ಸಂಸದರು, ಸಚಿವರು ರಾಜೀನಾಮೆ ನೀಡಲಿ
Team Udayavani, Jul 5, 2017, 12:14 PM IST
ಬೆಂಗಳೂರು: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡದೇ ಇದ್ದಲ್ಲಿ ರಾಜ್ಯದ ಸಂಸದರು ಹಾಗೂ ಕೇಂದ್ರದ ಸಚಿವರು ರಾಜೀನಾಮೆ ನೀಡುವ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ ಆಗ್ರಹಿಸಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟಿಗೂ, ತಮಿಳುನಾಡಿಗೂ ಏನೂ ಸಂಬಂಧವಿಲ್ಲ. ವಿದ್ಯುತ್‌ತ್ಛಕ್ತಿ ತಯಾರಿಕೆ ಮತ್ತು ಕುಡಿಯುವ ನೀರು ಉದ್ದೇಶದಿಂದ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕೇಂದ್ರದ ಅನುಮತಿ ಕೇಳಲಾಗಿದೆ. ಇದ್ಕಕೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದ್ದು, ಕಾರಣವಿಲ್ಲದೆ ಟೀಕೆ ಮಾಡುತ್ತಿರುವುದು ಸರಿಯಲ್ಲವೆಂದು ತಿಳಿಸಿದರು. ಒಂದು ವೇಳೆ ಕೇಂದ್ರ ಮೇಕೆದಾಟು ಯೋಜನೆಗೆ ಅನುಮತಿ ನೀಡದಿದ್ದಲ್ಲಿ ಸಂಸದರು ರಾಜೀನಾಮೆ ನೀಡಿ, ಕನ್ನಡಿಗರ ಪರವಾಗಿ ನಿಲ್ಲಬೇಕು ಎಂದು ಒತ್ತಾಯಿಸಿದರು.
ಸ್ಪೀಕರ್ ಕೂಡಲೇ ರಾಜೀನಾಮೆ ನೀಡಲಿ: ಹಕ್ಕುಚ್ಯುತಿ ವಿಚಾರದಲ್ಲಿ ಏಕಪಕ್ಷೀಯವಾಗಿ ಪತ್ರಕರ್ತರಿಗೆ ಶಿಕ್ಷೆ ವಿಧಿಸಿರುವ ಸ್ಪೀಕರ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಆ ಸ್ಥಾನದ ಗೌರವ ಉಳಿಸಿ ಎಂದು ವಾಟಾಳ್‌ನಾಗರಾಜ್ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರಿಗೆ ಒತ್ತಾಯಿಸಿದ್ದಾರೆ. ಸ್ಪೀಕರ್ ಅವರು ನಡೆದುಕೊಂಡಿರುವ ರೀತಿ ಸರಿಯಲ್ಲ. ಪತ್ರಕರ್ತರನ್ನು ಸದನಕ್ಕೆ ಕರೆಯಿಸಿ ಮಾತುಕತೆ ಮೂಲಕ ಸರಿಪಡಿಸಬಹುದಾದ ವಿಚಾರಕ್ಕೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸುವುದು ಸಮಂಜಸಲ್ಲ. ಇದು ಮಾಧ್ಯಮಗಳನ್ನು ಹತ್ತಿಕ್ಕಲು ಹೊರಟಂತಿದೆ ಎಂದು ಟೀಕಿಸಿದರು.
ಮಾಧ್ಯಮದವರ ಮೇಲೆ ಹಕ್ಕುಚ್ಯುತಿ ಮಂಡಿಸುವ ಬಗ್ಗೆ ಮಾತನಾಡಿರುವ ತಮ್ಮ ವಿರುದ್ಧವೂ ಹಕ್ಕುಚ್ಯುತಿ ಆರೋಪ ಮಾಡಬಹುದು. ಅದಕ್ಕೆ ನಾನು ಸಿದ್ದನಿದ್ದೇನೆ ಎಂದ ಅವರು, ಮಾಧ್ಯಮಗಳ ನಿಯಂತ್ರಣಕ್ಕೆ ಸದನ ಸಮಿತಿ ರಚನೆ ಮಾಡಲು ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿದರು. ಒಂದೆಡೆ ಮಾಧ್ಯಮ ನಿಯಂತ್ರಣಕ್ಕೆ ಸದನ ಸಮಿತಿ ರಚನೆ, ಮತ್ತೂಂದೆಡೆ ಪತ್ರಕರ್ತರಿಗೆ ಒಂದು ವರ್ಷ ಜೈಲು ಶಿಕ್ಷೆ ನೀಡುವಂತ ಧೋರಣೆ ಖಂಡನೀಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.