ಹು-ಧಾ ವಾರ್ಡ್‌ಗಳ ಸಂಖ್ಯೆ 67ರಿಂದ 82ಕ್ಕೆ ಹೆಚ್ಚಳ
Team Udayavani, Jul 1, 2017, 3:16 PM IST
ಹುಬ್ಬಳ್ಳಿ: ಮಹಾನಗರದ ವಾರ್ಡ್‌ಗಳ ಪುನರ್ ವಿಂಗಡನೆ ಕುರಿತು ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆಗಳಿದ್ದರೆ ಜುಲೈ 8ರೊಳಗೆ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಗರಾಭಿವೃದ್ಧಿ ಇಲಾಖೆ ರಾಜ್ಯಪತ್ರದಲ್ಲಿ ಮಹಾನಗರ ಪಾಲಿಕೆ ವಾರ್ಡ್‌ಗಳ ಸಂಖ್ಯೆ 67ರಿಂದ 82ಕ್ಕೆ ಹೆಚ್ಚಳಗೊಂಡಿರುವುದನ್ನು ಪ್ರಕಟಿಸಿದೆ. ಕರ್ನಾಟಕ ಮುನ್ಸಿಪಲ್ ಕಾರ್ಪೋರೇಶನ್ ಕಾಯಿದೆ 1976 ಅನ್ವಯ 2011ರ ಜನಗಣತಿ ಆಧಾರದ ಮೇಲೆ ವಾರ್ಡ್ ಪುನರ್ ವಿಂಗಡನೆ ಮಾಡಲಾಗಿದೆ ಎಂದರು.
10ರಿಂದ 13 ಸಾವಿರ ಜನಸಂಖ್ಯೆಗೆ ಅನುಗುಣವಾಗಿ ವಾರ್ಡ್ ಸಂಖ್ಯೆ ಹೆಚ್ಚಿಸಲಾಗಿದೆ. ಜೂನ್ 23ರಂದು ಅಧಿಸೂಚನೆ ಹೊರಡಿಸಲಾಗಿದ್ದು, 15 ದಿನಗಳಲ್ಲಿ ಆಕ್ಷೇಪಣೆಗಳಿದ್ದರೆ ಜಿಲ್ಲಾಧಿಕಾರಿಗೆ ಲಿಖೀತವಾಗಿ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು. ಧಾರವಾಡ (71) ವಿಧಾನಸಭೆ ಮತಕ್ಷೇತ್ರದಲ್ಲಿ 1,05,946 ಜನಸಂಖ್ಯೆಯಿದ್ದು, 8 ವಾರ್ಡ್‌ಗಳ ಸಂಖ್ಯೆ 9ಕ್ಕೆ ಹೆಚ್ಚಲಿದೆ.
ಅದೇ ರೀತಿ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇತ್ರದಲ್ಲಿ 2,56,766 ಜನಸಂಖ್ಯೆಯಿದ್ದು, 20 ವಾರ್ಡ್‌ಗಳಿದ್ದವು, ಅವುಗಳ ಸಂಖ್ಯೆ 23ಕ್ಕೆ ಹೆಚ್ಚುವುದು. ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಲ್ಲಿ 2,85,934 ಜನಸಂಖ್ಯೆಯಿದ್ದು, ವಾರ್ಡ್‌ಗಳ ಸಂಖ್ಯೆ 19ರಿಂದ 25ಕ್ಕೇರುವುದು.
ಅದೇ ರೀತಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಮತಕ್ಷೇತ್ರದಲ್ಲಿ 2,95,142 ಜನಸಂಖ್ಯೆಯಿದ್ದು, ವಾರ್ಡ್‌ಗಳ ಸಂಖ್ಯೆ 20ರಿಂದ 25ಕ್ಕೆ ಹೆಚ್ಚಲಿದೆ ಎಂದರು. 1955ರಲ್ಲಿ ಅಸ್ತಿತ್ವಕ್ಕೆ ಬಂದ ಮುನ್ಸಿಪಲ್ ಕೌನ್ಸಿಲ್ 18 ಜನ ಸದಸ್ಯರನ್ನು ಹೊಂದಿತ್ತು. 1962ರಲ್ಲಿ ಹುಬ್ಬಳ್ಳಿ-ಧಾರವಾಡ ನಗರಗಳನ್ನು ಸೇರಿಸಿ ಮುನ್ಸಿಪಲ್ ಕಾರ್ಪೋರೇಶನ್ ಎಂದು ಮೇಲ್ದರ್ಜೆಗೇರಿಸಲಾಯಿತು. ಅಲ್ಲಿಂದ ಈವರೆಗೆ 7 ಬಾರಿ ವಾರ್ಡ್‌ಗಳ ಮರು ವಿಂಗಡನೆ ಮಾಡಲಾಗಿದೆ ಎಂದರು.
ಅತಿಕ್ರಮಣ ತೆರವು ನಿರಂತರ: ಅತಿಕ್ರಮಣ ತೆರವು ಕಾರ್ಯಾಚರಣೆ ನಿರಂತರ ನಡೆಯಲಿದೆ. ಪಾಲಿಕೆ ಆಸ್ತಿಯನ್ನು ಅತಿಕ್ರಮಿಸಿಕೊಂಡಿದ್ದನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಒಂದೆರಡು ದಿನಗಳಲ್ಲಿ ತೆರವು ಕಾರ್ಯಾಚರಣೆ ಮುಗಿಯುವಂಥದ್ದಲ್ಲ ಎಂದು ತಿಳಿಸಿದರು.
ಸಿಬ್ಬಂದಿ ವಿರುದ್ಧ ಎಫ್ಐಆರ್: ನಗರದ ಕೆಲ ಬಡಾವಣೆಗಳಲ್ಲಿ ತೆರಿಗೆ ತುಂಬುವುದಾಗಿ ಹಣ ಪಡೆದು ನಾಪತ್ತೆಯಾಗಿದ್ದ ಕರ ವಸೂಲಿಗಾರ ಎಂ.ಸಿ. ಬೂದಿಹಾಳಮಠ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅಲ್ಲದೇ ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ವಲಯ ಕಚೇರಿ 5ರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬೂದಿಹಾಳಮಠ ಅನಧಿಕೃತ ಗೈರುಹಾಜರಾಗಿದ್ದರು ಎಂದರು.
ಆಸ್ತಿ ತೆರಿಗೆ ಭರಿಸುವುದಾಗಿ ಹಲವರಿಂದ ಸುಮಾರು 42,000 ರೂ. ಪಡೆದುಕೊಂಡ ಬೂದಿಹಾಳಮಠ ನಾಪತ್ತೆಯಾಗಿದ್ದಾಗಿ ತಿಳಿಸಿದರು. ಘನ ತ್ಯಾಜ್ಯ ವಿಲೇವಾರಿ ಘಟಕದ ಕುರಿತು ಪ್ರಕರಣ ಉಚ್ಚ ನ್ಯಾಯಾಲಯದಲ್ಲಿದ್ದು, ಅದು ಇತ್ಯರ್ಥಗೊಳ್ಳಬೇಕಿದೆ. ಕೆಲವು ಗುತ್ತಿಗೆದಾರರು ಟೆಂಡರ್ ನಡೆಯದಂತೆ ತಡೆಯಲು ಯತ್ನಿಸುತ್ತಿದ್ದಾರೆ ಎಂದರು. ಪಾಲಿಕೆ ಜಂಟಿ ಆಯುಕ್ತ ಅಜೀಜ್ ದೇಸಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.