ಪಡುಮಲೆಯಲ್ಲಿ ಕೋಟಿ – ಚೆನ್ನಯ ಅಧ್ಯಯನ ಕೇಂದ್ರ: ಸಚಿವ ರೈ


Team Udayavani, Jul 6, 2017, 3:45 AM IST

0407rjh3.jpg

ಪುತ್ತೂರು : ತುಳುನಾಡಿನ ಅವಳಿ ವೀರ ಪುರುಷರಾದ ಕೋಟಿ ಚೆನ್ನಯರ ಹುಟ್ಟೂರು ಪಡುಮಲೆಯ ಅಭಿವೃದ್ಧಿಗೆ ಸರಕಾರದಿಂದ ಮಂಜೂ ರಾಗಿರುವ 5 ಕೋಟಿ ರೂ. ಅನುದಾನದಲ್ಲಿ ಮೊದಲ ಹಂತದ ಕಾಮಗಾರಿ ಗಳನ್ನು ಡಿಸೆಂಬರ್‌ ತಿಂಗಳ ಒಳಗೆ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಬಿ. ರಮಾನಾಥ ರೈ ಹೇಳಿದರು.

ಪುತ್ತೂರು ಮಿನಿ ವಿಧಾನಸೌಧದಲ್ಲಿ ಮಂಗಳವಾರ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮತ್ತು ಸಹಾಯಕ ಕಮಿಷನರ್‌ ಡಾ| ರಘುನಂದನ ಮೂರ್ತಿ ಅವರ ಜತೆ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

ಪಡುಮಲೆ ಪ್ರದೇಶದ ಶಂಖಪಾಲ ಬೆಟ್ಟದ ತಪ್ಪಲಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸ
ಲಾಗಿದ್ದು, ಈ ಕಾಮಗಾರಿ ಯನ್ನು ತ್ವರಿತವಾಗಿ ನಡೆಸುವಂತೆ ಸೂಚಿಸಲಾಗಿದೆ. ಇದೇ ಪ್ರದೇಶದಲ್ಲಿ ಕೋಟಿ -ಚೆನ್ನಯ ಅಧ್ಯಯನ ಕೇಂದ್ರ ನಿರ್ಮಿಸಲಾಗುವುದು. ಶಂಖಪಾಲ ಬೆಟ್ಟದ ತುದಿಯಲ್ಲಿ  ಧಾರ್ಮಿಕ ಪರಂಪರೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಕಾಮಗಾರಿ ನಡೆಸಲಾಗುವುದು ಎಂದರು.

ಶಂಖಪಾಲ ಬೆಟ್ಟದ ಅಭಿವೃದ್ಧಿ
ಶಂಖಪಾಲ ಬೆಟ್ಟದಲ್ಲಿ  ಮಾತೆ ದೇಯಿ ಬೈದ್ಯೆತಿ ಮತ್ತು ಅವಳಿ ವೀರರಾದ ಕೋಟಿ – ಚೆನ್ನಯರ ಪ್ರತಿಮೆ ಸ್ಥಾಪಿ
ಸುವ ಮೂಲಕ ಈ ಪ್ರದೇಶವನ್ನು  ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗು ವುದು. ಸಮುದಾಯ ಭವನದಿಂದ ಬೆಟ್ಟದ ತುದಿಗೆ ಹೋಗಲು ಅನುಕೂಲ ವಾಗುವಂತೆ ಸುಂದರ ಮೆಟ್ಟಿಲುಗಳನ್ನು ನಿರ್ಮಿಸಲಾಗುವುದು ಎಂದವರು ತಿಳಿಸಿದರು.ಇದರ ಜತೆಗೆ ಕಾರಣಿಕ ಕ್ಷೇತ್ರ ಪೂಮಾಣಿ – ಕಿನ್ನಿಮಾಣಿ ದೈವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ 20 ಲಕ್ಷ ರೂ. ಮಂಜೂರು ಮಾಡಲಾಗಿದೆ ಎಂದರು.

ಔಷಧ ವನಕ್ಕೆ ಮತ್ತಷ್ಟು ಅನುದಾನ
ಪಡುಮಲೆ ಕ್ಷೇತ್ರ ವ್ಯಾಪ್ತಿಯ ಮುಡಿಪುನಡ್ಕದಲ್ಲಿ ಅರಣ್ಯ ಇಲಾಖೆಯಿಂದ ನಿರ್ಮಿಸಲಾಗಿರುವ ದೇಯಿ ಬೈದ್ಯೆತಿ ಔಷಧ ವನದಲ್ಲಿ ಈಗಾಗಲೇ ಮೊದಲ ಹಂತದ ಸಸ್ಯ ನಾಟಿ ಮುಗಿದು ಔಷಧವನ ಸುಂದರವಾಗಿ ರೂಪುಗೊಂಡಿದೆ. ಆರೂವರೆ ಎಕ್ರೆ ಪ್ರದೇಶದ ಈ ವನದಲ್ಲಿ ಅರ್ಧದಷ್ಟು ಜಾಗ ಇನ್ನೂ ಖಾಲಿ ಇದೆ. ಅದರಲ್ಲೂ ಪಾದಚಾರಿ ಪಥ, ಸುಂದರ ವನ, ಔಷಧ ವನ ಮೊದಲಾದವುಗಳನ್ನು ನಿರ್ಮಿಸುವ ಉದ್ದೇಶವಿದೆ. ಅರಣ್ಯ ಇಲಾಖೆಯಿಂದ ಎರಡನೇ ಹಂತದ ಅಭಿವೃದ್ಧಿ ಕಾರ್ಯ ಮಾಡಲಾಗುವುದು. ಮೈಂದನಡ್ಕ ಪ್ರದೇಶದ ಸಮೀಪದಲ್ಲಿರುವ ಪ್ರಾಚೀನ ಕೆರೆಯೊಂದನ್ನು ಅರಣ್ಯ ಇಲಾಖೆ ಅನುದಾನದಲ್ಲೇ ಅಭಿವೃದ್ಧಿ ಪಡಿಸಲಾಗುವುದು ಎಂದವರು ತಿಳಿಸಿದರು.

ರಸ್ತೆಗಳ ಅಭಿವೃದ್ಧಿ
ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಪಡುಮಲೆ ಪ್ರದೇಶದ ಅಭಿವೃದ್ಧಿಯ ಜತೆಗೆಯೇ ಅಲ್ಲಿನ ರಸ್ತೆಗಳ ಅಭಿವೃದ್ಧಿಯೂ ನಡೆಯುತ್ತಿದೆ. ಎರಡನೇ ಹಂತದಲ್ಲಿ ರಸ್ತೆ ಅಭಿವೃದ್ಧಿಗೆ ಇನ್ನಷ್ಟು ಒತ್ತು ನೀಡಲಾಗುವುದು ಎಂದರು.

ಜಾಗ ಬಿಟ್ಟುಕೊಡದಿದ್ದರೆ ಅನುದಾನ ಅಸಾಧ್ಯ
ದೇಯಿ ಬೈದ್ಯೆತಿ, ಕೋಟಿ – ಚೆನ್ನಯರ ಬದುಕಿನ ಪ್ರಮುಖ ಕುರುಹುಗಳಿರುವ ಪ್ರದೇಶಗಳು ಖಾಸಗಿ ಜಮೀನುಗಳಲ್ಲಿವೆ. ಅವುಗಳನ್ನು ಸರಕಾರಕ್ಕೆ ಬಿಟ್ಟು ಕೊಟ್ಟರೆ ಅಲ್ಲಿ ಅಭಿವೃದ್ಧಿ ಕಾರ್ಯ ನಡೆಸಲು ಸಾಧ್ಯ. ಆದರೆ ಖಾಸಗಿ ಜಮೀನು ನೀಡಲು ಮಾಲಕರು ಸಿದ್ಧರಿಲ್ಲ. ಹಾಗಾಗಿ ಅಲ್ಲಿಗೆ ಸರಕಾರದ ದುಡ್ಡು ಕೊಡಲೂ ಸಾಧ್ಯವಾಗುವುದಿಲ್ಲ. ಶಂಖಪಾಲ ಬೆಟ್ಟ ಪ್ರದೇಶ ಸರಕಾರದ ವಶದಲ್ಲಿರುವ ಕಾರಣ ಅಲ್ಲಿ ಉತ್ತಮ ಪ್ರವಾಸಿ ಕೇಂದ್ರವನ್ನು ಕೋಟಿ -ಚೆನ್ನಯರ ಹೆಸರಿನಲ್ಲಿ ನಿರ್ಮಿಸಲಾಗುವುದು. ಈ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿ ಪ್ರಮೀಳಾ ಅವರಿಗೆ ಇದರ ಉಸ್ತುವಾರಿ ವಹಿಸಲಾಗಿದ್ದು, ಅವರ ಮೂಲಕ ಈ ಕೆಲಸ ನಡೆಯ ಲಿವೆ. ಡಿಸೆಂಬರ್‌ ಹೊತ್ತಿಗೆ ಮೊದಲ ಹಂತದ ಕೆಲಸ ಮುಗಿಸುವ ಗುರಿ ಇದೆ. 

– ರಮಾನಾಥ ರೈ, ದ.ಕ.ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.