ಯೋಗಕ್ಕಿಲ್ಲ ಮತೀಯ ಕಳಂಕ
Team Udayavani, Jul 5, 2017, 1:02 PM IST
ಧಾರವಾಡ: ನಮ್ಮ ಸನಾತನರು ಕೊಟ್ಟ ಯೋಗ ಆಧಾರಿತ ಜೀವನ ಪದ್ಧತಿಯಲ್ಲಿ ಯಾವುದೇ ಮತೀಯ ಕಳಂಕವಿಲ್ಲ ಎಂದು ಮಂಡಿಹಾಳ ಶಿವಾನಂದ ಕುಟೀರದ ಆನಂದ ಗುರೂಜಿ ಹೇಳಿದರು. ಇಲ್ಲಿನ ಕಾಮನಕಟ್ಟಿಯ ಹಳೇಪ್ಯಾಟಿ ವೀರಭದ್ರೇಶ್ವರ ದೇವಸ್ಥಾನ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ನಿತ್ಯ ಜೀವನದಲ್ಲಿ ಅಧ್ಯಾತ್ಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸನಾತನರು ತಮ್ಮ ಸತ್ಯ-ಪ್ರತ್ಯಕ್ಷ ಅನುಭವದಿಂದ ಕೊಟ್ಟ ಯೋಗ ವಿಜ್ಞಾನದಿಂದ ಬದುಕು ರೂಪಿಸಿಕೊಂಡು ಜನ್ಮ ಸಾರ್ಥಕಪಡಿಸಿಕೊಳ್ಳುವ ಸಮಯವಿದು. ಎಲ್ಲೆಡೆಯೂ ಪರಿವರ್ತನೆಯ ಗಾಳಿ ಬೀಸುತ್ತಿದೆ ಎಂದರು. ಒಂದಷ್ಟು ಜೀವಾತ್ಮರು ಧೈರ್ಯ ಮಾಡಿ ಗೃಹಸ್ಥ ಜೀವನದ ಜೊತೆಗೆ ಅದರ ನೈಜ ಅರ್ಥ ಹುಡುಕಲು ಹಾಗು ಸತ್ಯದ ಅನ್ವೇಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮನೋಭಾವ ಹೊಂದಿ ಕತ್ತಲಲ್ಲಿ ತಡಕಾಡುತ್ತಿದ್ದಾರೆ.
ಅವರಿಗೆ ಯೋಗ್ಯ ಮಾರ್ಗದರ್ಶನ ಬೇಕಾಗಿದೆ. ಅಧ್ಯಾತ್ಮವೆಂದರೆ ವಯಸ್ಸಾದ ನಂತರ, ಮೂಲೆಗುಂಪಾದ ನಂತರ ಏನೋ ಒಂದಿಷ್ಟು ಸಾಂತ್ವನದ ತಂಪು ಪಡೆಯುವ ಪ್ರಯತ್ನ ಎಂಬ ತಪ್ಪು ಗ್ರಹಿಕೆ ಇದೆ. ಈ ಗ್ರಹಿಕೆ ತೆಗೆದು ಹಾಕಿ, ಆ ಸನಾತನರು ಕೊಟ್ಟ ಯೋಗ ವಿದ್ಯೆಯನ್ನು ಸರಿಯಾದ ದೃಷ್ಟಿಕೋನದಲ್ಲಿ ಅರ್ಥೈಸಿಕೊಂಡು ಸಾಗಬೇಕಿದೆ ಎಂದು ತಿಳಿಸಿದರು.
ಬಸವರಾಜ ಹಿರೇಮಠ, ಗಣೇಶ ಕುಮಾರ ಪಾಟೀಲ, ಗುರುರಾಜ ಕರಿಗಾರ, ಸಂತೋಷ ಕುಮಾರ ಪಾಟೀಲ, ಶ್ರೀನಿವಾಸ ಪಾಟೀಲ, ಮಾರುತಿ ಕುರಬರ, ಮಹೇಶ ಜಿಗಳೂರ, ತುಷಾರ ಜೋಶಿ, ವಿಕ್ರಮ ಸಿಕ್ಕಲಗಾರ, ವಿನಾಯಕ ಸುಕ್ಕದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.