ರಾಘವೇಶ್ವರ ಶ್ರೀ ಪ್ರಕರಣದಿಂದ ಹಿಂದೆ ಸರಿದ ನ್ಯಾಯಪೀಠ
Team Udayavani, Jul 1, 2017, 11:19 AM IST
ಬೆಂಗಳೂರು: ಹೊಸನಗರ ರಾಮಚಂದ್ರಪುರ ಮಠದ ಪೀಠದಿಂದ ರಾಘವೇಶ್ವರ ಶ್ರೀಗಳನ್ನು ಕೆಳಗಿಳಿಸುವಂತೆ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯಿಂದ ಮುಖ್ಯನ್ಯಾಯಮೂರ್ತಿ ಎಸ್.ಕೆ ಮುಖರ್ಜಿ ನೇತೃತ್ವದ ವಿಭಾಗೀಯ ಪೀಠ ಹಿಂದೆ ಸರಿದಿದೆ.
ಶುಕ್ರವಾರ ಈ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಬೇಕಿದ್ದ ಮುಖ್ಯನ್ಯಾಯಮೂರ್ತಿ ಎಸ್.ಕೆ ಮುಖರ್ಜಿ ಹಾಗೂ ಪಿ.ಎಸ್ ದಿನೇಶ್ಕುಮಾರ್ ಅವರಿದ್ದ ವಿಭಾಗೀಯ ಪೀಠ, ನ್ಯಾಯಪೀಠದಲ್ಲಿರುವ ಒಬ್ಬರು, ಪ್ರತಿವಾದಿಗಳ ಬಗ್ಗೆ ಪೂರ್ವಗ್ರಹ ಪೀಡಿತರಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ. ಹೀಗಾಗಿ ಈ ಅರ್ಜಿ ವಿಚಾರಣೆಯಿಂದ ಹಿಂದೆ ಸರಿಯುತ್ತಿದ್ದು, ಮತ್ತೂಂದು ಪೀಠ ವರ್ಗಾಯಿಸಲಾಗುತ್ತದೆ ಎಂದು ಪ್ರತಿವಾದಿಗಳ ಪರ ವಕೀಲರಿಗೆ ತಿಳಿಸಿತು.
ಸ್ವಾಮೀಜಿಯವರ ವಿರುದ್ಧ ಹಲವು ಆರೋಪಗಳಿವೆ ಹೀಗಾಗಿ ಪೀಠದಿಂದ ಕೆಳಗಿಳಿಸಲು ನಿರ್ದೇಶಿಸುವಂತೆ ಕೋರಿ ಎದುರ್ಕುಳ ಈಶ್ವರ ಭಟ್ ಪಿಐಎಲ್ ಸಲ್ಲಿಸಿದ್ದರು. ಈ ಮಧ್ಯೆ ಅಖೀಲ ಹವ್ಯಕ ಮಹಾಸಭಾದ ನಿರ್ದೇಶಕ ಮಹಾಬಲೇಶ್ವರ ಭಟ, ಮುಖ್ಯ ನ್ಯಾಯಮೂರ್ತಿ ಎಸ್.ಕೆ ಮುಖರ್ಜಿ ಸ್ವಾಮೀಜಿ ಬಗ್ಗೆ ಪೂರ್ವಾಗ್ರಹಪೀಡಿತ ಭಾವನೆ ಹೊಂದಿದ್ದು ನಮಗೆ ನ್ಯಾಯ ಸಿಗುವ ಭರವಸೆಯಿಲ್ಲ ಎಂದು ಆರೋಪಿಸಿದ್ದರು. ವಿಚಾರಣೆಯಿಂದ ಹಿಂದೆ ಸರಿಯುವಂತೆ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.