ಸಂಪೂರ್ಣ ಮನ್ನಾಕ್ಕೆ ಒತ್ತಾಯಿಸಿ ಪ್ರತ್ಯೇಕ ಪ್ರತಿಭಟನೆ


Team Udayavani, Jul 4, 2017, 12:41 PM IST

mys1.jpg

ಮೈಸೂರು: ಬೆಳೆಸಾಲವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ಮನ್ನಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ, ರಾಜ್ಯ ರೈತಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರ ಸಂಘ ಹಾಗೂ ಜಿಲ್ಲಾ ಯುವ ಕಾಂಗ್ರೆಸ್‌ ವತಿಯಿಂದ ನಗರದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ರೈತಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು, ರಾಜ್ಯಸರ್ಕಾರ ರೈತರು ಸಹಕಾರಿ ಸಂಘಗಳಲ್ಲಿ ಪಡೆದಿರುವ ಎಲ್ಲಾ ಸಾಲಮನ್ನಾ ಮಾಡಬೇಕು, ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಕೃಷಿ ಸಂಬಂಧಿಸಿದ ಸಾಲಗಳನ್ನು ಮನ್ನಾ ಮಾಡಬೇಕು, ರೈತರು ಮುಂದಿನ ಬೆಳೆ ಬೆಳೆಯಲು ಹೊಸದಾಗಿ ಸಾಲ ನೀಡಬೇಕೆಂದು ಒತ್ತಾಯಿಸಿದರು.

ರಾಜ್ಯದಲ್ಲಿ ಬರಗಾಲ ಮುಂದುವರಿಯುತ್ತಿರುವುದರಿಂದ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರನ್ನು ಕೃಷಿ ಚಟುವಟಿಕೆಗೆ ನೀಡಲಾಗದ ಪರಿಸ್ಥಿತಿ ಇದ್ದರೂ ಕಾವೇರಿ ಮತ್ತು ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ಮಾತನಾಡಿ, ರೈತರ ಸಾಲಮನ್ನಾ ಫ್ಯಾಷನ್‌ ಆಗಿದೆ ಎಂಬ ಹೇಳಿಕೆ ನೀಡಿರುವ ಕೇಂದ್ರ ಸಚಿವ ವೆಂಕಯ್ಯನಾಯ್ಡು, ಆರ್ಥಿಕ ಸಲಹೆಗಾರರಾದ ಸುಬ್ರಹ್ಮಣ್ಯ, ಆರ್‌ಬಿಐ ಗವರ್ನರ್‌ ಊರ್ಜಿತ್‌ ಪಟೇಲ್‌ ಹಾಗೂ ನಬಾರ್ಡ್‌ ಅಧಿಕಾರಿಗಳು ರೈತ ಸಮುದಾಯದ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಕೂಡಲೇ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಕೃಷಿ ವಲಯ ಅತ್ಯಂತ ಬಿಕ್ಕಟ್ಟಿನಲ್ಲಿದ್ದು, ಸತತ ಬರಗಾಲ ಮತ್ತು ಹವಾಮಾನ ವೈಪರಿತ್ಯದಿಂದಾಗಿ ಬೆಳೆ ಕೈಗೆ ಸಿಗದಂತಾಗಿದೆ. ಇದರ ನಷ್ಟದ ಅಂದಾಜನ್ನು ಕೂಡಲೇ ತಯಾರಿಸಿ ಪರಿಹಾರ ನೀಡಬೇಕು. ಬರ ಪರಿಹಾತ ಸೂತ್ರದಲ್ಲಿಯೇ ಪರಿವರ್ತಿತ ಕೃಷಿ ಸಾಲಗಳ ಬದಲಿಗೆ ಹೊಸದಾಗಿ ಕೃಷಿ ಕಾರ್ಯ ಕೈಗೊಳ್ಳುವ ರೈತರಿಗೆ ಬೆಳೆಸಾಲ, ಅಭಿವೃದ್ಧಿ ಸಾಲ ಬಳಕೆಗಳನ್ನು ನೀಡಬೇಕೆಂದು ಆರ್‌ಬಿಐ ನಿರ್ದೇಶನ ಇದ್ದರೂ ಬ್ಯಾಂಕುಗಳು ಅದನ್ನು ಪಾಲಿಸುತ್ತಿಲ್ಲ.

ಈ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು, ಜತೆಗೆ ಈ ಸಾಳಿನ ಕಬ್ಬಿಗೆ ಮುಂಗಡ ಹಣ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು. ವಿಭಾಗೀಯ ಸಂಘಟನಾ ಕಾರ್ಯದರ್ಶಿ ಸರಗೂರು ನಟರಾಜ್‌, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌, ರೈತ ಮುಖಂಡರಾದ ಅಶ್ವಥ್‌ ರಾಜೇ ಅರಸ್‌, ಹೊಸಕೋಟೆ ಬಸವರಾಜ್‌, ಲೋಕೇಶ್‌ ರಾಜೇ ಅರಸ್‌ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪುನರ್‌ ಪರಿಶೀಲಿಸಿ: ರಾಜ್ಯ ರೈತಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮೈಸೂರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ, ರಾಜ್ಯಸರ್ಕಾರ ಘೋಷಿಸಿರುವ ಸಹಕಾರಿ ಬ್ಯಾಂಕ್‌ಗಳಲ್ಲಿನ 50 ಸಾವಿರ ರೂ.ವರೆಗಿನ ಸಾಲಮನ್ನಾದಿಂದ ರೈತರ ಕಷ್ಟ ನಿವಾರಣೆಯಾಗುವುದಿಲ್ಲ, ಹೀಗಾಗಿ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಂಪೂರ್ಣ ಸಾಲಮನ್ನಾ ಆಗಬೇಕು.

ಜತೆಗೆ ರಾಷ್ಟ್ರೀಕೃತ ಮತ್ತು ವಾಣಿಜ್ಯ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲವು ಮನ್ನಾ ಆಗಬೇಕು. ಸರ್ಕಾರ ನಮ್ಮ ಬೇಡಿಕೆ ಈಡೇರಿಸದೆ ನಿರ್ಲಕ್ಷ್ಯ ಧೋರಣೆ ಮುಂದುವರಿಸಿದರೆ ಆಗಸ್ಟ್‌ 9ರಂದು ರಾಜಾÂದ್ಯಂತ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ರಸ್ತೆ ತಡೆ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಸಿದರು. ವರಕೂಡು ಕೃಷ್ಣೇಗೌಡ ಸೇರಿದಂತೆ ಹಲವು ರೈತ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಯುವ ಕಾಂಗ್ರೆಸ್‌ ಪ್ರತಿಭಟನೆ: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲವನ್ನು ಕೇಂದ್ರ ಸರ್ಕಾರದಿಂದ ಮನ್ನಾ ಮಾಡಿಸುವಂತೆ ಒತ್ತಾಯಿಸಿ ಜಿಲ್ಲಾ ಯುವ ಕಾಂಗ್ರೆಸ್‌ ಪದಾಧಿಕಾರಿಗಳು ಸಂಸದ ಪ್ರತಾಪ್‌ ಸಿಂಹ ಅವರ ಕಚೇರಿ ಇರುವ ಜಲದರ್ಶಿನಿ ಅತಿಥಿ ಗೃಹದ ಪ್ರವೇಶ ದ್ವಾರದ ಎದುರು ಪ್ರತಿಭಟನೆ ನಡೆಸಿದರು.

ಸತತ ಬರಗಾಲದಿಂದ ರಾಜ್ಯದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಲವು ಬಾರಿ ಕೇಂದ್ರ ಕೃಷಿ ಸಚಿವರು, ಪ್ರಧಾನಿ ಮಂತ್ರಿಯವರನ್ನು ಭೇಟಿ ಮಾಡಿ ಮನವಿ ಮಾಡಿದ್ದಲ್ಲದೆ, ಸರ್ವಪಕ್ಷ ನಿಯೋಗ ಕರೆದೊಯ್ದು ಸಾಲಮನ್ನಾಕ್ಕೆ ಒತ್ತಾಯಿಸಿದಾಗಲೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಇದೀಗ ಸಹಕಾರಿ ಬ್ಯಾಂಕುಗಳಲ್ಲಿನ 50 ಸಾವಿರ ರೂ.ವರೆಗಿನ ಸಾಲವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮನ್ನಾ ಮಾಡಿದ್ದಾರೆ.

ಅದೇ ರೀತಿಯಲ್ಲಿ ಕೇಂದ್ರ ಸರ್ಕಾರ ಕೂಡ ರೈತರ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು. ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಮೋಸಿನ್‌ ಖಾನ್‌, ಪ್ರಧಾನ ಕಾರ್ಯದರ್ಶಿ ರವಿಕುಮಾರ್‌, ಸುರೇಶ್‌, ಕೋಟೆ ಪ್ರಸನ್ನಕುಮಾರ್‌ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.