ಸರಳತೆಯ ಮೌಲ್ಯಗಳಿಗೆ ಮನ್ನಣೆ ಸಿಗಲಿ: ಸ್ವಾಮೀಜಿ


Team Udayavani, Jul 4, 2017, 10:44 AM IST

bellary-1.jpg

ಹಗರಿಬೊಮ್ಮನಹಳ್ಳಿ: ಸರಳ ಸಾಮೂಹಿಕ ವಿವಾಹಗಳು ಬಡವರ ಪಾಲಿನ ವರಗಳಾಗಿವೆ ಎಂದು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಹೇಳಿದರು.

ಪಟ್ಟಣದ ಗುರುಭವನದಲ್ಲಿ ದೇವದಾಸಿ ವಿಮೋಚನೆ ಸಂಘ ಮತ್ತು ಡಾ| ಜ್ಯೋತಿಬಸು ಸೇವಾ ಟ್ರಸ್ಟ್‌ನಿಂದ ನಡೆದ ದೇವದಾಸಿ ಮಕ್ಕಳ ಸರಳ ಸಾಮೂಹಿಕ ಮದುವೆ ಸಮಾರಂಭದಲ್ಲಿ ಅವರು ಮಾತನಾಡಿದರು. ದೇವದಾಸಿ ಪದ್ಧತಿ, ಅಸ್ಪೃಶ್ಯತೆ ಸಾಮಾಜಿಕ ಪಿಡುಗುಗಳಾಗಿದ್ದು, ಸರಕಾರ ಅನಿಷ್ಟ ಪದ್ದತಿ ಹೋಗಲಾಡಿಸಲು ಕಟ್ಟುನಿಟ್ಟಿನ ಕ್ರಮ 
ಕೈಗೊಳ್ಳಬೇಕಿದೆ. ಸರಳ ಸಾಮೂಹಿಕ ವಿವಾಹಗಳು ಪ್ರಜಾಸತ್ತತೆಯ ಆದರ್ಶಗಳು. ಸರಳತೆಯ ಮೌಲ್ಯಗಳಿಗೆ ಮನ್ನಣೆ ಸಿಗಬೇಕು. ಸರಳ ಸಾಮೂಹಿಕ ವಿವಾಹಗಳು, ಸಾಂಪ್ರಾದಾಯಿಕ ವಿವಾಹಗಳಿಂದ ಶ್ರೇಷ್ಠವಾದವುಗಳು. ಕುಟುಂಬಗಳು ಸುಖಮಯ ಜೀವನಸಾಗಿಸಬೇಕಾದರೆ ಸೊಸೆ ಮಗಳಾಬೇಕು, ಅತ್ತೆ ತಾಯಿಯಂತಾದರೆ ಮನೆಗಳು ಹೊಡೆಯುವುದಿಲ್ಲ. ಭೌತಿಕವಾಗಿ ಪರಾವಲಂಬಿಗಳಾಗಬಾರದು. ವಿವೇಕತನದಿಂದ ಪ್ರಜ್ಞಾಪೂರ್ವಕವಾಗಿ ನಡೆದುಕೊಳ್ಳಬೇಕು. ವಿಚಾರಗಳಲ್ಲಿ ಬದಲಾವಣೆಯಾದರೆ ಮಾತ್ರ ಬದುಕು ಬದಲಾವಣೆಯಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ 7ಜೋಡಿಗಳು ನೂತನ ದಾಂಪತ್ಯಕ್ಕೆ ಕಾಲಿರಿಸಿದರು. ಮಾಜಿ ಶಾಸಕ ಜಿ.ವಿ.ರಾಮರೆಡ್ಡಿ , ಸಿಐಟಿಯು ತಾಲೂಕು ಅಧ್ಯಕ್ಷ ಎಸ್‌.ಜಗನ್ನಾಥ್‌ ಪ್ರಾಸ್ತಾವಿಕ ಮಾತನಾಡಿದರು. ಪ್ರಾಂತ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಯು. ಬಸವರಾಜ, ಪಟ್ಟಣದ ಪ್ರಥಮದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ| ಸತೀಶ್‌ ಪಾಟೀಲ, ಕೊಟ್ಟೂರೇಶ್ವರ ವಿದ್ಯಾಸಂಸ್ಥೆಯ ಮುಖ್ಯಗುರು ಅಕ್ಕಿ ಬಸವೇಶ ಮಾತನಾಡಿದರು. ದೇವದಾಸಿ ವಿಮೋಚನಾ ಸಂಘದ ರಾಜ್ಯಾಧ್ಯಕ್ಷೆ ಬಿ.ಮಾಳಮ್ಮ, ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಅರಳಿಹಳ್ಳಿ, ದೇವದಾಸಿ ವಿಮೋಚನೆ ಸಂಘದ ರಾಜ್ಯ ಕಾರ್ಯದರ್ಶಿ ಟಿ.ವಿ. ರೇಣುಕಾ, ಸಿಐಟಿಯು ರಾಜ್ಯ ಉಪಾಧ್ಯಕ್ಷ ಆರ್‌.ಎಸ್‌. ಬಸವರಾಜ,
ಸಮಿತಿಯ ಜಿಲ್ಲಾ ಸಂಚಾಲಯ ಎಂ.ಜಂಬಯ್ಯ ನಾಯ್ಕ, ಬರಹಗಾರ ಹುರುಕಡ್ಲಿ ಶಿವಕುಮಾರ, ಎಸ್ಸಿಎಸ್ಟಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಶೇಖರ್‌, ದೇವದಾಸಿ ವಿಮೋಚನಾ ಸಂಘದ ತಾಲೂಕು ಅಧ್ಯಕ್ಷೆ ಎಚ್‌.ಬಿ. ಮೈಲಮ್ಮ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಮಂಜುಳಾ ಹವಾಲ್ದಾರ್‌, ಸಂಘದ ತಾಲೂಕು ಕಾರ್ಯದರ್ಶಿ ಡಿ.ಚಾಂದ್‌ಬಿ, ಬಿ.ಸರೋಜ, ಕಾರ್ಯದರ್ಶಿ ಎಚ್‌.ಮಂಜುನಾಥ ಇತರರಿದ್ದರು.  

ಟಾಪ್ ನ್ಯೂಸ್

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.