ಕೊಳಗೇರಿ ಪ್ರದೇಶ ಘೋಷಣೆಗೆ ಸರ್ಕಾರಕ್ಕೆ ಪ್ರಸ್ತಾವನೆ: ಬೆಲ್ಲದ
Team Udayavani, Jul 1, 2017, 3:16 PM IST
ಹುಬ್ಬಳ್ಳಿ: ಇಲ್ಲಿನ ಆನಂದನಗರ ಚಂದನ ಕಾಲೋನಿಯನ್ನು ಕೊಳಗೇರಿ ಪ್ರದೇಶವೆಂದು ಘೋಷಣೆ ಮಾಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದರು. ಶುಕ್ರವಾರ ಆನಂದನಗರದ ಚಂದನ ಕಾಲೋನಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಪ್ರದೇಶದಲ್ಲಿ ವಾಸಿಸುತ್ತಿರುವವರ ಮೇಲೆ ಕೆಲವರು ಪದೇ ಪದೇ ಬೆದರಿಕೆ ಹಾಕುವ ಆರೋಪ ಕೇಳಿ ಬಂದಿದೆ. ಎಂದೋ ಮಾರಾಟ ಮಾಡಿದ ಆಸ್ತಿ ಬಗ್ಗೆ ಇದೀಗ ನಮ್ಮದೆಂದು ಹೇಳಿಕೊಂಡು ನಿವಾಸಿಗಳ ಮೇಲೆ ದಬ್ಟಾಳಿಕೆ ಮಾಡುತ್ತಿದ್ದಾರೆ. ಅಧಿಕಾರಿಗಳು ಇದನ್ನು ನೋಡಿ ಮೂಕ ಪ್ರೇಕ್ಷಕರಂತೆ ಇರುವುದು ಸರಿಯಲ್ಲ.
ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು. ಕಳೆದ 25 ವರ್ಷಗಳಿಂದ ಚಂದನ ಕಾಲೋನಿ ಯಲ್ಲಿ ಬಡವರು ವಾಸ ಮಾಡುತ್ತಿದ್ದು, ಅವರನ್ನು ಒಕ್ಕಲೆಬ್ಬಿಸಲು ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡುತ್ತಿವೆ.
ಚಂದನ ಕಾಲೋನಿಯಲ್ಲಿ ಸುಮಾರು 36 ಮನೆಗಳನ್ನು ಕೆಡವಲಾಗಿದ್ದು, ಅಲ್ಲಿನ ನಿವಾಸಿಗಳಿಗೆ ಅಲ್ಲಿಯೇ ವಾಸಿಸುವಂತೆ ತಿಳಿಸಲಾಗಿದೆ. ಈ ಹಿಂದೆ ಸುಮಾರು 25ಕ್ಕೂ ಹೆಚ್ಚು ಜನರು ಬಂದು ಇಲ್ಲಿನ ನಿವಾಸಿಗಳ ಮೇಲೆ ದೌರ್ಜನ್ಯ ಮಾಡಿ ಮನೆಗಳನ್ನು ಬುಲ್ಡೋಜರ್‌ನಿಂದ ತೆರವುಗೊಳಿಸಿರುವುದು ಕಾನೂನು ಬಾಹಿರವಾಗಿದೆ ಎಂದರು.
ಬಡವರಿಗೆ ಆದ್ಯತೆ: 17 ವರ್ಷಗಳ ಹಿಂದೆ ಬಡವರನ್ನು ಗುರುತಿಸಿ ಸರಕಾರ 612 ಫಲಾನುಭವಿಗಳಿಗೆ ಜಗದೀಶ ನಗರದಲ್ಲಿ ಆಶ್ರಯ ಮನೆಗಳನ್ನು ನೀಡಿತ್ತು. ಆದರೆ, ಅದರಲ್ಲಿ ಕೇವಲ 200 ಜನ ಮೂಲ ಫಲಾನುಭವಿಗಳು ವಾಸ ಮಾಡಿದ್ದು ಇನ್ನುಳಿದವರು ಆ ಮನೆಗಳನ್ನು ಬಾಡಿಗೆ ಅಥವಾ ಇನ್ಯಾರಿಗೋ ಮಾರಾಟ ಮಾಡಿದ್ದಾರೆ.
ನಿಯಮದ ಪ್ರಕಾರ ಆಶ್ರಯ ಮನೆಗಳ ಫಲಾನುಭವಿಗಳಿಗೆ ನೀಡಿದ ನಂತರ 15 ವರ್ಷಗಳ ವರೆಗೆ ಪರಭಾರೆ ಮಾಡಲು ಬರುವುದಿಲ್ಲ. ಆದರೆ, ಬೇರೆಡೆ ಮನೆ ಇರುವ ಫಲಾನುಭವಿಗಳು ಅಲ್ಲಿರುವ ಮನೆಗಳನ್ನು ಇನ್ನೊಬ್ಬರಿಗೆ ನೀಡಿ ಬೇರೆಡೆ ವಾಸಿಸುತ್ತಿದ್ದಾರೆ.
ಅಂತಹ ಮನೆಗಳನ್ನು ಮರಳಿ ಪಡೆದು ಅರ್ಹ ಫಲಾನುಭವಿಗಳನ್ನು ಗುರುತಿಸಿ ಆಶ್ರಯ ಮನೆಗಳನ್ನು ಮರು ಹಂಚಿಕೆ ಮಾಡಲಾಗಿದೆ ಎಂದರು. ಇದೀಗ ವಿಮಾನ ನಿಲ್ದಾಣ, ಇಸ್ಫೋಸಿಸ್ ಸೇರಿದಂತೆ ಜಗದೀಶ ನಗರದ ಭಾಗ ಅಭಿವೃದ್ಧಿ ಹೊಂದಿದ್ದು ಅಂದಿನ ಫಲಾನುಭವಿಗಳು ನಮಗೆ ಮನೆ ಬೇಕು ಎಂದು ಬರುತ್ತಿದ್ದಾರೆ.
ಆದರೆ ಈಗಾಗಲೇ ಅಧಿಕಾರಿಗಳು ಸಮೀಕ್ಷೆ ನಡೆಸಿ ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಿದ್ದಾರೆ. ನಿರ್ಮಿತಿ ಕೇಂದ್ರದವರು ನಿರ್ಮಿಸುತ್ತಿರುವ ಮನೆಗಳಲ್ಲಿ ಕಳಪೆ ಕಾಮಗಾರಿ ನಡೆಯುತ್ತಿಲ್ಲ ಎಂದರು. ಪಾಲಿಕೆ ಸದಸ್ಯ ಸತೀಶ ಹಾನಗಲ್ಲ, ಮಹೇಶ ಚಂದರಗಿ, ಅಶೋಕ ವಾಲಿಕಾರ, ಬಸವರಾಜ ಸಾಲಿ, ಶೇಖರ ಮಠದ, ಎಸಿಪಿ ಎನ್.ಬಿ. ಸಕ್ರಿ, ಡಾ| ಶಿವಾನಂದ ಚಲವಾದಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.