ಮತ್ತೆ ಬಂದರು ಮೋಹನ್‌


Team Udayavani, Jul 4, 2017, 10:39 AM IST

mohan.jpg

“ಬಿಗ್‌ ಬಾಸ್‌’ನಿಂದ ವಾಪಸ್ಸು ಬಂದ ನಂತರ ಮೋಹನ್‌ ಅವರ ಸುದ್ದಿಯೇ ಇರಲಿಲ್ಲ. ಅವರೆಲ್ಲಿದ್ದರು, ಏನು ಮಾಡುತ್ತಿದ್ದರು ಎಂಬ ಪ್ರಶ್ನೆಗಳಿಗೆಲ್ಲಾ ಈಗ ಉತ್ತರ ಸಿಕ್ಕಿದೆ. ಮೋಹನ್‌ ಸದ್ದಿಲ್ಲದೆ ಒಂದು ಸ್ಕ್ರಿಪ್ಟ್ ರೆಡಿ ಮಾಡಿದ್ದಾರೆ. ಅದಕ್ಕೆ ಅವರಿಟ್ಟಿರುವ ಹೆಸರು “ಹಲೋ ಮಾಮ’. “ಥೂ ಹಂಗ್‌ ಕರೀಬೇಡಿ’ ಎಂಬ ಅಡಿಬರಹವೂ ಇದೆ. ಈ ಚಿತ್ರದ ಮುಹೂರ್ತವನ್ನು ಆಷಾಢಕ್ಕೂ ಮುನ್ನವೇ ಅಂದರೆ ಜೂನ್‌ 22ರಂದು ಶುರು ಮಾಡಿ, ಒಂದು ದಿನದ ಚಿತ್ರೀಕರಣವನ್ನೂ ಮಾಡಿ ಮುಗಿಸಿದ್ದಾರೆ ಮೋಹನ್‌. 

ಇದೊಂದು ಪಕ್ಕಾ ಕಾಮಿಡಿ ಚಿತ್ರ ಎನ್ನುತ್ತಾರೆ ಅವರು. “ಇವತ್ತು ಮಾಮಗಳು ಮಾಡುವಷ್ಟು ದುಡ್ಡನ್ನು ಬೇರೆ ಯಾರೂ ಮಾಡುವುದಿಲ್ಲ. ಕಷ್ಟಪಡುವವರು ಕಷ್ಟಪಡುತ್ತಲೇ ಇರುತ್ತಾರೆ. ಇನ್ನು ಕೆಲವರು ಯಾವುದೇ ಕಷ್ಟ ಪಡದೆ, ಮಧ್ಯಸ್ಥಿಕೆ ವಹಿಸಿ, ಈಸಿಯಾಗಿ ದುಡ್ಡು ಸಂಪಾದನೆ ಮಾಡುತ್ತಾರೆ. ಇದು ಯಾವುದೋ ಒಂದು ಕ್ಷೇತ್ರದಲ್ಲಲ್ಲ, ಎಲ್ಲಾ ಕ್ಷೇತ್ರದಲ್ಲೂ ಇದೆ. ಆ ತರಹದ್ದೊಂದು ಪ್ರಪಂಚವನ್ನು ಕಾಮಿಡಿಯಾಗಿ ಹೇಳುವ ಪ್ರಯತ್ನವನ್ನು ಇಲ್ಲಿ ಮಾಡುತ್ತಿದ್ದೇನೆ’ ಎನ್ನುತ್ತಾರೆ ಮೋಹನ್‌.

ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆಯುವುದರ ಜೊತೆಗೆ ಒಂದು ಪ್ರಮುಖ ಪಾತ್ರವನ್ನೂ ಅವರು ಮಾಡುತ್ತಿದ್ದಾರೆ. ಇನ್ನೊಂದು ಪ್ರಮುಖ ಪಾತ್ರದಲ್ಲಿ “ರಂಗಿ ತರಂಗ’ದ ಅರವಿಂದ್‌ ರಾವ್‌ ಇದ್ದಾರೆ. ಇನ್ನು ಎ.ಜಿ. ಶೇಷಾದ್ರಿ ಮತ್ತು ಮೋಹನ್‌ ಜೊತೆಯಾಗಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. “ಹಲೋ ಮಾಮ’ ಚಿತ್ರದಲ್ಲಿ ಇಬ್ಬರು ನಾಯಕಿಯರಿರುತ್ತಾರಂತೆ. ಇಬ್ಬರಿಗೆ ಹುಡುಕಾಟ ನಡೆಯುತ್ತಿದೆ. ಇನ್ನು ಚಿತ್ರದಲ್ಲಿ ಸಾಕಷ್ಟು ಪಾತ್ರಗಳು ಇದ್ದು, ಆ ಪಾತ್ರಗಗಳನ್ನು ಗೊತ್ತಿರುವ ನಟಿಯರಿಂದಲೇ ಮಾಡಿಸಬೇಕು ಎಂಬುದು ಮೋಹನ್‌ ಯೋಚನೆ.

ಈಗಾಗಲೇ ಅವರು ಒಂದಿಷ್ಟು ನಟಿಯರಿಗೆ ಹೇಳಿದ್ದಾರೆ. ಅಂತಿಮವಾಗಿ ಯಾರ್ಯಾರು ಚಿತ್ರದಲ್ಲಿ ಇರುತ್ತಾರೋ ನೋಡಬೇಕು. ಇನ್ನು ಚಿತ್ರವನ್ನು ಪ್ರಗತಿ ಸಿನಿ ಕ್ರಿಯೇಷನ್ಸ್‌ ಮತ್ತು ಮೋಹನ್‌ ಟಾಕೀಸ್‌ ಜೊತೆಯಾಗಿ ನಿರ್ಮಿಸುತ್ತಿದೆ. ಧರಂದೀಪ್‌ ಅವರ ಸಂಗೀತ ಮತ್ತು ಪ್ರಸಾದ್‌ ಬಾಬು ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಎಲ್ಲಾ ಸರಿ, ಮೋಹನ್‌ ಅಭಿನಯಿದ “ಕರುಣಾ-ನಿಧಿ’ ಎಂಬ ಚಿತ್ರ ಒಂದೂವರೆ ವರ್ಷಗಳ ಹಿಂದೆ ಶುರುವಾಗಿತ್ತು. ಆ ಚಿತ್ರದ ಕಥೆ ಏನಾಯಿತು ಎಂದರೆ, “ಆ ಚಿತ್ರದ ಕೆಲಸ ಬಹುತೇಕ ಮುಗಿದಿದೆ.

ಇನ್ನೊಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಇದೆ. ಸ್ವಲ್ಪ ಹಣಕಾಸಿನ ಸಮಸ್ಯೆಯಿಂದಾಗಿ ಚಿತ್ರ ನಿಂತಿದೆ. ಸದ್ಯದಲ್ಲೇ ಶುರುವಾಗಿ, ಆಗಸ್ಟ್‌ನಲ್ಲಿ ಬಿಡುಗಡೆ ಮಾಡುವ ಯೋಚನೆ ನಿರ್ಮಾಪಕರಿಗಿದೆ’ ಎನ್ನುತ್ತಾರೆ ಮೋಹನ್‌. ಇನ್ನು ಆ ಚಿತ್ರಕ್ಕೆ “ಕರುಣಾ-ನಿಧಿ’ ಎಂಬ ಹೆಸರು ಇಲ್ಲ ಎಂಬುದು ಗೊತ್ತಿರಲಿ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಟೈಟಲ್‌ ನಿರಾಕರಿಸಿದ್ದರಿಂದ, ಈಗ ಚಿತ್ರಕ್ಕೆ “ಇತ್ಯರ್ಥ’ ಎಂಬ ಹೆಸರನ್ನು ಇಡಲಾಗಿದೆ.

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Pani movie: ಕನ್ನಡದಲ್ಲಿ ಜೋಜು ಜಾರ್ಜ್‌ ಪಣಿ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.