ಅರವಿಂದ್ ಲಿಂಬಾವಳಿ ವಿರುದ್ಧ ದೂರು
Team Udayavani, Jul 4, 2017, 11:50 AM IST
ಬೆಂಗಳೂರು: ಮಾಜಿ ಸಚಿವ, ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ 10 ಮಂದಿಯ ವಿರುದ್ಧ ಬಿಜೆಪಿಯಿಂದ ಅಮಾನತುಗೊಂಡಿರುವ ವೆಂಕಟೇಶ್ ಮೌರ್ಯ ಯಶವಂತಪುರ ಠಾಣೆಯಲ್ಲಿ ಕೊಲೆ ಬೆದರಿಕೆ ದೂರು ನೀಡಿದ್ದಾರೆ.
ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಇವರ ಬೆಂಬಲಿಗರಾದ ರವಿ ಮಾಕಳಿ, ವೈ ಸುರೇಂದ್ರ ಗೌಡ, ಎಂ.ಪಿ.ಅನಿಲ್ ಕುಮಾರ್, ನಟೇಶ್, ರಾಮು ಪಿ ರಾವ್, ಎಂ.ರಘು, ಶ್ರೀದರ್ಶಿ, ಕೆ.ವಿ. ವೆಂಕಟೇಶ್ ಮತ್ತು ವೀರೇಂದ್ರ ವಟ್ಟರ್, ರಾಜೇಶ್ ಮೂಡಲಗಿ ಎಂಬುವರು ದೂರವಾಣಿ ಮೂಲಕ ಹಾಗೂ ಮನೆ ಬಳಿ ಬಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದಲ್ಲದೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ನಿವೃತ್ತ ಡಿಸಿಪಿ ತಿಮ್ಮಪ್ಪ ಅವರಿಂದ 2009ರಲ್ಲಿ ಲೋಕಸಭಾ ಚುನಾವಣೆಗೆ ಚಿತ್ರದುರ್ಗದಿಂದ ಬಿಜೆಪಿಯಿಂದ ಸ್ಪರ್ಧಿಸಲು ಟಿಕೆಟ್ ಕೊಡಿಸುವುದಾಗಿ ಅರವಿಂದ ಲಿಂಬಾವಳಿ ಅವರು 2 ಕೋಟಿ ಹಣ ಪಡೆದಿದ್ದರು. ಆದರೆ, ಈ ಪೈಕಿ ಇದುವರೆಗೂ 30 ಲಕ್ಷ ಹಣ ಹಿಂದಿರುಗಿಸಿಲ್ಲ ಎಂದು ದೂರಿನಲ್ಲಿ ಆರೋಪಿಸಿರುವ ಅವರು ಈ ವಿಚಾರ ಪ್ರಸ್ತಾಪಿಸಿದ್ದಕ್ಕೆ ನನಗೆ ಬೆದರಿಕೆಯೊಡ್ಡಲಾಗಿದೆ ಎಂದು ಹೇಳಿದ್ದಾರೆ. ಯಶವಂತಪುರ ಪೊಲೀಸರು ಇದೊಂದು ಗಂಭೀರ ಸ್ವರೂಪವಲ್ಲದ ಪ್ರಕರಣ (ಎನ್ಸಿಆರ್) ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.