ಚಿಕೂನ್‌ಗುನ್ಯಾದಲ್ಲಿ ಕರ್ನಾಟಕ, ಘೀಯಲ್ಲಿ ಕೇರಳ ರಾಜ್ಯ ಫಸ್ಟ್
Team Udayavani, Jul 5, 2017, 12:14 PM IST
ನವದೆಹಲಿ: ಮುಂಗಾರು ಆರಂಭವಾಗಿ ತಿಂಗಳಾಗಿದ್ದು, ಮಳೆಗಾಲದಲ್ಲಿ ಕಾಡುವ ಘೀ, ಚಿಕೂನ್‌ಗುನ್ಯಾ, ಮಲೇರಿಯಾ ರೋಗಗಳು ದೇಶಾದ್ಯಂತ ಆವರಿಸಿವೆ. ಇಡೀ ದೇಶದಲ್ಲಿ ಒಟ್ಟು 18,700 ಘೀ ಪ್ರಕರಣಗಳು ಪತ್ತೆಯಾಗಿದ್ದರೆ, 10,952 ಚಿಕೂನ್‌ಗುನ್ಯಾ ಪ್ರಕರಣಗಳು ದಾಖಲಾಗಿವೆ. ಕೇರಳದಲ್ಲಿ ಹೆಚ್ಚಿನ ಘೀ ಪ್ರಕರಣಗಳು ವರದಿಯಾಗಿವೆ.
ಆದರೆ ಚಿಕೂನ್‌ಗುನ್ಯಾದಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ. ಹೀಗಾಗಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು, ಎಲ್ಲಾ ರಾಜ್ಯಗಳಿಗೆ ಸರಿಯಾಗಿ ಆಸ್ಥೆ ವಹಿಸಿ ಮತ್ತು ರೋಗಗಳ ಬಗ್ಗೆ ಅರಿವು ಮೂಡಿಸುವಂತೆ ನಿರ್ದೇಶನ ನೀಡಿದ್ದಾರೆ. ಮಂಗಳವಾರ ದೆಹಲಿಯಲ್ಲಿ ಸಚಿವ ಜೆ.ಪಿ. ನಡ್ಡಾ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಭೆ ನಡೆದಿದ್ದು,
ಇದರಲ್ಲಿ ಆರೋಗ್ಯ ಕಾರ್ಯದರ್ಶಿ ಸಿ.ಕೆ. ಮಿಶ್ರಾ, ಐಸಿಎಂಆರ್‌ನ ಮಹಾ ನಿರ್ದೇಶಕಿ ಸೌಮ್ಯ ಸ್ವಾಮಿನಾಥನ್, ಆರೋಗ್ಯ ಸೇವೆಗಳ ಮಹಾ ನಿರ್ದೇಶಕ ಜಗದೀಶ್ ಪ್ರಸಾದ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಇದರಲ್ಲಿ ಎರಡು ಪರಿಶೀಲನಾ ಸಭೆಗಳನ್ನು ನಡೆಸಿದ್ದೇವೆ, ಒಂದು ದೆಹಲಿ ಮತ್ತು ಇನ್ನೊಂದು ಇತರೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸ್ಥಿತಿಗತಿ ಬಗ್ಗೆ ಚರ್ಚಿಸಿದ್ದೇವೆ. ಮಳೆಗಾಲದಲ್ಲಿ ಹರಡುವ ರೋಗಗಳ ನಿಯಂತ್ರಣಕ್ಕೆ ಯಾವ ರೀತಿ ರಾಜ್ಯಗಳು ಸಜ್ಜುಗೊಂಡಿವೆ ಎಂಬ ಬಗ್ಗೆ ಅವಲೋಕನ ನಡೆಸಿದ್ದೇವೆ ಎಂದಿರುವ ನಡ್ಡಾ, ಅರಿವು ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದೇವೆ ಎಂದಿದ್ದಾರೆ.
ಆರೋಗ್ಯ ಕಾರ್ಯದರ್ಶಿ ಮಿಶ್ರಾ ಅವರು, ಕೇರಳದಲ್ಲಿ ಘೀ ಪ್ರಮಾಣ ಹೆಚ್ಚಾಗಿದೆ. ಆದರೆ ಈ ಬಗ್ಗೆ ರಾಜ್ಯದಿಂದ ಇದುವರೆಗೆ ಯಾವುದೇ ಮನವಿ ಬಂದಿಲ್ಲ. ಆದರೂ, ಜನರ ಆರೋಗ್ಯದ ವಿಚಾರದಲ್ಲಿ ಅವರು ಉತ್ತಮ ವ್ಯವಸ್ಥೆಮಾಡಿಕೊಳ್ಳಲಿ ಎಂದರು. ಕೇರಳ ಬಿಟ್ಟರೆ ತಮಿಳುನಾಡಿನಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.
ನಂತರದ ಸ್ಥಾನದಲ್ಲಿ ಕರ್ನಾಟಕವಿದೆ. ಇಲ್ಲಿ 1945 ಪ್ರಕರಣಗಳು ದಾಖಲಾಗಿವೆ. ಆದರೆ ಚಿಕೂನ್‌ಗುನ್ಯಾ ವಿಚಾರದಲ್ಲಿ ಈಗಾಗಲೇ ದೇಶದಲ್ಲಿ 10,952 ಪ್ರಕರಣ ಪತ್ತೆಯಾಗಿವೆ. ಇದರಲ್ಲಿ ಕರ್ನಾಟಕವೇ ಮುಂದಿದ್ದು, ಇಲ್ಲಿ 4,047 ಪ್ರಕರಣಗಳು ವರದಿಯಾಗಿವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.