ಜನರಲ್ಲಿ ಹಸಿರು ಪ್ರಜ್ಞೆ ಮೂಡಿಸುವ ಪ್ರಯತ್ನ
Team Udayavani, Jul 4, 2017, 3:50 AM IST
ತಲಪಾಡಿ: ಉಚಿತವಾಗಿ ಗಿಡ ನೀಡುವ ಮೂಲಕ ಜನರಲ್ಲಿ ಹಸಿರು ಪ್ರಜ್ಞೆ ಮೂಡಿಸುವ ಪ್ರಯತ್ನ ನಡೆಸಲಾಗಿದೆ. ಗಿಡ ಮರಗಳನ್ನು ನೆಟ್ಟು ಪರಿಸರವನ್ನು ಶುಚಿಯಾಗಿಸಿಟ್ಟುಕೊಂಡಲ್ಲಿ ಸ್ವತ್ಛ ಗಾಳಿ, ಬೆಳಕು, ನೀರು ದೊರಕಿ ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ ಎಂದು ಜಿ.ಪಂ. ಮಾಜಿ ಅಧ್ಯಕ್ಷ ಅಹ್ಮದ್ ಕುಂಞಿ ಹೇಳಿದರು.
ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮತ್ತು ಸುರûಾ ದಂತ ಚಿಕಿತ್ಸಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುರûಾ ದಂತ ಚಿಕಿತ್ಸಾಲಯದ ವಿಂಶತಿಯ ಸಂಭ್ರಮದ ಅಂಗವಾಗಿ ರೋಗಿಗಳಿಗೆ ಉಚಿತ ಸಾಗುವಾನಿ ಮತ್ತು ನೇರಳೆ ಗಿಡಗಳನ್ನು ಸಾಂಕೇತಿಕವಾಗಿ ವಿತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೋಗಿಗಳಿಗೆ ಉನ್ನತ ಮಟ್ಟದ ದಂತ ಚಿಕಿತ್ಸೆ ನೀಡುವುದರ ಜತೆಗೆ, ವೈದ್ಯಕೀಯ ಲೇಖನ ಗಳನ್ನು ಬರೆದು ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುತ್ತಿರುವ ಡಾ| ಮುರಲೀ ಮತ್ತು ಡಾ| ರಾಜಶ್ರೀ ದಂಪತಿಯನ್ನು ಅಭಿನಂದಿಸಿದರು. ಸುಮಾರು ನೂರಕ್ಕೂ ಹೆಚ್ಚು ಮಂದಿಗೆ ಗಿಡಗಳನ್ನು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.