರ್ತನೆ ಕುರಿತು ಪ್ರಗತಿಪರರು ಎಚ್ಚರ ವಹಿಸಬೇಕು. ಹಿಂದೂ ಮತೀಯ ವಾದಿಗಳು ಕಾಲಕ್ಕೆ ತಕ್ಕಂತೆ ನಡೆದುಕೊಳ್ಳುವಲ್ಲಿ ಜಾಣರಾಗಿದ್ದಾರೆ. ಈ ಕುರಿತು ಎಚ್ಚರ ತಪ್ಪಿ ಅವರನ್ನು ನಂಬಿದರೆ ಅಪಾಯ ತಪ್ಪಿದಲ್ಲ ಎಂದು ತಿಳಿಸಿದರು.
ದೇಶದ ಮೂಲಭೂತವಾದಿಗಳು “ಹಸು’ವನ್ನು ರಾಷ್ಟ್ರೀಯತೆಯ ಒಂದು ಸಂಕೇತವಾಗಿಸಿ, ದನದ ಮಾಂಸ ತಿನ್ನುವವರ ಮೇಲೆ ಮಾರಣಾಂತಿಕ ಹಲ್ಲೆಗಳನ್ನು ನಡೆಸುತ್ತಿದ್ದಾರೆ. ಹಾಗೆಯೇ “ಭಾರತ ಮಾತಾ ಕೀ ಜೈ’ ಘೋಷಣೆಗೆ ರಾಷ್ಟ್ರೀಯತೆಯನ್ನು ಸೀಮಿತಗೊಳಿಸಿ, ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದ್ದಾರೆ.
– ಸುಭಾಷಿಣಿ ಅಲಿ, ಉಪಾಧ್ಯಕ್ಷೆ, ಎಐಡಿಡಬ್ಲೂಎ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.