26 ವಾರಗಳ ಭ್ರೂಣ ತೆಗೆಯಲು ಸುಪ್ರೀಂ ಅಸ್ತು
Team Udayavani, Jul 4, 2017, 3:45 AM IST
ನವದೆಹಲಿ: ಕೋಲ್ಕತ್ತಾದ ಮಹಿಳೆಗೆ ಆಕೆಯ 26 ವಾರಗಳ ಭ್ರೂಣವನ್ನು ತೆಗೆದುಹಾಕಲು ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ.
ಆಕೆಯ ಭ್ರೂಣವು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಮಗು ಹುಟ್ಟಿದರೆ ಅದಕ್ಕೆ ಹಲವು ಶಸ್ತ್ರಚಿಕಿತ್ಸೆಗಳನ್ನು ನಡೆಸಬೇಕಾಗುತ್ತದೆ. ಇದರಿಂದ ತಾಯಿ ಕೂಡ ಮಾನಸಿಕವಾಗಿ ಖನ್ನತೆಗೆ ಒಳಗಾಗಬಹುದು ಎಂದು ಕೋಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಯ ವೈದ್ಯರು ಮತ್ತು ವೈದ್ಯಕೀಯ ಮಂಡಳಿ ಹೇಳಿತ್ತು.
ಇದನ್ನು ಪರಿಗಣಿಸಿದ ನ್ಯಾ.ದೀಪಕ್ ಮಿಶ್ರಾ ಹಾಗೂ ನ್ಯಾ.ಕೆ. ಖನ್ವಿಳ್ಕರ್ ನೇತೃತ್ವದ ಪೀಠ, ಮಹಿಳೆಯರ ಗರ್ಭಪಾತಕ್ಕೆ ಅನುಮತಿ ನೀಡಿತು. ಅಲ್ಲದೆ, ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲೇ ಕೂಡಲೇ ಗರ್ಭಪಾತದ ವ್ಯವಸ್ಥೆ ಮಾಡಿ ಎಂದು ವೈದ್ಯರಿಗೆ ಸೂಚಿಸಿತು. ಶಿಶು ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಕಾರಣ ಗರ್ಭಪಾತಕ್ಕೆ ಅವಕಾಶ ಕಲ್ಪಿಸಬೇಕು ಎಂದು ಕೋರಿ ಮಹಿಳೆ ಮತ್ತು ಆಕೆಯ ಪತಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ 7 ಮಂದಿ ವೈದ್ಯರ ಸಮಿತಿ ರಚಿಸಿ, ವರದಿ ನೀಡುವಂತೆ ಸುಪ್ರೀಂ ನಿರ್ದೇಶಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರ ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ