ಕೃಷಿಯೋಗ್ಯವಲ್ಲದ ಪರಿಸರವೇ ಇಲ್ಲ : ರಾಜಾರಾಂ ಶೆಟ್ಟಿ
Team Udayavani, Jul 4, 2017, 3:50 AM IST
ಮರೋಳಿ: ನಮ್ಮ ಸುತ್ತಮುತ್ತ ಸಹಸ್ರಾರು ಜೀವರಾಶಿಗಳು ಬದುಕಿ ಬಾಳುತ್ತಿವೆ. ಅವುಗಳಿಗೆಲ್ಲ ಸಸ್ಯಸಂಪತ್ತೇ ಜೀವನಾಧಾರ. ಕೃಷಿಯ ಮೂಲಕ ಈ ಸಂಪತ್ತನ್ನು ಉಳಿಸಿ ಬೆಳೆಸುವುದು ನಮ್ಮ ಆದ್ಯ ಕರ್ತವ್ಯವಾಗಬೇಕು. ಅದಕ್ಕಾಗಿ ಹೊಲ-ಗದ್ದೆಗಳೇ ಬೇಕೆಂದಿಲ್ಲ. ಏಕೆಂದರೆ, ಕೃಷಿಯೋಗ್ಯವಲ್ಲದ ಪರಿಸರವೇ ಇಲ್ಲ ಎಂದು ಕೋಲ್ಕ ತಾದ ಸಾಲ್ಬೋನಿ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಪ್ರಸ್ನ ಉಪ ಮಹಾಪ್ರಬಂಧಕ ಮನವಳಿಕೆಗುತ್ತು ರಾಜಾರಾಮ ಶೆಟ್ಟಿ ಹೇಳಿದ್ದಾರೆ.
ಅವರು ಮಂಗಳೂರಿನ ಮರೋಳಿ ಲಾಲ್ಬಹದ್ದೂರ್ ಶಾಸ್ತ್ರಿ ಬಡಾವಣೆ ಯಲ್ಲಿ ಪಡ್ಡಂಬೈಲ್ ಕೃಷ್ಣಪ್ಪ ಗೌಡರು ನಿರ್ಮಿಸಿದ ತಾರಸಿ ತೋಟಕ್ಕೆ ಭೇಟಿ ನೀಡಿದರು. ಪ್ರಾಧ್ಯಾಪಕ ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿ, ನಮ್ಮ ಭೂಮಿ ಒಂದು ಅಕ್ಷಯ ಪಾತ್ರೆ. ಅದರಲ್ಲಿ ಏನು ಬೆಳೆದರೂ ಫಲ ಕೊಡುತ್ತದೆ. ಮನೆಯ ತಾರಸಿಯ ಮೇಲೆ ಸೊಪ್ಪು ತರಕಾರಿ, ಹೂ ಹಣ್ಣು, ದವಸ ಧಾನ್ಯ ಮತ್ತು ಔಷಧೀಯ ಸಸ್ಯಗಳನ್ನು ಬೆಳೆಸುವ ಮೂಲಕ ಕೃಷ್ಣಪ್ಪ ಗೌಡ ಅವರು ಕಾಂಕ್ರೀಟ್ ಕಾಡಿನಲ್ಲಿ ಹಸಿರುಕ್ರಾಂತಿ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ ಎಂದರು.
ಸಾಹಿತಿ ಕೆ.ಲಕ್ಷ್ಮೀ ನಾರಾಯಣ ರೈ ಹರೇಕಳ ಅಭಿನಂದಿಸಿದರು. ಕೃಷ್ಣಪ್ಪ ಗೌಡ ಸ್ವಾಗತಿಸಿದರು. ಮೀನಾಕ್ಷಿ ಕೆ. ಗೌಡ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.