ಆತ್ಮ ಶಕ್ತಿಯಿದ್ದರೆ ಗುರಿ ಸಾಧನೆ ಸಾಧ್ಯ: ಶ್ರುತಿ ಎನ್‌.ಆರ್‌. 


Team Udayavani, Jul 3, 2017, 3:45 AM IST

shruti-nr.jpg

ಪಾನೀರು: ಆತ್ಮಶಕ್ತಿ ಇದ್ದಲ್ಲಿ  ಗುರಿ ಸಾಧಿಸಲು ಸಾಧ್ಯ.  ಈ ನಿಟ್ಟಿನಲ್ಲಿ ಮಕ್ಕಳು ಸಕಾರಾತ್ಮಕ ಗುಣಗಳನ್ನು ಬೆಳೆಸುವುದರ ಜತೆಗೆ  ಸ್ಪಷ್ಟ ಗುರಿ ಹೊಂದಿ ಮುಂದುವರಿದರೆ ಭವಿಷ್ಯದಲ್ಲಿ ಉತ್ತಮ ಹೆಜ್ಜೆ ಇಡಲು ಸಾಧ್ಯ ಎಂದು ಸಹಾಯಕ  ಪೊಲೀಸ್‌ ಆಯುಕ್ತೆ ಶ್ರುತಿ ಎನ್‌. ಆರ್‌. ಹೇಳಿದರು.

ಅವರು  ಮಂಗಳೂರಿನ  ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ವತಿಯಿಂದ ರವಿವಾರ ದೇರಳಕಟ್ಟೆ ದೇಮರ್ಸಿಯಮ್ಮನವರ ಮಕ್ಕಳ ಆಶ್ರಮದಲ್ಲಿ ಏರ್ಪಡಿಸಲಾಗಿದ್ದ ಮಕ್ಕಳಿಗೆ ನೂತನ ಬಟ್ಟೆಗಳ ವಿತರಣೆ ಕಾರ್ಯಕ್ರಮವಾದ “ಪ್ರೀತಿ  ವಂಚಿತ ಕಂದಮ್ಮಗಳಿಗೆ  ವಾತ್ಸಲ್ಯದ ಅಪ್ಪು³ಗೆ’ಯಲ್ಲಿ ಭಾಗವಹಿಸಿ ಮಾತನಾಡಿದರು. 

ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಉದ್ದೇಶ ಹೊಂದಿರುವ ವೇದಿಕೆಯ ಕಾರ್ಯ ಶ್ಲಾಘನೀಯ. ಈ ಮುಖೇನ ಸಂಬಂಧಿಕರ ಪ್ರೀತಿಯಿಂದ ವಂಚಿತ ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸುವ ಕಾರ್ಯ ಆಗಿದೆ ಎಂದರು.

ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಮಂಗಳೂರು ಇದರ ಅಧ್ಯಕ್ಷ ಫ್ರಾಂಕ್ಲಿನ್‌ ಮೊಂತೇರೊ ಅಧ್ಯಕ್ಷತೆವಹಿಸಿ ಮಾತನಾಡಿ, ರಾಷ್ಟ್ರೀಯತೆ ಚಿಂತನೆಯ ಉದ್ದೀಪನ ಆಗುವ ದೃಷ್ಟಿಯಿಂದ  ವೇದಿಕೆಯನ್ನು ಸ್ಥಾಪಿಸಲಾಗಿದೆ. ಸಮಾಜದಲ್ಲಿ ಹೊಂದಾಣಿಕೆ, ಸೌಹಾರ್ದದ ಭಾವನೆಗಳನ್ನು ಬೆಳೆಸುವ ಕಾರ್ಯ ಆಗಬೇಕಿದೆ. ಇಂತಹ ಉದ್ದೇಶಗಳನ್ನು ಮುಂದಿಟ್ಟುಕೊಂಡು ವೇದಿಕೆ ಕಾರ್ಯಾಚರಿಸುತ್ತಿದೆ ಎಂದು ಹೇಳಿದರು. 

ತನ್ನ ತಾಯಿಯ ಶ್ರವಣದೋಷ ಚಿಕಿತ್ಸೆಗೆಂದು ಯುವಕನೋರ್ವ ಸಂಗ್ರಹಿಸಿಟ್ಟಿದ್ದ ಹಣವನ್ನು ಕಳ್ಳರು ಕಳವುಗೈದ ಸಂದರ್ಭದಲ್ಲಿ ಆತನಿಗೆ ಸಹಾಯಧನ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ  ಆರ್ಥಿಕವಾಗಿ ಹಿಂದುಳಿದ ಮುಸ್ಲಿಂ ಕುಟುಂಬದ ಯುವತಿಯರ ಮದುವೆಗೆ ಆರ್ಥಿಕ ಸಹಾಯ ಒದಗಿಸುವ ಯೋಜನೆ ಇದೆ ಎಂದರು.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.