ಸಾಲಮನ್ನಾಕ್ಕೆ ಆಗ್ರಹಿಸಿ ನಿರಶನ


Team Udayavani, Jul 4, 2017, 1:04 PM IST

hub4.jpg

ಧಾರವಾಡ: ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಆಹಾರದ ಹಕ್ಕಿಗಾಗಿ ಆಂದೋಲನ ಮತ್ತು ಗ್ರಾಮೀಣ ಕೂಲಿಕಾರರ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡರು, ಕೇಂದ್ರ ಬಿಜೆಪಿ ಸರಕಾರ ದೇಶದ ಉದ್ಯಮಪತಿಗಳ ಸಾಲ ಮನ್ನಾ ಮಾಡಲು ಹಿಂದೇಟು ಹಾಕಲಿಲ್ಲ. ವಿಜಯ ಮಲ್ಯ ಭಾರತದ ಬ್ಯಾಂಕುಗಳಿಂದ 9000 ಕೋಟಿ ಸಾಲ ಮಾಡಿ ಲಂಡನ್‌ನಲ್ಲಿ ಐಷಾರಾಮಿ ಜೀವನ ಮಾಡಲು ಅನುವು ಮಾಡಿಕೊಟ್ಟಿದ್ದಾರೆ.

ಆದರೆ ರೈತರ ಸಾಲ ಮನ್ನಾ ಅಂತಾ ಮಾತನಾಡುವುದು ಫ್ಯಾಷನ್‌ ಆಗಿದೆ ಅಂತಾ ಅರುಣ ಜೇಟಿಯವರು ಮಾಧ್ಯಮಗಳ ಮೂಲಕ ಹೇಳಿದ್ದಾರೆ. ಅಂದರೆ ದೇಶದ ಉದ್ಯಮಪತಿಗಳಿಗೆ ಒಂದು ನ್ಯಾಯ? ರೈತರಿಗೆ ಇನ್ನೊಂದು ನ್ಯಾಯವೇ ?ಎಂದು ಪ್ರಶ್ನಿಸಿದರು. 

ರೈತರು ಬರಗಾಲದಿಂದ ತತ್ತರಿಸಿ ಆತ್ಮಹತ್ಯೆಗೆ ಮೊರೆ ಹೋಗುತ್ತಿದ್ದಾರೆ. ಈಗಾಗಲೇ 3,50,000 ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಅಂಶ ಬಯಲಾಗಿದೆ. ಇಂತ ಕೆಟ್ಟ ಗಳಿಗೆಯಲ್ಲೂ ಕೇಂದ್ರ ಸರಕಾರ ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುತ್ತಿಲ್ಲ. ಈಗಲಾದರೂ ಎಚ್ಚೆತ್ತುಕೊಂಡು ರೈತರಿಗೆ ಬೆಂಬಲ ಬೆಲೆ ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು. 

ರಾಜ್ಯ ಸರಕಾರ ರೈತರ ಸ್ಥಳೀಯ ಉತ್ಪನ್ನಗಳನ್ನು ಖರೀದಿಸಿ ಪಡಿತರ ಮೂಲಕ ಸಾರ್ವಜನಿಕರಿಗೆ ವಿತರಿಸಲು ಕ್ರಮ ಕೈಗೊಳ್ಳಬೇಕು. ಅರ್ಹ ಪ್ರತಿಯೊಬ್ಬರಿಗೂ ರೇಷನ್‌ ಕಾರ್ಡ್‌ ತಲುಪುವ ವ್ಯವಸ್ಥೆಯಾಗಬೇಕು. ಸುಮಾರು 30-40 ವರ್ಷಗಳಿಂದ ಬಡವರು ಅರಣ್ಯ ಭೂಮಿ, ಕಂದಾಯ ಭೂಮಿ ಉಳಿಮೆ ಮಾಡುತ್ತ ಆ ಭೂಮಿಯ ಉತ್ಪನ್ನಗಳನ್ನು ಅವಲಂಬಿಸಿದ್ದಾರೆ.

ಆದರೆ ರಾಜ್ಯ ಸರಕಾರ ಅವರಿಗೆ ಹಕ್ಕು ಪತ್ರ ನೀಡದೇ ಅವರನ್ನು ಅತಂತ್ರ ಸ್ಥಿತಿಯಲ್ಲಿ ಇಟ್ಟಿದ್ದಾರೆ ಎಂದು ಆರೋಪಿಸಿದರು. ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ನಾಗಪ್ಪ ಹುಂಡಿ, ಆಹಾರದ ಹಕ್ಕಿಗಾಗಿ ಆಂದೋಲನ ಮುಖ್ಯಸ್ಥೆ ಶಾರದಾ ಗೋಪಾಲ ದಾಬಡೆ, ಮುಖಂಡರಾದ ಈರಣ್ಣ ಬಳಿಗೇರ, ಎಚ್‌.ಜಿ.ದೇಸಾಯಿ, ನಿಂಗಮ್ಮ ಸವಣೂರ ಮತ್ತು ಶರಣು ಗೋನವಾರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

1-huli

Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.