ನಾಳೆ ತೈಲ ಖರೀದಿಸದೆ ಪ್ರತಿಭಟಿಸಲು ಬಂಕ್‌ ಮಾಲೀಕರ ನಿರ್ಧಾರ 

Team Udayavani, Jul 4, 2017, 11:50 AM IST

petrol-bunks-association.jpg

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ದೈನಂದಿನ ಪರಿಷ್ಕರಣೆಯಿಂದ ನಷ್ಟ ಉಂಟಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಪೆಟ್ರೋಲಿಯಂ ಡೀಲರ್‌ ಸಂಘ ಜು.5ರಂದು ತೈಲ ಕಂಪನಿಗಳಿಂದ ಖರೀದಿ ಸ್ಥಗಿತಗೊಳಿಸಿ ಹೋರಾಟ ನಡೆಸಲು ನಿರ್ಧರಿಸಿದೆ.

ಆದರೆ ಸಂಘದ ಹೋರಾಟಕ್ಕೆ ಅಖೀಲ ಕರ್ನಾಟಕ ಪೆಟ್ರೋಲ್‌ ಬಂಕ್‌ ಮಾಲೀಕರ ಸಂಘ ಬೆಂಬಲ ಸೂಚಿಸದ ಕಾರಣ ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಇತರೆಡೆ ಜು.5ರಂದು ತೈಲ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಕಡಿಮೆ.

ಅಂತಾರಾಷ್ಟ್ರೀಯ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಪ್ರತಿನಿತ್ಯ ಪೆಟ್ರೋಲ್‌, ಡೀಸೆಲ್‌ ದರ ಪರಿಷ್ಕರಣೆ ಹಿನ್ನೆಲೆಯಲ್ಲಿ ತೀವ್ರ ನಷ್ಟವಾಗುತ್ತಿದೆ. ಆರಂಭದಲ್ಲಿ ಕೇಂದ್ರ ಸರ್ಕಾರ ದೊಡ್ಡ ಪ್ರಮಾಣದಲ್ಲಿ ನಷ್ಟ ಉಂಟಾಗದು ಎಂಬ ಭರವಸೆ ನೀಡಿ 15 ದಿನಕ್ಕೊಮ್ಮೆ ದರ ಪರಿಷ್ಕರಣೆ ವ್ಯವಸ್ಥೆ ಬದಲಾಯಿಸಿಕೊಳ್ಳಲು ಸೂಚಿಸಿತ್ತು.

ಆದರೆ ಈಗ ನಿತ್ಯ ನಷ್ಟ ಉಂಟಾಗುತ್ತಿದೆ. ಆ ಹಿನ್ನೆಲೆಯಲ್ಲಿ ಜು.5ರಂದು ರಾಜ್ಯಾದ್ಯಂತ ಬಂಕ್‌ಗಳಿಗೆ ತೈಲ ಖರೀದಿಸದಿರಲು ನಿರ್ಧರಿಸಲಾಗಿದೆ. ಆ ದಿನ ಲಭ್ಯವಿರುವ ದಾಸ್ತಾನು ಪೂರೈಸಲಾಗುವುದು ಎಂದು ಕರ್ನಾಟಕ ರಾಜ್ಯ ಪೆಟ್ರೋಲಿಯಂ ಡೀಲರ್‌ ಸಂಘದ ಅಧ್ಯಕ್ಷ ಎಚ್‌.ಎಸ್‌.ಮಂಜಪ್ಪ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಜು.12ರಂದು ಖರೀದಿ ಹಾಗೂ ವಿತರಣೆ ಸ್ಥಗಿತಗೊಳಿಸಿ ಹೋರಾಟ ತೀವ್ರಗೊಳಿಸಲು ನಿರ್ಧರಿಸಲಾಗಿದೆ. ಕೂಡಲೇ ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌ ವಿತರಕರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹೋರಾಟವಿಲ್ಲ: ದೈನಂದಿನ ದರ ಪರಿಷ್ಕರಣೆ ವಿರುದ್ಧ ಜು.5ರಂದು ಯಾವುದೇ ರೀತಿಯ ಹೋರಾಟ ನಡೆಸುತ್ತಿಲ್ಲ ಎಂದು ಅಖೀಲ ಕರ್ನಾಟಕ ಪೆಟ್ರೋಲ್‌ ಬಂಕ್‌ ಮಾಲೀಕರ ಸಂಘದ ಅಧ್ಯಕ್ಷ ರವೀಂದ್ರನಾಥ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

muslim marriage

Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್‌ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!

Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್‌ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

1-poli

Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ

Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ

Crime: ಶೀಲ ಶಂಕಿಸಿ ಪತ್ನಿ  ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ

Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ

1-poli

Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!

rasaleele

Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್‌ ಅಡಗಿಸಿಟ್ಟು ವಿಡಿಯೋ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

muslim marriage

Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್‌ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!

Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್‌ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.