ಮುದ್ರಾದಡಿ ಜನಕ್ಕೆ ಸಿಗಲಿ ಆರ್ಥಿಕ ನೆರವು


Team Udayavani, Jul 1, 2017, 11:20 AM IST

sadananda-gowda-mudra.jpg

ಬೆಂಗಳೂರು: ಬಡ ಮತ್ತು ಮಧ್ಯಮ ವರ್ಗಕ್ಕೆ ಆರ್ಥಿಕ ನೆರವು ನೀಡುವುದು ಬ್ಯಾಂಕುಗಳಿಗೆ ಆದ್ಯತಾ ವಿಷಯವಾಗಬೇಕು ಎಂದು ಅಭಿಪ್ರಾಯಪಟ್ಟಿರುವ ಕೇಂದ್ರ ಯೋಜನಾ ಅನುಷ್ಠಾನ ಸಚಿವ ಡಿ.ವಿ. ಸದಾನಂದಗೌಡ, ಕೇಂದ್ರ ಸರ್ಕಾರದ “ಮುದ್ರಾ’ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಒದಗಿಸುವಂತೆ ಬ್ಯಾಂಕ್‌ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. 

ನಗರ ಜಿಲ್ಲಾ ಪಂಚಾಯತ್‌ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ಬ್ಯಾಂಕುಗಳು ಬಡವರು, ಸಣ್ಣ ವ್ಯಾಪಾರಿಗಳು, ರೈತರ ಸ್ನೇಹಿ ಆಗಿರಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಕಾಳಜಿ ವಹಿಸಬೇಕು,’ ಎಂದರು. 

“ನಗರದಲ್ಲಿ 1.10 ಕೋಟಿಗೂ ಹೆಚ್ಚು ಜನಸಂಖ್ಯೆ ಇದೆ. ಇದರಲ್ಲಿ ಒಂದು ಅಂದಾಜಿನಂತೆ ಶೇ.40ರಷ್ಟು ಜನ ಬಡತನ ರೇಖೆಗಿಂತ ಕೆಳಗೆ ಇದ್ದಾರೆ. ಇವರಲ್ಲಿ ಬಹುಪಾಲು ಜನ ಬೀದಿ ಬದಿ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಕೇಂದ್ರದ ಮುದ್ರಾ ಯೋಜನೆಯಡಿ ಸಾಲ ನೀಡಿದರೆ, ಅವರ ಜೀವನಮಟ್ಟ ಸುಧಾರಿಸಬಹುದು. ಇದಕ್ಕಾಗಿ ಎಲ್ಲ ಬ್ಯಾಂಕುಗಳು ತಮ್ಮ ವ್ಯಾಪ್ತಿಯಲ್ಲಿ ಕನಿಷ್ಟ 200 ಮಂದಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡಬೇಕು,’ ಎಂದು ಸದಾನಂದಗೌಡ ಸಲಹೆ ನೀಡಿದರು. 

ಅಧಿಕಾರಿಗಳ ಗೈರಿಗೆ ಸಚಿವರು ಗರಂ: ಪ್ರಗತಿ ಪರಿಶೀಲನಾ ಸಭೆಗೆ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದ ಅಧಿಕಾರಿಗಳು ಗೈರು ಹಾಜರಾಗಿದ್ದಕ್ಕೆ ಸಚಿವ ಸದಾನಂದಗೌಡ ಗರಂ ಆದರು. ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದರ ಜೊತೆಗೆ ಮುಂದಿನ ಸಭೆಗೆ ಕಡ್ಡಾಯವಾಗಿ ಹಾಜರಾಗಲು ಸೂಚಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಗುರಿ ಮೀರಿ ಸಾಲ: 2016-17ರಲ್ಲಿ ಆದ್ಯತಾ ವಲಯಕ್ಕೆ ನಗರ ಜಿಲ್ಲೆಯಲ್ಲಿ ನಿಗದಿತ ಗುರಿ ಮೀರಿ ಸಾಲ ವಿತರಿಸಲಾಗಿದೆ ಎಂದು ಲೀಡ್‌ (ಕೆನರಾ) ಬ್ಯಾಂಕ್‌ ವ್ಯವಸ್ಥಾಪಕ ಗುರುದತ್‌ ಸಭೆಯಲ್ಲಿ ಮಾಹಿತಿ ನೀಡಿದರು. ನಗರಕ್ಕೆ 26,920  ಕೋಟಿ ರೂ. ಸಾಲ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ, ಬ್ಯಾಂಕುಗಳು 34,333 ಕೋಟಿ ರೂ. ಸಾಲ ನೀಡಿವೆ. ಕೇಂದ್ರದ ಪ್ರಧಾನಮಂತ್ರಿ ಜನ್‌ಧನ್‌ ಯೋಜನೆ ಅಡಿಯಲ್ಲಿ ಜಿಲ್ಲೆಯಲ್ಲಿ 17,46,607 ಮಂದಿ ಖಾತೆ ತೆರೆದಿದ್ದಾರೆ.

ಇವರಲ್ಲಿ 12,39,642 ಮಂದಿಗೆ ರುಪೇಕಾರ್ಡ್‌ ವಿತರಿಸಲಾಗಿದೆ. ಮುದ್ರಾ ಯೋಜನೆಯಲ್ಲಿ 52327 ಮಂದಿಗೆ ಸಾಲ ವಿತರಿಸಲಾಗಿದೆ ಎಂದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಮಂಜುಶ್ರೀ, ಭಾರತೀಯ ರಿಸರ್ವ್‌ ಬ್ಯಾಂಕ್‌ನ ಸಹಾಯಕ ವ್ಯವಸ್ಥಾಪಕ ಸಿಂಗ್‌, ನಬಾರ್ಡ್‌ನ ಸಹಾಯಕ ವ್ಯವಸ್ಥಾಪಕಿ ಪ್ರಭಾ ಹಾಗೂ  ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. 

ಮೆಟ್ರೋದಲ್ಲಿ ಸಭೆಗೆ ಬಂದ ಡಿವಿಎಸ್‌
ಪ್ರಗತಿ ಪರಿಶೀಲನಾ ಸಭೆಗೆ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಮೆಟ್ರೊ ರೈಲಿನಲ್ಲಿ ಆಗಮಿಸಿದ್ದು ವಿಶೇಷವಾಗಿತ್ತು. ಬೆಳಗ್ಗೆ 10 ಗಂಟೆಗೆ ನಗರದ ಮೈಸೂರು ಸ್ಯಾಂಡಲ್‌ ಫ್ಯಾಕ್ಟರಿ ನಿಲ್ದಾಣಕ್ಕೆ ಆಗಮಿಸಿದ ಸಚಿವರು ಎರಡು ನಿಮಿಷ ಮೆಟ್ರೊ ನಿಲ್ದಾಣದಲ್ಲಿ ರೈಲಿಗಾಗಿ ಕಾದರು. ನಂತರ ಹಸಿರು ಮೆಟ್ರೊ ರೈಲು ಮೂಲಕ ಬನಶಂಕರಿಗೆ ತೆರಳಿದರು. ಈ ವೇಳೆ ಮೆಟ್ರೊ ಪ್ರಯಾಣಿಕರೊಂದಿಗೆ ಮಾತುಕತೆ ನಡೆಸಿ, ಪ್ರಯಾಣದ ಅನುಭವ, ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು.

ಟಾಪ್ ನ್ಯೂಸ್

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.