ವಾಣಿ ಪ.ಪೂ. ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ
Team Udayavani, Jul 4, 2017, 3:45 AM IST
ಬೆಳ್ತಂಗಡಿ : ಬಾಲ್ಯದಲ್ಲಿ ಸಿಗುವ ಉತ್ತಮ ಅವಕಾಶ ಸದುಪಯೋಗಿಸಿಕೊಂಡಾಗ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ ಬಳೆಂಜ ಹೇಳಿದರು. ಅವರು ವಾಣಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ರಚನೆಗೊಂಡ ‘ಅಕ್ಷರವಾಣಿ’ ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಿ ಮಾತನಾಡಿ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಸಾಹಿತ್ಯದ ಒಲವನ್ನು ಬೆಳೆಸಿಕೊಂಡಾಗ ಉತ್ತಮ ಬರಹಗಾರರಾಗಲು ಸಾಧ್ಯ ಎಂದರು.
ಕಾಲೇಜಿನ ಪ್ರಾಂಶುಪಾಲ ಡಿ.ಯದುಪತಿ ಗೌಡ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳ ಸೃಜನಶೀಲತೆಗೆ ಪೂರಕವಾಗಿ ಭಿತ್ತಿಪತ್ರಿಕೆಗಳು ರಚಿಸಲ್ಪಟ್ಟಿದ್ದು, ಇದರಲ್ಲಿ ಸಾಹಿತ್ಯದ ಎಲ್ಲ ಪ್ರಕಾರಗಳ ಬಳಕೆ ಕಂಡು ಬರುತ್ತದೆ.ಅಲ್ಪ ಸ್ವಲ್ಪ ವಿಷಯಗಳನ್ನು ಸಂಗ್ರಹಿಸಿ ಬರವಣಿಗೆಯಲ್ಲಿ ತೊಡಗಿಸಿಕೊಂಡು ಮುಂದಕ್ಕೆ ಸ್ವತಂತ್ರ ಬರಹಗಾರರಾಗಬಹುದು. ಗ್ರಹಿಸುವ ಶಕ್ತಿ ಮತ್ತು ಬರವಣಿಗೆಯ ಶೈಲಿಯಿಂದ ಉತ್ತಮ ಲೇಖಕರಾಗಬಹುದು ಎಂದರು. ಕಾಲೇಜಿನ ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಉಪಸ್ಥಿತರಿದ್ದರು. ಅಕ್ಷರವಾಣಿ ಭಿತ್ತಿಪತ್ರಿಕೆಯ ಸಂಯೋಜಕಿ ಕಿಶೋರಿ ಎಸ್. ರಾವ್ ಸ್ವಾಗತಿಸಿದರು. ಸೌಮ್ಯಾ ವಂದಿಸಿದರು. ಸೀಮಾ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.