ಸಿಂಡಿಕೇಟ್ ಬ್ಯಾಂಕ್ : ಎಂಡಿ, ಸಿಇಒ ಆಗಿ ಮೆಲ್ವಿನ್ ರೇಗೊ ಅಧಿಕಾರ
Team Udayavani, Jul 3, 2017, 3:30 AM IST
ಮಂಗಳೂರು: ಸಿಂಡಿಕೇಟ್ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಮೆಲ್ವಿನ್ ರೇಗೊ ಜು. 1ರಂದು ಅಧಿಕಾರ ಸ್ವೀಕರಿಸಿದರು. ಅವರು ಈ ಮೊದಲು ಬ್ಯಾಂಕ್ ಅಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಆಗಿದ್ದರು.
1984ರಲ್ಲಿ ಐಡಿಬಿಐಯಲ್ಲಿ ಕಾರ್ಯನಿರ್ವಹಣೆ ಪ್ರಾರಂಭಿಸಿದ ಅವರು 2003ರಲ್ಲಿ ಐಡಿಬಿಐ ಹೋಮ್ ಫೈನಾನ್ಸ್ ಲಿ.ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಆಗಿ ನಿಯುಕ್ತಿಗೊಂಡಿದ್ದರು. 2008ರಲ್ಲಿ ಮತ್ತೆ ಐಡಿಬಿಐಗೆ ಮರಳಿದ ಅವರು ಅಂತಾರಾಷ್ಟ್ರೀಯ ಬ್ಯಾಂಕಿಂಗ್ ವಿಭಾಗದ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು. ಬ್ಯಾಂಕಿನ ಉಪ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಪುಣೆಯ ಸಿಂಬಿಯೋಸಿಸ್ ಇನ್‌ಸ್ಟಿಟ್ಯೂಟ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್‌ನ ಎಂಬಿಎ ಪದವೀಧರರಾಗಿರುವ ರೇಗೊ ಅವರು ಕಾರ್ಪೊರೇಟ್ ಬ್ಯಾಂಕಿಂಗ್, ರಿಹೆಬ್ಲಿಟೇಶನ್ ಫೈನಾನ್ಸ್ , ಟ್ರಸರಿ, ಇಂಟರ್‌ನ್ಯಾಶನಲ್ ಆ್ಯಂಡ್ ಡೊಮೆಸ್ಟಿಕ್ ರಿಸೋರ್ಸಸ್, ಇನ್‌ಫ್ರಾಸ್ಟ್ರಕ್ಚರ್ ಕಾರ್ಪೊರೇಟ್ ಗ್ರೂಪ್ ಯೋಜನಾ ಮೌಲ್ಯಮಾಪನ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಕ್ರೀಡಾಪಟುವಾಗಿದ್ದ ರೇಗೊ ಅವರು ಸಂಗೀತ ಹಾಗೂ ರಂಗಭೂಮಿಯಲ್ಲಿ ಆಸಕ್ತಿ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ
ಮೂರು ದಿನವಾದರೂ ದಾಖಲಾಗದ ಎಫ್ಐಆರ್ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!
ಡಾ| ವೀರಪ್ಪ ಮೊಯ್ಲಿ ಕೃತಿ “ವಿಶ್ವ ಸಂಸ್ಕೃತಿಯ ಮಹಾಯಾನ’ ಭಾಗ-2 ನಾಳೆ ಬಿಡುಗಡೆ
Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ನೈಸರ್ಗಿಕ ಅನಿಲ
Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.