ಕೋಚ್ ಆದರೆ ಸೆಹವಾಗ್ ಬಾಯಿಗೆ ಬೀಗ!
Team Udayavani, Jul 1, 2017, 3:45 AM IST
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ಕೋಚ್ ಹುದ್ದೆಯ ಪೈಪೋಟಿಯಲ್ಲಿ ವೀರೇಂದ್ರ ಸೆಹವಾಗ್ ಹೆಸರು ಮುಂಚೂಣಿಯಲ್ಲಿದೆ. ಆದರೆ ಸೆಹವಾಗ್‌ಗೆ ಒಂದು ಬೇಸರದ ಸುದ್ದಿಯೂ ಇದೆ. ಒಂದೊಮ್ಮೆ ಅವರು ಕೋಚ್ ಆದರೆ ಸಾಮಾಜಿಕ ತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸುವಂತಿಲ್ಲ, ಅವರಿಗೆ ಬಾಯು¾ಚ್ಚಿಕೊಂಡಿರಿ ಎಂದು ಹೇಳಲಾಗುತ್ತದೆ ಎಂದು ಬಿಸಿಸಿಐ ಮೂಲಗಳು ಹೇಳಿವೆ.
ಸದಾ ಸಾಮಾಜಿಕ ತಾಣದಲ್ಲಿ ಒಂದಲ್ಲ ಒಂದು ಜನಪ್ರಿಯ ಹೇಳಿಕೆ ನೀಡುವ ಸೆಹವಾಗ್‌ಗೆ ಇದು ನುಂಗಲಾರದ ತುತ್ತಾಗುವುದರಲ್ಲಿ ಸಂಶಯವೇ ಇಲ್ಲ. ಜತೆಗೆ ಬಿಸಿಸಿಐ ಮತ್ತು ಸೆಹವಾಗ್ ಕಂದಕ ನಿಮಾರ್ಣವಾಗುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.
ಮುಖ್ಯ ಕೋಚ್ ಸ್ಥಾನಕ್ಕೆ ಅನಿಲ್ ಕುಂಬ್ಳೆ ರಾಜೀನಾಮೆ ನೀಡಿದ ಮೇಲೆ ಕೋಚ್ ಸ್ಥಾನಕ್ಕೆ ಸೆಹವಾಗ್ ಮತ್ತು ರವಿಶಾಸಿŒ ನಡುವೆ ತೀವ್ರ ಸ್ಪರ್ಧೆ ಏರ್ಪಟಿಟದೆ. ಸಲಹಾ ಸಮಿತಿಯಲ್ಲಿರುವ ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ ಮತ್ತು ವಿ.ವಿ.ಎಸ್. ಲಕ್ಷ್ಮಣ್ ಅವರಿಗೆ ಸೆಹವಾಗ್ ಆತ್ಮೀಯರಾಗಿದ್ದಾರೆ. ಹೀಗಾಗಿ ಕೋಚ್ ಆಗಿ ಸೆಹವಾಗ್ ಆಯ್ಕೆ ಆಗುವ ಸಾಧ್ಯತೆ ಹೆಚ್ಚಿನ ಪ್ರಮಾಣದಲ್ಲಿದೆ. ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಲು ಜು. 9 ಕೊನೆಯ ದಿನವಾಗಿದೆ. ಈಗಾಗಲೇ ಕರ್ನಾಟಕದ ದೊಡ್ಡ ಗಣೇಶ್, ಲಾಲ್‌ಚಂದ್ ರಜಪೂತ್, ಟಾಮ್ ಮೂಡಿ ಸೇರಿದಂತೆ ಹಲವರು ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
MUST WATCH
ಹೊಸ ಸೇರ್ಪಡೆ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.