66 ದಲಿತ ಕುಟುಂಬಗಳಿಗೆ ಬಿಎಸ್ವೈ ಆತಿಥ್ಯ
Team Udayavani, Jul 5, 2017, 3:00 AM IST
ಬೆಂಗಳೂರು: ತಮ್ಮ ರಾಜ್ಯ ಪ್ರವಾಸದ ವೇಳೆ ಆತಿಥ್ಯ ಕಲ್ಪಿಸಿದ ಸುಮಾರು 66 ದಲಿತ ಕುಟುಂಬಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಡಾಲರ್ಸ್ ಕಾಲನಿಯ ತಮ್ಮ ನಿವಾಸದಲ್ಲಿ ವಿಶೇಷ ಆತಿಥ್ಯ ಕಲ್ಪಿಸಲು ತೀರ್ಮಾನಿಸಿದ್ದಾರೆ. ಈ ಮೂಲಕ ತಾವು ದಲಿತರ ಮನೆಗಳಲ್ಲಿ ಉಪಾಹಾರ ಸೇವಿಸಿದ ಬಗ್ಗೆ ಪಕ್ಷಗಳು ಮಾಡುತ್ತಿರುವ ಟೀಕೆಗಳಿಗೆ ಸೂಕ್ತ ಉತ್ತರ ನೀಡಲು ಮುಂದಾಗಿರುವ ಅವರು, ತಾವು ದಲಿತರ ಮನೆಗಳಲ್ಲಿ ಹೋಗಿ ಊಟ ಮಾಡಿದ್ದು ಮಾತ್ರವಲ್ಲ, ದಲಿತರನ್ನು ತಮ್ಮ ಮನೆಗೆ ಕರೆಸಿ ಊಟ ಹಾಕಿ ಸತ್ಕರಿಸಿದ್ದೇನೆ. ಹೊಟೇಲ್ನಿಂದ ಉಪಾಹಾರ ತರಿಸಿ ದಲಿತರ ಮನೆಗಳಲ್ಲಿ ಸೇವಿಸಿದ್ದಲ್ಲ ಎಂಬ ಸಂದೇಶ ರವಾನಿಸಲು ನಿರ್ಧರಿಸಿದ್ದಾರೆ.
ಯಡಿಯೂರಪ್ಪ ಅವರು ಇದುವರೆಗಿನ ರಾಜ್ಯ ಪ್ರವಾಸದ ವೇಳೆ 27 ಜಿಲ್ಲೆಗಳ 87 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡಿದ್ದು, ಆ ವೇಳೆ ದಲಿತ ಸಮುದಾಯದ 66 ಮನೆಗಳಿಗೆ ಭೇಟಿ ನೀಡಿ ಅಲ್ಲಿ ಊಟ ಮತ್ತು ಉಪಾಹಾರ ಸೇವಿಸಿದ್ದರು. ಯಾರ ಮನೆಗಳಲ್ಲಿ ಅವರಿಗೆ ಆತಿಥ್ಯ ನೀಡಿದರೋ ಅಂಥವರಿಗೆ ತಾವೂ ಆತಿಥ್ಯ ನೀಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಈ ಬಗ್ಗೆ ಶೀಘ್ರವೇ ದಿನಾಂಕ ನಿಗದಿಪಡಿಸಲಾಗುವುದು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.