ಎಚ್ಚೆತ್ತುಕೊಂಡ ಇಲಾಖೆ : ಅಪಾಯಕಾರಿ ಮರಗಳ ತೆರವು
Team Udayavani, Jul 3, 2017, 3:55 AM IST
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಹತ್ತಿರ ಇರುವ ಹೈ ವೋಲ್ಟೇಜ್ ಲೈನ್ ಹಾಗೂ ಲೋ ವೋಲ್ಟೇಜ್ ಲೈನ್‌ನ ಮೇಲೆ ಒಣಗಿದ ಮರದ ಬೃಹತ್ ಗಾತ್ರದ ಕೊಂಬೆಗಳಿಗೆ ಕೊನೆಗೂ ಮುಕ್ತಿ ದೊರೆತಿದೆ. ಮುರಿದು ಬೀಳುವ ಸ್ಥಿತಿಯಲ್ಲಿದ್ದು ಸಾರ್ವಜನಿಕರ ದೂರು ಆಲಿಸಿಯೂ ನಿರ್ಲಕ್ಷ್ಯ ವಹಿಸಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾಗೂ ಜೀವ ಹಾನಿಯ ಬಗ್ಗೆ ಕಾಳಜಿ ವಹಿಸುವ ಬದಲಾಗಿ ಮೆಸ್ಕಾಂ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಂವಹನ ಕೊರತೆಯಿಂದ ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಅಪಾಯಕಾರಿ ಮರಗಳ ಕುರಿತು ಪತ್ರಿಕೆ ವರದಿ ಮಾಡಿತ್ತು. ಈಗ ಅವುಗಳಿಗೆ ಕಡೆಗೂ ಮುಕ್ತಿ ಸಿಕ್ಕಿದೆ.
ಮೆಸ್ಕಾಂ ಇಲಾಖೆಗೆ ಹಾಗೂ ಅರಣ್ಯ ಇಲಾಖೆಗೆ ಸ್ಥಳೀಯರು ಹಲವು ಬಾರಿ ಮನವಿ ಮಾಡಿದ ಫಲವಾಗಿ ಮೆಸ್ಕಾಂ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಸ್ಥಳೀಯ ಯುವಕರ ಶ್ರಮದಾನದೊಂದಿಗೆ ಅಪಾಯಕಾರಿ ಮರಗಳನ್ನು ತೆರವು ಕಾರ್ಯಾಚರಣೆ ನಡೆಸಿದರು. ಅಪಾಯಕಾರಿ ಮರಗಳಿರುವ ಜಾಗದ ಮಾಲಕರಲ್ಲಿ ಒಬ್ಬರಾದ ಪ್ರಸಿದ್ಧ ಕಿಲ್ಲೂರು ಮನೆತನದ ಶ್ರೀಕಾಂತ್ ರಾವ್ ಮರಗಳ ವಿಲೇವಾರಿ ಕುರಿತು ಸೂಕ್ತ ಮಾರ್ಗದರ್ಶನ ನೀಡಿ ಕಟ್ಟಿಗೆಗೆ ಉಪಯೋಗ ಆಗುವಂತಹ ಎಲ್ಲ ಮರಗಳನ್ನು ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಿದರು. ಅರಣ್ಯ ಇಲಾಖೆಯ ತಾಲೂಕಿನ ಅಧಿಕಾರಿ ಹಾಗೂ ಮೆಸ್ಕಾಂ ಇಲಾಖೆಯ ಅಧಿಕಾರಿಗಳಾದ ಶಿವಶಂಕರ್, ಶಾಜಿ, ಸ್ಥಳದಲ್ಲಿ ಸೂಕ್ತ ಸಲಹೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.