ಫ್ಲೈಓವರ್‌ ನಿರ್ಮಾಣಕ್ಕೆ 15ದಿನದಲ್ಲಿ ಡಿಪಿಆರ್‌ ಸಲ್ಲಿಕೆ


Team Udayavani, Jul 5, 2017, 1:02 PM IST

hub3.jpg

ಹುಬ್ಬಳ್ಳಿ: ನಗರದ ಚನ್ನಮ್ಮ ವೃತ್ತದಲ್ಲಿ ಹಾಗೂ ಧಾರವಾಡದ ಜುಬಿಲಿ ವೃತ್ತದಲ್ಲಿ ಫ್ಲೈಓವರ್‌ ನಿರ್ಮಿಸುವ ಕುರಿತ ವಿಸ್ತೃತ ಯೋಜನಾ ವರದಿ (ಡಿಪಿಆರ್‌) 15 ದಿನಗಳಲ್ಲಿ ಸಲ್ಲಿಕೆಯಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ ಹೇಳಿದರು.ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಫ್ಲೈಓವರ್‌ ಡಿಪಿಆರ್‌ ಕುರಿತು ಈಗಾಗಲೇ ಸಭೆ ನಡೆಸಲಾಗಿದೆ.

ಸಲಹೆಗಾರರಿಂದ ಸಲಹೆ ಪಡೆಯಲಾಗಿದ್ದು, ಡಿಪಿಆರ್‌ ಸಲ್ಲಿಕೆಯಾದ ನಂತರ ದೆಹಲಿಯಿಂದ ಅನುಮೋದನೆ ಪಡೆದ ನಂತರ ಟೆಂಡರ್‌ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದರು.ಎರಡೂ ಫ್ಲೈಓವರ್‌ ಗಳ ಉದ್ದ ಹೆಚ್ಚಾಗಿದ್ದರಿಂದ ಒಟ್ಟು 800ರಿಂದ 900  ಕೋಟಿ ರೂ. ವೆಚ್ಚ ತಗುಲಬಹುದಾಗಿದ್ದು, ಈಗಾಗಲೇ ಕೇಂದ್ರ ಸರ್ಕಾರದಿಂದ 300 ಕೋಟಿ ರೂ. ಬಂದಿದೆ.

ಉಳಿದ ಅನುದಾನವನ್ನು ಕೇಂದ್ರದಿಂದ ಕೊಡಿಸಲು ಪ್ರಯತ್ನಿಸಲಾಗುವುದು. ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ಸಮರ್ಪಕವಾಗಿ ನಿರ್ವಹಿಸುವುದು ಮುಖ್ಯ ಎಂದರು. ಬಿಆರ್‌ಟಿಎಸ್‌ ಕಾಮಗಾರಿ ವಿಳಂಬ ಆಗುತ್ತಿರುವುದರ ಕುರಿತು ನಗರಾಭಿವೃದ್ಧಿ ಇಲಾಖೆ ಆಯುಕ್ತ ದರ್ಪಣ ಜೈನ್‌ರೊಂದಿಗೆ ಚರ್ಚಿಸಲಾಗಿದೆ.

ಕಾರ್ಯ ತ್ವರಿತಗೊಳಿಸುವಂತೆ ಸೂಚಿಸಲಾಗಿದೆ. ನವೆಂಬರ್‌ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ಲಕ್ಷಣಗಳಿಲ್ಲ. ಬಿಆರ್‌ಟಿಎಸ್‌ ರಸ್ತೆ ಕಾಮಗಾರಿ ಪೂರ್ಣಗೊಳ್ಳುವ ವರೆಗೆ ಪಕ್ಕದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದರು. 

ಧಾರವಾಡ ಜಿಲ್ಲೆಯ ರಸ್ತೆ  ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ 468 ಕೋಟಿ ರೂ. ಅನುದಾನದಲ್ಲಿ ಕೇವಲ 200 ಕೋಟಿ ರೂ. ಯೋಜನೆಗೆ ಮಾತ್ರ ಟೆಂಡರ್‌ ಕರೆಯಲಾಗಿದೆ. ಉಳಿದ ಮೊತ್ತದ ಟೆಂಡರ್‌ ಕರೆಯುವಂತೆ ಹಲವು ಬಾರಿ ಆಗ್ರಹಿಸಲಾಗಿದೆ. ಕೇಂದ್ರ ಸರ್ಕಾರ ಅನುದಾನ ನೀಡಿದರೂ ರಾಜ್ಯ ಸರ್ಕಾರ ಟೆಂಡರ್‌ ಕರೆಯಲು ಹಿಂದೇಟು ಹಾಕುತ್ತಿರುವುದು ಖಂಡನಾರ್ಹ ಎಂದರು. 

ವಿನಯ್‌ಗೆ ಮಾನಸಿಕ ಸಮಸ್ಯೆ: ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿಗೆ ಮಾನಸಿಕ ಸಮಸ್ಯೆಯಿದೆ. ಜಿಲ್ಲಾಮಟ್ಟದ ಸಭೆಗಳನ್ನು ತಾವೂ ಆಯೋಜಿಸುವುದಿಲ್ಲ. ನಾವು ಸಭೆ ಆಯೋಜಿಸಿದರೆ ಅದಕ್ಕೆ ಅವಕಾಶ ನೀಡುವುದಿಲ್ಲ. ನಾವು ಸಭೆ ಮಾಡಿದರೆ ಯಾಕೆ ಮಾಡುತ್ತೀರಿ ಅಂತ ವಿವಾದ ಮಾಡುತ್ತಾರೆ.

ಅಲ್ಲದೇ ಸಭೆಯಲ್ಲಿ ಪಾಲ್ಗೊಳ್ಳದಂತೆ ಅಧಿಕಾರಿಗಳಿಗೆ ತಾಕೀತು ಮಾಡುತ್ತಾರೆ ಎಂದರು. ಸಚಿವ ವಿನಯ ಕುಲಕರ್ಣಿಗೆ ಜಿಲ್ಲೆಯ ಅಭಿವೃದ್ಧಿಯ ಕಾಳಜಿ ಇಲ್ಲ. ಸಚಿವರಿಗೆ ತಾಕತ್ತಿದ್ದರೆ, ಅವರು ತಮ್ಮ ಪ್ರಭಾವ ಬಳಸಿ ಮಹಾನಗರ ಪಾಲಿಕೆ ನಿವೃತ್ತರ ಬಾಕಿ ಪಿಂಚಣಿ ಮೊತ್ತವನ್ನು ರಾಜ್ಯ ಸರ್ಕಾರದಿಂದ ಕೊಡಿಸುವ ಕೆಲಸ ಮಾಡಲಿ. ಈ ಮೊತ್ತದಿಂದ ಅವಳಿ ನಗರದ ಎಲ್ಲ ರಸ್ತೆಗಳ ಅಭಿವೃದ್ಧಿ ಮಾಡಬಹುದು ಎಂದು ಹೇಳಿದರು.  

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.