ರಾಜ್ಯದ 4 ಕಡೆ ಕ್ರೈಸ್ತರ ಕೌಶಲ ಅಭಿವೃದ್ಧಿ ಕೇಂದ್ರ: ಐವನ್ ಡಿ’ಸೋಜಾ
Team Udayavani, Jul 1, 2017, 3:45 AM IST
ಮಂಗಳೂರು: ರಾಜ್ಯದ ನಾಲ್ಕು ಕಡೆಗಳಲ್ಲಿ ಕ್ರೈಸ್ತರ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪಿಸುವ ಸಂಬಂಧ ಚಿಂತನೆ ನಡೆಸಲಾಗಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ
ಮಾತನಾಡಿದ ಅವರು, ಕ್ರೈಸ್ತ ಸಮುದಾಯದ ಯುವಕ-ಯುವತಿಯರಿಗೆ ಐಎಎಸ್, ಕೆಎಎಸ್‌ನಂತಹ ತರಬೇತಿ ನೀಡುವ ನಿಟ್ಟಿನಲ್ಲಿ ಈ ಕೇಂದ್ರಗಳನ್ನು ತೆರೆಯುವ ಯೋಜನೆಯಿದೆ. ಆದರೆ ಯಾವ ಜಿಲ್ಲೆಗಳಲ್ಲಿ ಎಂಬುದನ್ನು ಇನ್ನಷ್ಟೇ ನಿರ್ಧರಿಸಬೇಕಿದೆ ಎಂದರು.
ಕ್ರೈಸ್ತ ಸಮುದಾಯದವರಿಗಾಗಿಯೇ ಸರಕಾರ ವಿವಿಧ ಯೋಜನೆಗಳನ್ನು ಕೈಗೊಂಡಿದೆ. ಸ್ವ ಉದ್ಯೋಗಕ್ಕಾಗಿ 5-7 ಲಕ್ಷ ರೂ. ಟ್ಯಾಕ್ಸಿ ಖರೀದಿ ಮಾಡಿದರೆ 3 ಲಕ್ಷ ರೂ. ಸಬ್ಸಿಡಿ ದೊರೆಯುತ್ತದೆ. ಪಶುಸಂಗೋಪನೆ ಉದ್ಯೋಗ ಮಾಡುವ
ಮಹಿಳೆಯರಿಗೆ ಶೇ. 50ರಷ್ಟು ಸಹಾಯಧನ ಸೇರಿ 40,000 ರೂ.ಗಳ ಘಟಕ ವೆಚ್ಚದಲ್ಲಿ ಸಹಾಯ ನೀಡಲಾಗುತ್ತದೆ. ಇನ್ನೂ ಅನೇಕ ಯೋಜನೆಗಳನ್ನು ಸಮು
ದಾಯಕ್ಕಾಗಿಯೇ ಮೀಸಲಿಡಲಾಗಿದೆ.
ಮಾಹಿತಿ ಕೊರತೆಯಿಂದ ಯೋಜನೆಗಳು ಹಾಗೇ ಬಾಕಿ ಆಗುತ್ತಿವೆ ಎಂದರು.ಸಿಇಟಿ ಸೆಲ್‌ನಲ್ಲಿ 20 ಕೋ. ರೂ.ಸಿಇಟಿ ಸೆಲ್‌ನಲ್ಲಿ 20 ಕೋಟಿ ರೂ.ಠೇವಣಿ ಮಾಡಲಾಗಿದ್ದು, ಸಿಇಟಿ ಬರೆದು ಸರಕಾರಿ ಕಾಲೇಜುಗಳಲ್ಲಿ ಎಂಜಿನಿ ಯರಿಂಗ್, ಮೆಡಿಕಲ್ ಓದುವ ಕ್ರೈಸ್ತ ವಿದ್ಯಾರ್ಥಿಗಳ ಶುಲ್ಕವನ್ನು ಇದರಿಂದಲೇ ಭರಿಸಲಾಗುತ್ತದೆ ಎಂದರು.
ನಿಗಮಕ್ಕೆ ಒತ್ತಾಯ
ಕ್ರೈಸ್ತ ಸಮುದಾಯದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕರ್ನಾಟಕ ಕ್ರೈಸ್ತ ಅಭಿವೃದ್ಧಿ ಪರಿಷತ್ತನ್ನು ಕ್ರೈಸ್ತ ಅಭಿವೃದ್ಧಿ ನಿಗಮ ಎಂದು ನಾಮಕರಣ ಮಾಡಬೇಕು ಎಂದು ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಐವನ್ ಡಿ’ಸೋಜಾ ಇದೇ ವೇಳೆ ತಿಳಿಸಿದರು. ಕಳೆದ ಸಾಲಿನಲ್ಲಿ ಕ್ರೈಸ್ತರ ಕಾಲನಿ ಅಭಿವೃದ್ಧಿಗೆ 100 ಕೋಟಿ ರೂ. ನೀಡಿದ್ದರೆ, ಈ ಬಾರಿಯ ಬಜೆಟ್‌ನಲ್ಲಿ ಅದನ್ನು 800 ಕೋಟಿ ರೂ.ಗಳಿಗೆ ಏರಿಸಲಾಗಿದೆ. ಅಲ್ಪಸಂಖ್ಯಾಕರ ಅಭಿವೃದ್ಧಿಗಾಗಿ 2016-17ನೇ ಸಾಲಿನಲ್ಲಿ 3750 ಕೋಟಿ ರೂ.ಗಳನ್ನು ಸರಕಾರ ಮೀಸಲಿಟ್ಟಿದೆ ಎಂದು ವಿವರಿಸಿದರು.
ಕರ್ನಾಟಕ ಕ್ರೈಸ್ತ ಅಭಿವೃದ್ಧಿ ಪರಿಷತ್ ವತಿಯಿಂದ ಕ್ರೈಸ್ತ ಸಮುದಾಯಕ್ಕೆ ನೀಡಲಾಗುವ ವಿವಿಧ ಯೋಜನೆಗಳು ಮತ್ತು ಫಲಾನುಭವಿಗಳಾಗಲು ಬೇಕಾಗುವ ಅರ್ಹತೆಗಳ ಬಗ್ಗೆ ಐವನ್ ಡಿ’ಸೋಜಾ ಅವರು ತಯಾರಿಸಿದ ಬ್ರೋಷರನ್ನು ಆ್ಯಂಜಲೂರು ಚರ್ಚ್‌ನ ಧರ್ಮಗುರು ಫಾ| ಮ್ಯಾಥ್ಯೂ ವಾಸ್ ಅವರು ಬಿಡುಗಡೆಗೊಳಿಸಿದರು.
ಫಾ| ಐಸನ್ ಪಾಲನ್, ಮಾಜಿ ಮೇಯರ್ ಅಶ್ರಫ್, ಮಾರ್ಸೆಲ್ ಮೊಂತೆರೊ, ಅನಿಲ್ ಲೋಬೊ, ಕಾರ್ಪೋರೇಟರ್ ನವೀನ್ ಡಿ’ಸೋಜಾ, ಸ್ಟೀಫನ್ ಮರೋಳಿ ಮೊದಲಾದವರು ಉಪಸ್ಥಿತರಿದ್ದರು.
ಆಧಾರ್ ನೋಂದಣಿ: ಕಾಲಾವಕಾಶಕ್ಕೆ ಆಗ್ರಹ
ಪ್ರಸ್ತುತ ಸರಕಾರದ ಯಾವುದೇ ಯೋಜನೆಗಳ ಸದುಪಯೋಗ ಪಡೆಯಲು ಆಧಾರ್ ಕಡ್ಡಾಯ ಮಾಡಿ ಸರಕಾರ ನಿರ್ದೇಶಿಸಿದೆ. ಆದರೆ ಇನ್ನೂ ಕೂಡ ಹಲವು ಮಂದಿ ಆಧಾರ್ ಕಾರ್ಡ್ ಹೊಂದಿಲ್ಲ. ಆಧಾರ್ ಕಾರ್ಡ್ ಮಾಡಿಸಿಕೊಳ್ಳುವುದಕ್ಕೆ ಕನಿಷ್ಠ ಎರಡು ತಿಂಗಳ ಕಾಲಾವಕಾಶವನ್ನು ಜನಸಾಮಾನ್ಯರಿಗೆ ನೀಡಬೇಕು ಎಂದು ಐವನ್ ಡಿ’ಸೋಜಾ ಸರಕಾರವನ್ನು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.